ಪತ್ನಿ ಜೈಲರ್ ಆಗಿರೋ ಜೈಲಲ್ಲೇ ಆರೋಪಿ ಡಿವೈಎಸ್ಪಿ ಪತಿಗೆ ಕಂಬಿ ಎಣಿಸೋ ಗತಿ!

Published : May 14, 2022, 12:19 AM ISTUpdated : May 14, 2022, 12:21 AM IST
ಪತ್ನಿ ಜೈಲರ್ ಆಗಿರೋ ಜೈಲಲ್ಲೇ ಆರೋಪಿ ಡಿವೈಎಸ್ಪಿ ಪತಿಗೆ ಕಂಬಿ ಎಣಿಸೋ ಗತಿ!

ಸಾರಾಂಶ

ಪಿಎಸ್‍ಐ ಪರೀಕ್ಷೆ ಅಕ್ರಮದಲ್ಲಿ ಆರೋಪಿಯಾಗಿರುವ ಕೆಎಸ್‍ಆರ್ಪಿ ಅಸಿಸ್ಟೆಂಟ್ ಕಮಾಂಡೆಂಟ್ ಸೇವೆಯಿಂದ ಅಮಾನತುಗೊಂಡಿದ್ದು, ಸೆಂಟ್ರಲ್ ಜೈಲ್‍ಗೆ ಶಿಫ್ಟ್ ಆಗಿದ್ದಾರೆ. ಇದೇ ಜೈಲಲ್ಲಿ ಅವರ ಪತ್ನಿ ಜೈಲರ್ ಆಗಿ ಕಾರ್ಯ ನಿರ್ವಹಿಸುತ್ತಿರುವುದು ಮಾತ್ರ ವಿಪರ್ಯಾಸ

ಕಲಬುರಗಿ (ಮೇ. 13) ರಾಜ್ಯದಲ್ಲಿ ಸಂಚಲನ ಮೂಡಿಸಿರುವ ಪಿಎಸ್‍ಐ ಪರೀಕ್ಷಾ ಅಕ್ರಮದಲ್ಲಿ (PSI recruitment Scam) ಭಾಗಿಯಾಗಿದ್ದ ಕೆಎಸ್‍ಆರ್ಪಿ (KSRP)ಅಸಿಸ್ಟೆಂಟ್ ಕಮಾಂಡೆಂಟ್ ಅನ್ನು ಸೇವೆಯಿಂದ ಅಮಾನತುಗೊಳಿಸಿ ಎಡಿಜಿಪಿ (ADJP) ಇಂದು ಆದೇಶ ಹೊರಡಿಸಿದ್ದಾರೆ. ಇದಲ್ಲದೆ ಇಂದು ಡಿವೈಎಸ್ಪಿ ವೈಜನಾಥ್ (DySP Vaijanath ) ಜೈಲ್‍ಗೆ ಶಿಫ್ಟ್ ಆಗಿದ್ದಾರೆ.

ಅವರಿಗೆ ಸಿಐಡಿ ವಿವಿಧೆಡೆ ಹಣಕಾಸು ವ್ಯವಹಾರ ನಡೆಸಿದ್ದರ ಸ್ಥಳ ಮಹಜರಿಗೆಂದು ಕರೆದುಕೊಂಡು ನಗರ, ಹೊರವಲಯದ ರಿಂಗ್ ರಸ್ತೆ, ಆರ್ ಡಿ ಪಾಟೀಲ್ ಭೇಟಿ ಮಾಡಿದಂತಹ ಸ್ಥಳಗಳಿಗೆ ಕರೆದೊಯ್ದು ಮಹಜರು ಮಾಡಿದ್ದು ಕಸ್ಟಡಿ ಅಂತ್ಯಗೊಂಡಿದ್ದರಿಂದ ಜೈಲಿಗೆ ಶಿಫ್ಟ್ ಮಾಡಿದೆ.

ಕಲಬುರಗಿ ಕೇಂದ್ರ ಕಾರಾಗೃಹಕ್ಕೆ (Kalaburagi Jail ) ಡಿವೈಎಸ್ಪಿ ರ್ಯಾಂಕ್‍ನ ಕೆಎಸ್ಸಾರ್ಪಿ ಸಹಾಯಕ ಕಮಾಂಡೆಂಟ್ ವೈಜನಾಥ ರೇವೂರ್ ಇವರನ್ನು ಸ್ಥಳಾಂತರಿಸಲಾಗಿದ್ದು ಅದೇ ಜೈಲಲ್ಲಿ ಇವರ ಪತ್ನಿ ಸುನಂದಾ ರೇವೂರ್ (Sunadra Revoor) ಜೈಲರ್ ಆಗಿದ್ದಾರೆ. 

ಈಗಾಗಲೇ ಹಗರದಲ್ಲಿ ಪ್ರಮಮುಖ ಆರೋಪಿಗಳಾಗಿ ಜೈಲಲ್ಲಿರುವ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ಹೆಡ್‍ಮಾಸ್ಟರ್ ಕಾಶಿನಾಥ್ ಸೇರಿದಂತೆ ಹಲವರ ಭದ್ರತೆ ಯೋಗಕ್ಷೇಮ ಹೊಣೆ ಹೊತ್ತಿರುವ ಸುನಂದಾ ಅವರೇ ತಮ್ಮ ಡಿವೈಎಸ್ಪಿ ರ್ಯಾಂಕ್‍ನ ಪತಿಯವರನ್ನು ಜೈಲಿನ ಕಂಬಿಗಳ ಹಿಂದೆ ತಳ್ಳುವ ಅನಿವಾರ್ಯತೆ ಇಂದು ಎದುರಿಸಿದರು.

ಇನ್ನೊಂದೆಡೆ,  ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಹಗರಣ ಸಂಬಂಧ ರಾಜ್ಯ ಅಪರಾಧ ತನಿಖಾ ದಳವು (CID) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪರೀಕ್ಷಾ ಅಕ್ರಮ ಜಾಲದ ‘ಮಾಸ್ಟರ್‌ ಮೈಂಡ್‌’ ಎನ್ನಲಾದ ನೇಮಕಾತಿ ವಿಭಾಗದ ಹಿಂದಿನ ಡಿವೈಎಸ್ಪಿ ಶಾಂತಕುಮಾರ್‌(Shantkumar) ಸೇರಿದಂತೆ ಇಬ್ಬರನ್ನು ಗುರುವಾರ ಬಂಧಿಸಿದೆ.

ಡಿವೈಎಸ್ಪಿ ಶಾಂತಕುಮಾರ್‌ ಬಂಧನ ಬೆನ್ನಲ್ಲೇ ಈಗ ನೇಮಕಾತಿ ವಿಭಾಗದ ಹಿಂದಿನ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಅಮೃತ್‌ ಪಾಲ್‌ ಅವರಿಗೆ ಭೀತಿ ಹೆಚ್ಚಿದ್ದು, ಪ್ರಕರಣದಲ್ಲಿ ಆರೋಪಿತ ಡಿವೈಎಸ್ಪಿ ನೀಡುವ ಅಧಿಕೃತ ಹೇಳಿಕೆ ಆಧರಿಸಿ ಮುಂದಿನ ‘ಬೇಟೆ’ ಬಗ್ಗೆ ಸಿಐಡಿ ಅಧಿಕಾರಿಗಳು ನಿರ್ಧರಿಸಲಿದ್ದಾರೆ. ಅಲ್ಲದೆ ಈ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಬಂಧಿತರ ಸಂಖ್ಯೆ ಆರಕ್ಕೇರಿದೆ.

ಪಿಎಸ್‌ಐ ಪರೀಕ್ಷೆ ಬರೆದಿದ್ದ ಕೆಲ ಅಭ್ಯರ್ಥಿಗಳ(Candidates) ಒಎಂಆರ್‌ ಶೀಟ್‌(OMR Sheet) ಅನ್ನು ನೇಮಕಾತಿ ವಿಭಾಗದ ಸ್ಟ್ರಾಂಗ್‌ರೂಮ್‌ನಲ್ಲಿ ತಿದ್ದಿದ ಹಾಗೂ ಪರೀಕ್ಷೆಗೂ ಮುನ್ನ ತಮ್ಮ ಸಂಪರ್ಕದಲ್ಲಿದ್ದ ಅಭ್ಯರ್ಥಿಗಳು ಒಂದೇ ಕಡೆ ಇರುವಂತೆ ಅಕ್ರಮವಾಗಿ ಪರೀಕ್ಷಾ ಪ್ರವೇಶ ಪತ್ರಗಳನ್ನು (ಹಾಲ್‌ ಟಿಕೆಟ್‌) ವಿತರಿಸಿದ ಗಂಭೀರ ಆರೋಪ ಶಾಂತಕುಮಾರ್‌ ಮೇಲೆ ಬಂದಿತ್ತು. ಪರೀಕ್ಷೆ ಮುಗಿದ ಬಳಿಕ ನೇಮಕಾತಿ ವಿಭಾಗದ ಸ್ಟ್ರಾಂಗ್‌ ರೂಮ್‌ನಲ್ಲಿ ಇಡಲಾಗಿದ್ದ ಒಎಂಆರ್‌ ಶೀಟ್‌ಗಳ ಪೈಕಿ ತಮಗೆ ಹಣ ಸಂದಾಯ ಮಾಡಿದ್ದವರ ಉತ್ತರ ಪತ್ರಿಕೆಯನ್ನು ಡಿವೈಎಸ್ಪಿ ತಂಡ ತಿದ್ದಿ ಸಹಕರಿಸಿತ್ತು ಎಂದು ಮೂಲಗಳು ಹೇಳಿವೆ.

PSI Recruitment Scam: ಶಾಂತಿಬಾಯಿ-ಬಸ್ಸು ನಾಯಕ್‌ ದಂಪತಿಗೆ ಸಿಐಡಿ ಹುಡುಕಾಟ

ತಮಗೆ ಹಣ ಕೊಟ್ಟ ಅಭ್ಯರ್ಥಿಗಳು ಒಂದೇ ಕಡೆ ಇರುವಂತೆ ಹಾಲ್‌ ಟಿಕೆಟ್‌ ಹಂಚಿಕೆ ಹಾಗೂ ಪರೀಕ್ಷೆ ಮುಗಿದ ಬಳಿಕ ಆ ಅಭ್ಯರ್ಥಿಗಳ ಒಎಂಆರ್‌ ಶೀಟ್‌ಗಳನ್ನು ಸ್ಟ್ರಾಂಗ್‌ ರೂಮ್‌ನಲ್ಲಿ ಶಾಂತಕುಮಾರ್‌ ತಿದ್ದಿ ನೆರವಾಗಿದ್ದರು. ಇದಕ್ಕಾಗಿ ತಲಾ ಅಭ್ಯರ್ಥಿಯಿಂದ 30 ರಿಂದ 40 ಲಕ್ಷ ರು ಸುಲಿಗೆ ಮಾಡಿದ್ದರು ಎಂಬ ಆರೋಪ ಬಂದಿದೆ.

PSI Scam: ಆರೋಪಿಗಳ ವಿಚಾರಣೆಯಲ್ಲಿ ಬಯಲಾಯ್ತು ಅಭ್ಯರ್ಥಿಗಳ ಡೀಲ್ ರೇಟ್ ಪುರಾಣ!

ಈ ಪ್ರಕರಣ ಸಂಬಂಧ ನೋಟಿಸ್‌ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಡಿವೈಎಸ್ಪಿ ಶಾಂತಕುಮಾರ್‌ ಹಾಗೂ ಅವರ ಆಪ್ತ ನಗರ ಸಶಸ್ತ್ರ ಮೀಸಲು ಪಡೆಯ (RSI) ಸಬ್‌ ಇನ್ಸ್‌ಪೆಕ್ಟರ್‌ ಲೋಕೇಶಪ್ಪ ಅವರನ್ನು ಸುದೀರ್ಘವಾಗಿ ವಿಚಾರಣೆ ನಡೆಸಿದ ಸಿಐಡಿ, ಕೊನೆಗೆ ಇಬ್ಬರನ್ನೂ ಬಂಧನಕ್ಕೊಳಪಡಿಸಿತು. ನಂತರ ಮಧ್ಯಾಹ್ನ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೆಚ್ಚಿನ ತನಿಖೆ ಸಲುವಾಗಿ 9 ದಿನ ವಶಕ್ಕೆ ಪಡೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಉಡುಪಿ: ಧರ್ಮ-ಸಂವಿಧಾನ ಬೇರೆಯಲ್ಲ:-ಪವನ್ ಕಲ್ಯಾಣ ಬಣ್ಣನೆ
ಪಬ್ಬಲ್ಲಿ ಮೊಬೈಲ್‌ ತರಲುಹೋದ ಕನ್ನಡಿಗ ಬಲಿ, ಗೋವಾ ಪಬ್ ದುರಂತಕ್ಕೆ ಕಾರಣವೇನು?