ಪಿಎಸ್‌ಐ ಅಕ್ರಮ: ಮರು ಪರೀಕ್ಷೆ ನಡೆಸುವ ಕುರಿತು ಜು.5ಕ್ಕೆ ತಿಳಿಸಿ: ಹೈಕೋರ್ಟ್

Published : Jun 28, 2023, 02:14 AM IST
ಪಿಎಸ್‌ಐ ಅಕ್ರಮ: ಮರು ಪರೀಕ್ಷೆ ನಡೆಸುವ ಕುರಿತು ಜು.5ಕ್ಕೆ ತಿಳಿಸಿ: ಹೈಕೋರ್ಟ್

ಸಾರಾಂಶ

ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಅಕ್ರಮ ಪ್ರಕರಣದ ಆರೋಪ ಪಟ್ಟಿಯಲ್ಲಿ ಹೆಸರಿರುವ ಕಳಂಕಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆ ಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗೆ ಪುನಃ ಪರೀಕ್ಷೆ ನಡೆಸುವ ಸಾಧ್ಯತೆ ಕುರಿತು ಸ್ಪಷ್ಟನಿರ್ಧಾರ ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಜುಲೈ 5ರವರೆಗೆ ಸಮಯಾವಕಾಶ ನೀಡಿದೆ.

ಬೆಂಗಳೂರು (ಜೂ.28) : ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಅಕ್ರಮ ಪ್ರಕರಣದ ಆರೋಪ ಪಟ್ಟಿಯಲ್ಲಿ ಹೆಸರಿರುವ ಕಳಂಕಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಆಯ್ಕೆ ಪಟ್ಟಿಯಲ್ಲಿರುವ ಉಳಿದ ಅಭ್ಯರ್ಥಿಗಳಿಗೆ ಪುನಃ ಪರೀಕ್ಷೆ ನಡೆಸುವ ಸಾಧ್ಯತೆ ಕುರಿತು ಸ್ಪಷ್ಟನಿರ್ಧಾರ ತಿಳಿಸಲು ಸರ್ಕಾರಕ್ಕೆ ಹೈಕೋರ್ಟ್ ಜುಲೈ 5ರವರೆಗೆ ಸಮಯಾವಕಾಶ ನೀಡಿದೆ.

ನೇಮಕಾತಿಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸಲು ಹಿಂದಿನ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಪಟ್ಟಿಯಲ್ಲಿ ಹೆಸರಿದ್ದ 100ಕ್ಕೂ ಹೆಚ್ಚು ಅಭ್ಯರ್ಥಿಗಳು ಸಲ್ಲಿಸಿದ್ದ ಹಲವು ಅರ್ಜಿಗಳು ನ್ಯಾಯಮೂರ್ತಿ ಜಿ. ನರೇಂದರ್‌ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿದ್ದವು.

ಹುದ್ದೆಯೇ ಇಲ್ಲದೆಡೆ 5 ಸಬ್‌ ರಿಜಿಸ್ಟ್ರಾರ್‌ಗಳ ಕೆಲಸ: ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

ವಿಚಾರಣೆಗೆ ಸರ್ಕಾರ ಪರ ಹಾಜರಾದ ರಾಜ್ಯ ಅಡ್ವೋಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಅರ್ಜಿ ಸಂಬಂಧ ಜೂ.15ರಂದು ಹೈಕೋರ್ಚ್‌ ಸೂಚಿಸಿರುವಂತೆ ಆರೋಪಪಟ್ಟಿಯಲ್ಲಿ ಹೆಸರು ಇರದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸುವ ಸಾಧ್ಯತೆ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ. ಈ ಕುರಿತ ಸ್ಪಷ್ಟನಿರ್ಧಾರ ತಿಳಿಸಲು ಸ್ವಲ್ಪ ಕಾಲಾವಕಾಶ ನೀಡಬೇಕೆಂದು ಕೋರಿದರು.

ಆ ಮನವಿ ಪರಿಗಣಿಸಿದ ನ್ಯಾಯಪೀಠ, ಸರ್ಕಾರಕ್ಕೆ ಜು.5ರವರೆಗೆ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಜೂ.15ರಂದು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಚ್‌, 545 ಪಿಎಸ್‌ಐ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಲ್ಲಿ ಆರೋಪ ಪಟ್ಟಿಯಲ್ಲಿ ಹೆಸರಿರುವವರನ್ನು ಹೊರತುಪಡಿಸಿ ಉಳಿದವರಿಗೆ ಮಾತ್ರ ಪರೀಕ್ಷೆ ನಡೆಸಲು ಹಾಗೂ ಆ ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಅವರನ್ನು ಹುದ್ದೆಗೆ ಪರಿಗಣಿಸಲು ಸಾಧ್ಯವಿದೆಯೇ ಎಂಬ ಬಗ್ಗೆ ಸ್ಪಷ್ಟನಿಲುವು ತಿಳಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಮೇಕೆ ಜಗಳದಲ್ಲಿ ವೃದ್ಧೆ ‘ಕೊಂದ’ವಳಿಗೆ ಹೈಕೋರ್ಟ್ ಕ್ಷಮಾದಾನ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!