
ಬೆಂಗಳೂರು : ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕಾರು ಹಾಗೂ ಬೆಂಗಾವಲು ಪಡೆ ವಾಹನಗಳ ಸಂಚಾರಕ್ಕಾಗಿ ಪೊಲೀಸರು ರಸ್ತೆ ವಿಭಜಕವನ್ನೇ (ಡಿವೈಡರ್) ತೆರವುಗೊಳಿಸಿದ ಘಟನೆ ಗುರುವಾರ ನಡೆದಿದೆ.
ಖುದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಯಸದೇ ಇದ್ದರೂ, ಸಮಾರಂಭದ ಆಯೋಜಕರೂ ಕೋರದೆ ಇದ್ದರೂ ಸಿಎಂ ಅವರ ಸುಗಮ ಸಂಚಾರಕ್ಕಾಗಿ ರಸ್ತೆ ವಿಭಜಕವನ್ನು ತೆರವುಗೊಳಿಸಿದ್ದು ಸಾರ್ವಜನಿಕರಿಂದ ಟೀಕೆಗೆ ಒಳಗಾಯಿತು.
ಗುರುವಾರ ನಿಮ್ಹಾನ್ಸ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ನಿಮ್ಹಾನ್ಸ್ ಮುಂಭಾಗದ ರಸ್ತೆಯುದ್ದಕ್ಕೂ ಡಿವೈಡರ್ ಇದ್ದಿದ್ದರಿಂದ ಡೈರಿ ವೃತ್ತದಲ್ಲಿ ‘ಯು’ ತಿರುವು ಪಡೆದೇ ವಾಪಸ್ ಬರಬೇಕಿತ್ತು.
ಹಾಗಾಗಿ ಶಾಂತಿನಗರ ಕಡೆಯಿಂದ ಬಂದ ಮುಖ್ಯಮಂತ್ರಿ ಅವರ ಕಾರು ಮತ್ತು ಬೆಂಗಾವಲು ವಾಹನಗಳು ನಿಮ್ಹಾನ್ಸ್ ಆವರಣಕ್ಕೆ ನೇರವಾಗಿ ತೆರಳಲು ಅನುವಾಗುವಂತೆ ನಿಮ್ಹಾನ್ಸ್ ಮುಖ್ಯದ್ವಾರದ ಮುಂಭಾಗದ ರಸ್ತೆಯ ಡಿವೈಡರ್‌ಅನ್ನೇ ತೆರವುಗೊಳಿಸಲಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ