
ಬೆಳ್ತಂಗಡಿ (ಏ.20): ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಶನಿವಾರ ಸಂಜೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿಸಿ ಭಾಷಣ ಮಾಡುವ ಹಿನ್ನೆಲೆಯಲ್ಲಿ ಕಾರ್ಯಕ್ರಮ ವೀಕ್ಷಿಸಲು ಪುನೀತ್ ಕೆರೆಹಳ್ಳಿ ಬರುತ್ತಿದ್ದಾಗ, ಅವರನ್ನು ಬೆಳ್ತಂಗಡಿ ಪೊಲೀಸರು ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡಹಾಕಿ ಹಿಂದಕ್ಕೆ ಕಳುಹಿಸಿದ್ದಾರೆ.
ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರು ಹಾಗೂ ಪುನೀತ್ ಕೆರಹಳ್ಳಿ ಬೆಂಬಲಿಗರ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಮಾತಿನ ಸಮರ ನಡೆದಿತ್ತು. ಪುನೀತ್ ಕೆರಹಳ್ಳಿ ಉಜಿರೆಗೆ ಬಂದರೆ ಗಲಭೆಯಾಗುವ ಸಾಧ್ಯತೆಯಿತ್ತು. ಇದನ್ನು ಗಮನಿಸಿದ ಬೆಳ್ತಂಗಡಿ ಪೊಲೀಸರು ಪುನೀತ್ ಕೆರೆಹಳ್ಳಿ ಉಜಿರೆಗೆ ಪ್ರವೇಶ ನಿಷೇಧಿಸಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.ಶನಿವಾರ ತನ್ನ ಬೆಂಬಲಿಗರೊಂದಿಗೆ ಆಗಮಿಸಿದ ಪುನೀತ್ ಕೆರಹಳ್ಳಿ ಅವರನ್ನು ಪೊಲೀಸರು ತಡೆದಿದ್ದು, ಈ ವೇಳೆ ಮಾತಿನ ಚಕಮಕಿ ನಡೆಯಿತು. ಕೊನೆಗೆ ಪೊಲೀಸರು ಪುನೀತ್ ಹಾಗೂ ತಂಡವನ್ನು ಹಿಂದಕ್ಕೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಪುನೀತ್ ಕೆರೆಹಳ್ಳಿ ಬರುವ ಮಾಹಿತಿ ತಿಳಿದು ಮಹೇಶ್ ಶೆಟ್ಟಿ ಬೆಂಬಲಿಗರು ಉಜಿರೆಯಲ್ಲಿ ಜಮಾಯಿಸಿದ್ದರು. ಪೊಲೀಸರು ಅತ್ಯಂತ ಚಾಣಾಕ್ಷತನದಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪರಿಸ್ಥಿತಿ ನಿಭಾಯಿಸಿದ್ದಾರೆ.
ಇದನ್ನೂ ಓದಿ: ಹಿಂದೂಗಳ ನಿರಾಶ್ರಿತ ಕೇಂದ್ರ ಬಂಧನ ಕೇಂದ್ರವಾಗಿ ಬದಲು! ಮಮತಾ ಸರ್ಕಾರದಿಂದ ಅಮಾನವೀಯ ವರ್ತನೆ !
ಮಾತಿನ ಚಕಮಕಿ
ಉಜಿರೆಯಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ವತಿಯಿಂದ ಶನಿವಾರ ಆಯೋಜಿಸಲಾಗಿದ್ದ ರಾಮೋತ್ಸವ ಕಾರ್ಯಕ್ರಮ ವೀಕ್ಷಿಸಲು ಪುನೀತ್ ಕೆರೆಹಳ್ಳಿ ಬರುತ್ತಿದ್ದ ವೇಳೆ ಬಂಟ್ವಾಳ ಪೊಲೀಸ್ ಉಪ ಅಧೀಕ್ಷಕ ಎಸ್. ವಿಜಯ ಪ್ರಸಾದ್ ಮತ್ತು ತಂಡ ಉಜಿರೆಯ ಕಾಲೇಜ್ ರಸ್ತೆಯಲ್ಲಿ ಅಡ್ಡ ಹಾಕಿ, ದ.ಕ. ಪ್ರವೇಶ ನಿಷೇಧ ಮಾಡಿದ ಜಿಲ್ಲಾಧಿಕಾರಿ ಆದೇಶ ತೋರಿಸಿ ತಡೆದು ವಾಪಸ್ ಹೋಗುವಂತೆ ಮನವಿ ಮಾಡಿದರು. ಈ ಸಂದರ್ಭ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ ಕಾರಣ ಮಾತಿನ ಚಕಮಕಿ ನಡೆಯಿತು. ಇದಕ್ಕೂ ಮೊದಲು ಪುನೀತ್ ಅವರು ಕಾರಿನ ಮೇಲೆ ನಿಂತು ತಾಕತ್ತಿದ್ದರೆ ತನ್ನನ್ನು ತಡೆಯುವಂತೆ ಸವಾಲು ಹಾಕಿದ್ದರು.
ಉಜಿರೆ ಪೇಟೆಯಲ್ಲಿ ಕೆಲ ಕಾಲ ಪ್ರಕ್ಷುಬ್ದ ವಾತಾವತರಣ ಕಂಡು ಬಂತು. ಪೊಲೀಸರ ಸಕಾಲಿಕ ನಡವಳಿಕೆಯಿಂದ ಯಾವುದೇ ಅಹಿತಕರ ಘಟನೆ ನಡೆಯಲಿಲ್ಲ. ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ