
ಹೊಸಪೇಟೆ (ಮಾ.18): ಪವರ್ ಸ್ಟಾರ್ ಡಾ. ಪುನೀತ್ ರಾಜಕುಮಾರ ಅವರ ಜನ್ಮದಿನವನ್ನು ಸೋಮವಾರ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಅಭಿಮಾನಿಗಳು ವಿಶೇಷ ಪೂಜೆ, ಕೇಕ್ ಕತ್ತರಿಸಿ, ಬಿರಿಯಾನಿ ವಿತರಿಸುವ ಮೂಲಕ ಆಚರಿಸಿದರು.
ಇಲ್ಲಿನ ಪುನೀತ್ ರಾಜಕುಮಾರ್ ವೃತ್ತದಲ್ಲಿರುವ ಅಪ್ಪು ಪುತ್ಥಳಿಗೆ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ, ಬಳಿಕ ಬರೋಬ್ಬರಿ 25 ಕೆಜಿ ತೂಕದ ಕೇಕ್ ಕತ್ತರಿಸಿ ಅಪ್ಪುಗೆ ಜೈಕಾರ ಕೂಗಿದರು. ನಂತರ ಅಭಿಮಾನಿಗಳು ಅಪ್ಪುಗೆ ಇಷ್ಟವಾದ ಬಿರಿಯಾನಿ, ಅನ್ನದಾಸೋಹ ಮಾಡಿದರು.
ಡಿವೈಎಸ್ಪಿ ಡಾ. ತಳವಾರ ಮಂಜುನಾಥ ಅನ್ನಸಂತರ್ಪಣೆಗೆ ಚಾಲನೆ ನೀಡಿದರು. ನೆಚ್ಚಿನ ನಟನ ಜನ್ಮದಿನ ಆಚರಣೆ ಹಿನ್ನೆಲೆ ಸುತ್ತಮುತ್ತಲಿನ ವಿವಿಧ ಹಳ್ಳಿಗಳಿಂದ ಬಂದಿದ್ದ ನೂರಾರು ಅಭಿಮಾನಿಗಳು ಚಿಕನ್, ಪಲಾವ್, ಬದನೆಕಾಯಿ ಪಲ್ಯ, ನುಗ್ಗೇಕಾಯಿ ಸಾಂಬಾರ್ ಸವಿದರು.
ಇದನ್ನೂ ಓದಿ: ಕೊನೆವರೆಗೂ ಅಪ್ಪಾಜಿ ಅವ್ರ ಸೊಂಟದ ಅಳತೆ 32 ಇತ್ತು, ಅವರ ಫಿಟ್ನೆಸ್‌ಗೆ ನಾನು ಫ್ಯಾನ್ಸ್: ಪುನೀತ್ ಹಳೆ ವಿಡಿಯೋ ವೈರಲ್
ಅಪ್ಪು ಇಷ್ಟದ ಬಿರಿಯಾನಿ ಸವಿಯಲು ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತಿದ್ದರು. ಇದೇ ವೇಳೆ ಅಪ್ಪು ಜನ್ಮದಿನದ ನಿಮಿತ್ತ ರಕ್ತದಾನ ಶಿಬಿರವನ್ನೂ ಆಯೋಜಿಸಲಾಗಿತ್ತು. ಅಭಿಮಾನಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.
ಪಟ್ಟಣ ಠಾಣೆಯ ಸಿಪಿಐ ಲಖನ್ ಆರ್. ಮಸಗುಪ್ಪಿ ಕೇಕ್ ಕತ್ತರಿಸಿದರು. ಅಪ್ಪು ಜನ್ಮದಿನದ ಹಿನ್ನೆಲೆ ಬೆಳಗ್ಗೆಯಿಂದಲೇ ಅಪ್ಪು ಪುತ್ಥಳಿ ಎದುರು ನೂರಾರು ಅಭಿಮಾನಿಗಳು ಜಮಾಯಿಸಿದ್ದರು. ಸಂಜೆವರೆಗೆ ಪುತ್ಥಳಿ ಬಳಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು.
ಪುನೀತ್ ರಾಜ್‌ಕುಮಾರ ತಂಗುದಾಣಕ್ಕೆ ಚಾಲನೆ:
ಇಲ್ಲಿನ ಡಾ. ಪುನೀತ್ ರಾಜಕುಮಾರ್ ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ತಂಗುದಾಣ ಉದ್ಘಾಟನಾ ಸಮಾರಂಭ ನಡೆಯಿತು. ಅಪ್ಪು ಯೂತ್ ಬ್ರಿಗೇಡ್ ವತಿಯಿಂದ ನಡೆದ ಕಾರ್ಯಕ್ರಮವನ್ನು
ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್ ಚಿಕ್ಕ ಗಿಫ್ಟ್ ಇಷ್ಟ ಪಡ್ತಾ ಇರ್ಲಿಲ್ಲ ಎಲ್ಲಾ ದೊಡ್ಡದಾಗಿ ಕೊಡಬೇಕು: ಸಹೋದರಿ ಲಕ್ಷ್ಮಿ
ಶಾಸಕ ಎಚ್. ಆರ್. ಗವಿಯಪ್ಪ ಕೇಕ್ ಕಟ್ ಮಾಡುವುದರ ಮೂಲಕ ಉದ್ಘಾಟಿಸಿದರು. ಹುಡಾ ಅಧ್ಯಕ್ಷ ಎಚ್. ಎನ್. ಮಹಮ್ಮದ್ ಇಮಾಮ್ ನಿಯಾಜಿ, ನಗರಸಭೆ ಅಧ್ಯಕ್ಷ ರೂಪೇಶ್ ಕುಮಾರ್, ಉಪಾಧ್ಯಕ್ಷ ರಮೇಶ್ ಗುಪ್ತ ಹಾಗೂ ನಗರಸಭೆ ಸದಸ್ಯರು, ಅಪ್ಪು ಯೂತ್ ಬ್ರಿಗೇಡ್‌ನ ಪದಾಧಿಕಾರಿಗಳು ಇದ್ದರು. ನಗರ ಸೇರಿದಂತೆ ಕಮಲಾಪುರ ಮತ್ತು ಜಿಲ್ಲೆಯ ಇತರೆಡೆ ಕೂಡ ಡಾ. ಪುನೀತ್ ರಾಜ್‌ಕುಮಾರ ಅಭಿಮಾನಿಗಳು ಅಪ್ಪು ಜನ್ಮದಿನ ಆಚರಿಸಿದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ