
ಶಿವಮೊಗ್ಗ (ನ.13): ಕರ್ನಾಟಕ ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕಗೊಂಡಿರುವ ಹಿನ್ನೆಲೆ 'ಪುತ್ತಿಲ ಪರಿವಾರ'ನಾಯಕರು ಶಿವಮೊಗ್ಗದ ನಿವಾಸಕ್ಕೆ ತೆರಳಿ ಭೇಟಿ ಮಾಡಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸಿಡಿದೆದ್ದ'ಪುತ್ತಿಲ ಪರಿವಾರ' ನಾಯಕರು ಇದೀಗ ವಿಜಯೇಂದ್ರರನ್ನು ಭೇಟಿ ಮಾಡುವ ಮೂಲಕ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಸೃಷ್ಟಿ ಮಾಡಿದೆ.
ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಮಾಡ್ತಾ ನೇತೃತ್ವದ ತಂಡ ಭೇಟಿ. ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಮಠ, ಸುಧೀಶ್ ಶೆಟ್ಟಿ ಕಂಪರಿಂದ ಭೇಟಿ. ಭೇಟಿ ವೇಳೆ ವಿಜಯೇಂದ್ರರಿಗೆ ಪುತ್ತೂರು ಮಹಾಲಿಂಗೇಶ್ವರ ದೇವರ ಬೆಳ್ಳಿಯ ಸ್ಮರಣಿಕೆ ನೀಡಿ ಗೌರವಿಸಿದ ನಾಯಕರು. ಕೆಲ ಕಾಲ ಪುತ್ತೂರಿನ ವಿದ್ಯಮಾನಗಳ ಬಗ್ಗೆ ವಿಜಯೇಂದ್ರಗೆ ಮಾಹಿತಿ ನೀಡಿದ ಪುತ್ತಿಲ ಪರಿವಾರ. ಈ ವೇಳೆ ಪುತ್ತೂರು ವಿದ್ಯಮಾನಗಳ ಬಗ್ಗೆ ಮಾಹಿತಿ ಇದೆ ಎಂದ ವಿಜಯೇಂದ್ರ.
ಪುತ್ತಿಲ ಪರಿವಾರ ಮುಖಂಡನ ಕೊಲೆ ಯತ್ನ: ಹಿಂದೂ ಸಂಘಟನೆಯ ದಿನೇಶ್ ಸಹಿತ 9 ಮಂದಿ ಬಂಧನ
ಅರುಣ್ ಪುತ್ತಿಲಗೆ ಬಿಜೆಪಿಯಲ್ಲಿ ಸ್ಥಾನಮಾನಗಳ ಬಗ್ಗೆ ಚರ್ಚೆ ಮುಂದಾಗಿದ್ದ ಪುತ್ತಿಲ ನಾಯಕರು. ಸದ್ಯಕ್ಕೆ ಆ ಬಗ್ಗೆ ಹೆಚ್ಚು ಚರ್ಚೆ ನಡೆಸದ ವಿಜಯೇಂದ್ರ. ಮುಂದಿನ ದಿನಗಳಲ್ಲಿ ಈ ಬಗ್ಗೆ ಗಮನ ಹರಿಸೋ ಭರವಸೆ ನೀಡಿದ್ದಾರೆನ್ನಲಾಗಿದೆ. ಸದ್ಯ ದ.ಕ ಲೋಕಸಭಾ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರೋ ಅರುಣ್ ಪುತ್ತಿಲ. ಆದರೆ ಅರುಣ್ ಪುತ್ತಿಲ ಅನುಪಸ್ಥಿತಿಯಲ್ಲಿ ವಿಜಯೇಂದ್ರರನ್ನು ಭೇಟಿ ಮಾಡಿರುವುದ ಪುತ್ತಿಲ ಪರಿವಾರದ ನಾಯಕರು. ಸದ್ಯದಲ್ಲೇ ಅರುಣ್ ಪುತ್ತಿಲ ಸಹ ವಿಜಯೇಂದ್ರ ಭೇಟಿಯಾಗಲಿದ್ದಾರೆ ಎಂದ ಪರಿವಾರದ ನಾಯಕರು. ಭೇಟಿ ವೇಳೆ ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನದ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಹೊಸ ಅಧ್ಯಕ್ಷರ ಮೂಲಕ ಮತ್ತೊಂದು ಸುತ್ತಿನ ಚರ್ಚೆಗೆ ನಿಂತ ಪುತ್ತಿಲ ಟೀಂ. ಭಾರೀ ಕುತೂಹಲ ಕೆರಳಿಸಿದ ಅರುಣ್ ಪುತ್ತಿಲ ಪರಿವಾರದ ನಡೆ.
ಪುತ್ತಿಲ ಕಚೇರಿ ಬಳಿ 'ತಲವಾರು' ಹಿಡಿದು ಸಂಘರ್ಷ: ವಾಟ್ಸಪ್ ಪೋಸ್ಟ್ ವಿವಾದ!
ಕಳೆದ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಡ್ಡು ಹೊಡೆದು ಚುನಾವಣೆಗೆ ಸ್ಪರ್ಧಿಸಿದ್ದ ಪುತ್ತಿಲ ಪರಿವಾರ. ಹೈಕಮಾಂಡ್ ಮನವೊಲಿಸುವ ಯತ್ನ ನಡೆಸಿದರೂ ಬಗ್ಗದೆ ಬಿಜೆಪಿ ವಿರುದ್ಧ ಸ್ಪರ್ಧಿಸಿದ್ದ ಪುತ್ತಿಲ ಪರಿವಾರದ ನಾಯಕರು. ಆದರೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕವಾಗ್ತಿದ್ದಂತೆ ಎಲ್ಲವೂ ಬದಲಾಗಿದೆ. ಪುತ್ತಿಲ ಪರಿವಾರದ ನಾಯಕರು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವುದು ಭಾರೀ ಸಂಚಲನ ಸೃಷ್ಟಿಸಿದೆ. ಮುಂದಿನ ಲೋಕಸಭಾ ಚುನಾವಣೆಗೆ ಆರುಣ್ ಪುತ್ತಿಲಗೆ ಬಿಜೆಪಿಯಿಂದಲೇ ಲೋಕಸಭಾ ಟಿಕೆಟ್ ಸಿಗುತ್ತದಾ? ಇಲ್ಲವಾ ಎಂಬುದು ಕುತೂಹಲ ಕೆರಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ