
ಬೆಂಗಳೂರು, (ಜು.13) : ಕೊರೋನಾ ವೈರಸ್ ಸೋಂಕಿನ ಪರೀಕ್ಷೆಗೆ ಮಾದರಿ ಕೊಟ್ಟಿರುವ ಜನರಿಗೆ ವರದಿ ಬರುವವರೆಗೂ ಐಸೋಲೇಷನ್/ಕ್ವಾರಂಟೈನ್ ಕಡ್ಡಾಯಗೊಳಿಸಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಸೋವಾರ ಈ ಕುರಿತು ಆದೇಶ ಹೊರಡಿಸಿದ್ದು. ಕೊರೋನಾ ವೈರಸ್ ಸೋಂಕಿನ ಪರೀಕ್ಷೆಗೆ ಮಾದರಿ ಕೊಟ್ಟಿದ್ದಲ್ಲಿ ಫಲಿತಾಂಶ ಬರುವವರೆಗೂ ಆ ವ್ಯಕ್ತಿ ಐಸೋಲೇಷನ್‌ನಲ್ಲಿರುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದೆ.
ಈ ಬಾರಿ ಲಾಕ್‌ಡೌನ್ ಫುಲ್ ಸ್ಟ್ರಿಕ್ಟ್; ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!
ಸ್ವಾಬ್ ಮಾದರಿ ಕೊಟ್ಟಿರುವ ವ್ಯಕ್ತಿ ವರದಿ ಬರುವುದಕ್ಕೂ ಮೊದಲು ಸಾರ್ವಜನಿಕ ಸ್ಥಳದಲ್ಲಿ ಸಂಚಾರ ನಡೆಸುವುದು, ಕಚೇರಿಗೆ ಹೋಗುವುದು, ಅನಗತ್ಯವಾಗಿ ತಿರುಗಾಡುವುದನ್ನು ಮಾಡುವಂತಿಲ್ಲ.
ಮಾದರಿ ಕೊಟ್ಟು ಫಲಿತಾಂಶ ಬರುವುದಕ್ಕೂ ಮೊದಲು ವ್ಯಕ್ತಿ ಐಸೋಲೇಷನ್ ನಿಮಯಗಳನ್ನು ಮೀರಿ ಸಂಚಾರ ನಡೆಸಿದರೆ ಸಾಂಕ್ರಾಮಿಕ ರೋಗಗಳ ಕಾಯಿದೆ 1897ರ ಅನ್ವಯ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮಗಳನ್ನಯ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.
ಶಂಕಿತರು ಕೊರೋನಾ ಪರೀಕ್ಷೆಗೆ ಮಾಡಿಸಿಕೊಂಡು ಬಳಿಕ ಎಲ್ಲೊಂದರಲ್ಲಿ ಸುತ್ತಾಡುತ್ತಿದ್ದಾರೆ. ಅದರಲ್ಲೂ ವರದಿಗಳು ತಡವಾಗಿ ಬರುತ್ತಿರುತ್ತಿರುವುದರಿಂದ ವ್ಯಕ್ತಯ ಸೋಂಕು ಹರಡುತ್ತಿದೆ. ಇದರಿಂದ ಈ ಆದೇಶವನ್ನು ಜಾರಿಗೆ ತರಲಾಗಿದೆ.
"
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ