
ಬೆಂಗಳೂರು(ಆ.18): ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧದ ತನಿಖೆಗೆ ರಾಜ್ಯಪಾಲರ ಅನು ಮತಿ ಬಿಜೆಪಿ ಪಾದಯಾತ್ರೆಗೆ ಸಿಕ್ಕ ಯಶಸ್ಸು ಎಂದು ಹೇಳಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ ಎಂದರು.
ಮುಡಾ ಹಗರಣ: ನಿಷ್ಪಕ್ಷಪಾತ ತನಿಖೆ ಅಗತ್ಯ, ಹೀಗಾಗಿ ಅನುಮತಿ, ರಾಜ್ಯಪಾಲ ಗೆಹಲೋತ್
ಬಿಎಸ್‌ವೈ ನಡೆ ಅನುಸರಿಸಿ:
ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ಆಗಿನ ಗೌರರ್ ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್ ಕೈವಾಡವಿತ್ತು ಎಂದರೆ, ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ