Dasara Controversy: ಬಾನು ದಸರಾ ಉದ್ಘಾಟನೆ ಮಾಡಿದ್ರೆ ಅವರ ಧರ್ಮದವರು ಸುಮ್ಮನಿರೋಲ್ಲ: ಆರ್ ಅಶೋಕ್

Kannadaprabha News   | Kannada Prabha
Published : Aug 26, 2025, 07:31 AM IST
R ashok

ಸಾರಾಂಶ

ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಮೈಸೂರು ದಸರಾ ಉದ್ಘಾಟನೆ ಮಾಡುವುದಕ್ಕೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ

 ಹೊಸಪೇಟೆ (ಆ.26):  ದಸರಾ ಮುಸ್ಲಿಮರ ಹಬ್ಬವಲ್ಲ, ಅವರ ಧರ್ಮದಲ್ಲಿ ಮೂರ್ತಿ ಪೂಜೆಗೆ ನಿಷೇಧವಿದೆ. ದಸರಾ ಉದ್ಘಾಟನೆ ವೇಳೆ ಬಾನು ಮುಷ್ತಾಕ್ ಅವರು ಚಾಮುಂಡಿ ದೇವಿಯ ಪೂಜೆ ಮಾಡಿದರೆ ಅವರ ಧರ್ಮದವರೇ ವಿರೋಧಿಸುತ್ತಾರೆ. ಅವರನ್ನು ಧರ್ಮದಿಂದ ಹೊರಹಾಕಿದ್ರೆ ಏನು ಮಾಡ್ತಿರಾ? ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಪ್ರಶ್ನಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ದಸರಾ ಹಬ್ಬಕ್ಕೆ ಚಾಲನೆ ನೀಡುವ ಕುರಿತು ಪ್ರತಿಕ್ರಿಯಿಸಿ, ಚಾಮುಂಡೇಶ್ವರಿಗೆ ಅವರಿಂದ ಯಾಕೆ ಪೂಜೆ ಮಾಡಿಸಬೇಕು?. ಹಿಂದೂಗಳನ್ನು ವಿರೋಧ ಮಾಡೋರು ಚಾಮುಂಡೇಶ್ವರಿ ಪೂಜೆಯನ್ನು ಯಾಕೆ ಮಾಡಬೇಕು?. ನಮ್ಮ ಹಿಂದೂ ಧರ್ಮದಲ್ಲಿ ಯಾರು ಇಲ್ವಾ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಡಿಕೆಶಿ ಆರೆಸ್ಸೆಸ್‌ ಗೀತೆ ಹಾಡಿದರೆ ಬಿಜೆಪಿ ಪರ ಅಂತಾ ಅಲ್ಲ: ತನ್ವೀರ್

ಸಿದ್ದರಾಮಯ್ಯ ಸರ್ಕಾರ ಹಿಂದೂ ಧರ್ಮಕ್ಕೆ‌ ಕಳಂಕ ತರುತ್ತಿದೆ. ಸಿದ್ದರಾಮಯ್ಯ ಅವರಿಗೆ ಟಿಪ್ಪು ಮನಸ್ಥಿತಿ ಇದೆ. ಹಾಗಾಗಿ, ಮುಸ್ಲಿಮರನ್ನು ಆಯ್ಕೆ ಮಾಡಿದ್ದಾರೆ ಎಂದರು.

ದಸರಾ ಮುಸ್ಲಿಮರ ಹಬ್ಬವಲ್ಲ, ಅವರ ಧರ್ಮದಲ್ಲಿ ಮೂರ್ತಿ ಪೂಜೆಗೆ ನಿಷೇಧವಿದೆ. ದಸರಾ ಉದ್ಘಾಟನೆ ವೇಳೆ ಬಾನು ಮುಷ್ತಾಕ್ ಅವರು ಚಾಮುಂಡಿ ದೇವಿಯ ಪೂಜೆ ಮಾಡಿದರೆ ಅವರ ಧರ್ಮದವರೇ ವಿರೋಧಿಸುತ್ತಾರೆ. ಅವರನ್ನು ಧರ್ಮದಿಂದ ಹೊರಹಾಕಿದ್ರೆ ಏನು ಮಾಡ್ತಿರಾ? ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಪ್ರಶ್ನಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ರಸ್ತೆ-ಚರಂಡಿ ನಿರ್ಮಾಣದಿಂದ ಬಡವರು ಉದ್ದಾರ ಆಗ್ತಾರಾ?' ಗ್ಯಾರಂಟಿ ಸ್ಕೀಂ ಟೀಕೆಗೆ ಗೃಹಸಚಿವ ಪರಂ ತಿರುಗೇಟು!
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ