
ಮೈಸೂರು (ಜೂ.27) ಮುಖ್ಯಮಂತ್ರಿ ಸಿದ್ದರಾಮಯ್ಯ ಮತಾಂತರದ ರಾಯಭಾರಿ ಎಂದಿರುವ ಬಿಜೆಪಿ ಮಾಜಿ ಸಚಿವ ಆರ್. ಅಶೋಕ್ ಹೇಳಿಕೆಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಬಿ. ಸುಬ್ರಹ್ಮಣ್ಯ ತೀವ್ರವಾಗಿ ಖಂಡಿಸಿದ್ದಾರೆ.
ಹಿಜಾಬ…, ಹಲಾಲ್ ಬಗ್ಗೆ ಇಲ್ಲ ಸಲ್ಲದ ವಿವಾದ ಎಬ್ಬಿಸಿ ರಾಜ್ಯದಲ್ಲಿ ಶಾಂತಿ ಕದಡಿದ್ದು ನಿಮ್ಮದೇ ಸರ್ಕಾರ. ಹಿಂದೂ ಮುಸ್ಲಿಮರ ನಡುವೆ ವೈಮನಸ್ಸು ಉಂಟು ಮಾಡುತ್ತಿದ್ದದ್ದು ನಿಮ್ಮದೇ ಸರ್ಕಾರ. ಸಾಲದ್ದಕ್ಕೆ ವಿಶ್ವಮಾನವ ಸಂದೇಶ ನೀಡಬೇಕಿದ್ದ ಶಾಲೆಗಳಲ್ಲೂ ರಾಜಕೀಯ ತೂರಿಸಿ ವಿದ್ಯಾರ್ಥಿಗಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತಲು ಹೊರಟಿದ್ದವರು ನೀಮ್ಮದೇ ಪಕ್ಷದ ನಾಯಕರು. ಜನಾನುರಾಗಿ ಸಿದ್ದರಾಮಯ್ಯ ಅವರ ಬಗ್ಗೆ ಮಾತನಾಡುವ ನೈತಿಕತೆ ನಿಮಗಿಲ್ಲ ಎಂದು ಅವರು ಕಿಡಿಕಾರಿದ್ದಾರೆ.
Conversion Politics: ಮತಾಂತರ ನಿಷೇಧಕ್ಕೆ ಸಹಿ ಹಾಕಿದ್ದು ನಿಜ: ಸಿದ್ದರಾಮಯ್ಯ
ನಿಮ್ಮ ಈ ನೀತಿಗಳಿಂದ ಬೇಸತ್ತಿದ್ದ ಜನ ರಾಜ್ಯದಲ್ಲಿ ಬದಲಾವಣೆ ಬಯಸಿದ್ದರು. ಶಾಂತಿ ಸುವ್ಯವಸ್ಥೆ ಬರಬೇಕೆಂದು ಬಯಸಿದ್ದರು. ಆದ್ದರಿಂದಲೇ ಜನ ಸಿದ್ದರಾಮಯ್ಯ ಅವರನ್ನು ಮತ್ತೊಮ್ಮೆ ಮುಖ್ಯಮಂತ್ರಿ ಆಗಿ ಆಯ್ಕೆ ಮಾಡಿದ್ದಾರೆ. ಈಗಾಗಲೇ ಜನ ನಿಮಗೆ ತಕ್ಕ ಪಾಠ ಕಲಿಸಿದ್ದಾರೆ. ಇನ್ನಾದರೂ ಹಿಂದೂ ಮುಸ್ಲಿಮರ ನಡುವೆ ದ್ವೇಷ ಭಾವನೆ ಬೆಳೆಸೋದನ್ನು ಬಿಟ್ಟುಬಿಡಿ ಎಂದು ಅವರು ಸಲಹೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ