ಪೊಲೀಸ್ ಗೌರವದೊಂದಿಗೆ ಆರ್‌.ಧ್ರುವನಾರಾಯಣ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

Published : Mar 11, 2023, 10:10 AM ISTUpdated : Mar 11, 2023, 10:56 AM IST
ಪೊಲೀಸ್ ಗೌರವದೊಂದಿಗೆ ಆರ್‌.ಧ್ರುವನಾರಾಯಣ ಅಂತ್ಯಕ್ರಿಯೆ: ಸಿಎಂ ಬೊಮ್ಮಾಯಿ

ಸಾರಾಂಶ

ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್‌.ಧ್ರುವನಾರಾಯಣ ಹೃದಯಾಘಾತದಿಂದ ಇಂದು ವಿಧಿವಶರಾಗಿದ್ದು, ಪೊಲೀಸ್ ಗೌರವದೊಂದಿಗೆ ಆರ್‌.ಧ್ರುವನಾರಾಯಣ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರು (ಮಾ.11): ಕೆಪಿಸಿಸಿ ಕಾರ್ಯಾಧ್ಯಕ್ಷ, ಮಾಜಿ ಸಂಸದ ಆರ್‌.ಧ್ರುವನಾರಾಯಣ ಹೃದಯಾಘಾತದಿಂದ ಇಂದು ವಿಧಿವಶರಾಗಿದ್ದು, ಪೊಲೀಸ್ ಗೌರವದೊಂದಿಗೆ ಆರ್‌.ಧ್ರುವನಾರಾಯಣ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದು, ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಆರ್​.ಧ್ರುವನಾರಾಯಣ ಅವರ ಅಂತ್ಯ ಸಂಸ್ಕಾರ ನಾಳೆ (ಭಾನುವಾರ) ಹುಟ್ಟೂರಿನಲ್ಲಿ ನಡೆಯಲಿದೆ. 

ಇನ್ನು ಧ್ರುವನಾರಾಯಣ ನಿಧನಕ್ಕೆ ರಾಜಕೀಯ ನಾಯಕರು ಸಂತಾಪ ಸೂಚಿಸಿದ್ದು, ಸಿಎಂ ಬಸವರಾಜ ಬೊಮ್ಮಾಯಿ, 'ಮಾಜಿ ಸಂಸದರು ಹಾಗೂ ಕೆ.ಪಿ.ಸಿ.ಸಿ.ಯ ಕಾರ್ಯಾಧ್ಯಕ್ಷರಾಗಿದ್ದ ಶ್ರೀ ಧ್ರುವನಾರಾಯಣ್ ಅವರು ನಿಧನರಾದ ವಿಷಯ ಅತ್ಯಂತ ಬೇಸರ ಉಂಟುಮಾಡಿದೆ. ಅವರ ಆತ್ಮಕ್ಕೆ ಸದ್ಗತಿಯನ್ನು ಕೋರುತ್ತೇನೆ ಹಾಗೂ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ' ಎಂದು ಹೇಳಿದ್ದಾರೆ.
 


ಹೃದಯಾಘಾತದಿಂದ ಆರ್.ಧ್ರುವನಾರಾಯಣ ನಿಧನ: ಹುಟ್ಟೂರಿನಲ್ಲಿ ಇಂದೇ ಅಂತ್ಯ ಸಂಸ್ಕಾರ

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು, 'ನಗುಮುಖದ ಗೆಳೆಯ, ನಮ್ಮ ನಾಯಕ ಮತ್ತು ಕಾಂಗ್ರೆಸ್‌ನ ಅತ್ಯಂತ ಸಮರ್ಪಿತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದ ಧ್ರುವನಾರಾಯಣ ಅವರ ನಿಧನ ಸರಿಪಡಿಸಲಾಗದ ನಷ್ಟವನ್ನು ಮಾಡಿದೆ. ಇದನ್ನು ವಿವರಿಸಲು ಯಾವುದೇ ಪದಗಳಿಲ್ಲ' ಎಂದು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. 



'ರಾಜ್ಯ ಕಾಂಗ್ರೆಸ್ ಹಿರಿಯ ನಾಯಕರು,‌ ಮಾಜಿ ಸಂಸದರು, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಶ್ರೀಯುತ ಧೃವ ನಾರಾಯಣ ಅವರು ಹೃದಯಾಘಾತದಿಂದ ನಿಧನರಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಸದ್ಗತಿ ಸಿಗಲಿ. ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೊರಕಲಿ' ಎಂದು ಕೆಪಿಸಿಸಿ ಸಂತಾಪ ಸೂಚಿಸಿದ್ದಾರೆ.

ರಾಜಕಾರಣದಲ್ಲಿ ಯಾರು ಶಾಶ್ವತ ಮಿತ್ರರೂ, ಶತ್ರುವೂ ಅಲ್ಲ. ಸಂಸದರಾಗಿ, ಶಾಸಕರಾಗಿ ಜನರೊಂದಿಗೆ ಇದ್ರು. ತುಂಬಾ ಸರಳ ಸಜ್ಜನಿಕೆಯ ನೇತಾರ. ಅವರ ಅಕಾಲಿಕ ಹಗಲಿಕೆಗೆ ಬಿಜೆಪಿ ರಾಜ್ಯ ಘಟಕ ಸಂತಾಪ ಸೂಚಿಸುತ್ತದೆ ಎಂದು ಮಡಿಕೇರಿಯಲ್ಲಿ ಮಾಜಿ ಸಿಎಂ ಸದಾನಂದಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ. 

ನನ್ನ ಆತ್ಮೀಯರಾದ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಮಾಜಿ ಸಂಸದ ಆರ್.ನಾರಾಯಣ್ ಅವರ ಹಠಾತ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ‌ಕೋರುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಧ್ರುವನಾರಾಯಣ ನಿಧನದ ಬಗ್ಗೆ ಟ್ವೀಟ್‌ ಮಾಡಿದ್ದಾರೆ.

R Dhruvanarayan Passes Away: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಹೃದಯಾಘಾತದಿಂದ ನಿಧನ

ಕಾಂಗ್ರೆಸ್‌ ಶಾಸಕ ಎಂ.ಬಿ.ಪಾಟೀಲ್‌, "ನನ್ನ ಆತ್ಮೀಯರಾಗಿದ್ದ ನಮ್ಮ ಪಕ್ಷದ ಕಾರ್ಯಧ್ಯಕ್ಷರು, ಸರಳ ಸಜ್ಜನಿಕೆಯ ಸ್ನೇಹಜೀವಿ ರಾಜಕಾರಣಿ ಎಂದೇ ಖ್ಯಾತರಾದ ಆರ್. ಧ್ರುವನಾರಾಯಣ್ ಅವರ ನಿಧನದ ಸುದ್ದಿ ಆಘಾತ ತರಿಸಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ. ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಪರಮಾತ್ಮ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಪಕ್ಷ ಸಂಘಟನೆ ಮಾಡುತ್ತಾ ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಕಾಂಗ್ರೆಸ್ ಗೆ ಬಹುದೊಡ್ಡ ಶಕ್ತಿಯಾಗಿದ್ದರು. 2 ಬಾರಿ ಶಾಸಕರಾಗಿ, 2ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದರು. ಅವರ ನಿಧನದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ, ಅಭಿಮಾನಿಗಳಿಗೆ ಹಾಗೂ ಅವರನ್ನು ಪ್ರೀತಿಸುತ್ತಿದ್ದ ಲಕ್ಷಾಂತರ ಮತದಾರರಿಗೆ ತುಂಬಲಾಗದ ನಷ್ಟವಾಗಿದೆ'' ಎಂದು ಟ್ವೀಟ್‌ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ