
ಬೆಂಗಳೂರು (ಜು.11) :ಕಾಂಗ್ರೆಸ್ ರಾಷ್ಟ್ರೀಯ ಮುಖಂಡ ರಾಹುಲ್ ಗಾಂಧಿ ಅವರ ರಾಜಕೀಯ ಜೀವನ ಮುಗಿಸಲು ಷಡ್ಯಂತ್ರ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಜು.12ರಂದು ಬೆಳಗಿನಿಂದ ಸಂಜೆಯವರೆಗೂ ಸ್ವಾತಂತ್ರ್ಯ ಉದ್ಯಾನವನದಲ್ಲಿ ಮೌನ ಪ್ರತಿಭಟನೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(DK Shivakumar) ತಿಳಿಸಿದರು.
ಕೆಪಿಸಿಸಿ(KPCC) ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ್ ಜೋಡೋ ಯಾತ್ರೆ(Bharat jodo yatre)ಯಲ್ಲಿ ರಾಹುಲ್ ಗಾಂಧಿ(Rahul gandhi) ಅವರಿಗೆ ಅಪಾರ ಜನಬೆಂಬಲ, ಕರ್ನಾಟಕದಲ್ಲಿ ಅವರಿಗೆ ಸಿಕ್ಕ ಅಭೂತಪೂರ್ವ ಸ್ವಾಗತವನ್ನು ಸಹಿಸಲಾಗದೆ ರಾತ್ರೋರಾತ್ರಿ ಅವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹಗೊಳಿಸಲಾಗಿದೆ. ಇದನ್ನು ವಿರೋಧಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬುಧವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೂ ಮೌನ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.
ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದ್ವೇಷ ರಾಜಕಾರಣ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಲ್ಲ ಸಚಿವರು, ಸಂಸದರು, ಶಾಸಕರು ಭಾಗವಹಿಸಲಿದ್ದಾರೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪಕ್ಷ ಹೋರಾಟ ನಡೆಸುತ್ತಿದ್ದು ದೇಶದ ಎಲ್ಲ ಪ್ರಮುಖ ನಗರಗಳಲ್ಲಿ ಮೌನ ಪ್ರತಿಭಟನೆ ನಡೆಯಲಿದೆ. ನಗರದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ರಾಹುಲ್ ಸಂಸತ್ ಸದಸ್ಯತ್ವ ರದ್ದು: ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ವಿಪಕ್ಷಗಳ ಸಭೆ: 17, 18ಕ್ಕೆ ಬೆಂಗಳೂರಿಗೆ ಸೋನಿಯಾ
ಬೆಂಗಳೂರು: ಜು.17 ಮತ್ತು 18ರಂದು ದೇಶದ ವಿರೋಧ ಪಕ್ಷಗಳ ನಾಯಕರ ಸಭೆ ಬೆಂಗಳೂರಿನಲ್ಲಿ ನಡೆಯಲಿದೆ. ಸಭೆಗೆ ಆಗಮಿಸುತ್ತಿರುವವರಿಗೆ ನಾವು ಸ್ವಾಗತ ಕೋರುತ್ತೇವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಸಭೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದ್ದು, ಭಾಗವಹಿಸುವುದು ಖಚಿತವಾಗಿದೆ ಎಂದು ಶಿವಕುಮಾರ್ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ