
ಬೆಂಗಳೂರು (ಅ.5): ಭಾರತ್ ಜೋಡೋ ಯಾತ್ರೆಯಲ್ಲಿ ಪ್ರಸ್ತುತ ಕರ್ನಾಟಕದಲ್ಲಿದೆ. ಕಾಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಪಾದಯಾತ್ರೆ ಜೋರಾಗಿ ನಡೆಯುತ್ತಿದೆ. ಇತ್ತೀಚೆಗೆ ವಿಶ್ರಾಂತಿಯ ದಿನ ರಾಹುಲ್ ಗಾಂಧಿ ನಾಗರಹೊಳೆಯ ಹುಲಿ ಸಂರಕ್ಷಣಾ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದರು. ಈ ವೇಳೆ ಆನೆಮರಿಯೊಂದರ ಕಷ್ಟಕ್ಕೆ ಮರುಗಿರುವ ಕಾಂಗ್ರೆಸ್ ನಾಯಕ, ಅದಕ್ಕೆ ಚಿಕಿತ್ಸೆ ಕೊಡಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರೆ ಬರೆದಿದ್ದಾರೆ. ಹುಲಿ ಸಂರಕ್ಷಣಾ ಪ್ರದೇಶದಲ್ಲಿರುವ ಆನೆಯ ಮರಿಯೊಂದಕ್ಕೆ ಚಿಕಿತ್ಸೆಯ ಅಗತ್ಯವಿದೆ. ಗಾಯಗೊಂಡಿರುವ ಆನೆ ಮರಿ ಹಾಗೂ ತಾಯಿ ಆನೆಗೆ ಆದಷ್ಟು ಬೇಗ ಚಿಕಿತ್ಸೆ ಕೊಡಿಸಿ ಎಂದು ಪತ್ರ ಬರೆದಿದ್ದಾರೆ. ಆನೆ ಮರಿಯು ಬಾಲ ಹಾಗೂ ದಂತದ ಗಾಯದಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಮಂಗಳವಾರ ನಾಗರಹೊಳೆ ಹುಲಿ ಸಂರಕ್ಷಣಾ ಪ್ರದೇಶಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಸಫಾರಿಗೆ ತೆರಳಿದ್ದರು. ಈ ವೇಳೆ ಆನೆ ಮರಿಗೆ ಆಗಿರುವ ಗಾಯದ ಬಗ್ಗೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಇಬ್ಬರೂ ಖುದ್ದು ನೋಡಿದ್ದರು. ನನ್ನ ಈ ಪತ್ರದಲ್ಲಿ ಯಾವುದೇ ರಾಜಕೀಯ ವಿಚಾರಗಳಿಲ್ಲ. ರಾಜಕೀಯದ ಗಡಿಗಳನ್ನು ಬಿಟ್ಟು ಈ ಪತ್ರ ಬರೆದಿದ್ದೇನೆ. ಸೂಕ್ತ ಚಿಕಿತ್ಸೆ ದೊರೆತರೆ ಸಂಕಷ್ಟದಲ್ಲಿರುವ ತಾಯಿ ಆನೆ ಹಾಗೂ ಮರಿ ಆನೆ ಬದುಕುತ್ತದೆ. ದಯವಿಟ್ಟು ಸೂಕ್ತ ಚಿಕಿತ್ಸೆ ಒದಗಿಸುವಂತೆ ರಾಹುಲ್ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ