
ಬೆಂಗಳೂರು (ಡಿ.28): ನಮ್ಮ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಗ್ಯಾರಂಟಿ ಯೋಜನೆ ಜಾರಿಗೊಳಿಸಿ ನುಡಿದಂತೆ ನಡೆದಿದ್ದೇವೆ. ಚುನಾವಣೆ ಪೂರ್ವ ಘೊಷಣೆ ಮಾಡಿದ ಎಲ್ಲ ಯೋಜನೆ ಜಾರಿಗೊಳಿಸಿದ್ದೇವೆ. ಈ ದೇಶದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕೊಡುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಕಾಂಗ್ರೆಸ್ ಸಂಸ್ಥಾಪನಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ದೇಶದಲ್ಲಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕೊಡುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಸಾಧ್ಯ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಬೇಕು ರಾಹುಲ್ ಗಾಂಧಿಯವರನ್ನು ಈ ದೇಶದ ಪ್ರಧಾನಿಯನ್ನಾಗಿ ಮಾಡಬೇಕು ಎಂದು ಕರೆ ನೀಡಿದರು.
ಸಾಫ್ಟ್ ಹಿಂದುತ್ವ ಹಾಗಂದ್ರೆ ಏನು? ನಾವು ಹಿಂದುಗಳಲ್ವಾ? ರಾಮನ ಭಕ್ತರು ಅಲ್ವಾ?: ಸಿಎಂ ಸಿದ್ದರಾಮಯ್ಯ
ಈ ದೇಶದಲ್ಲಿ ಇದುವರೆಗೆ ಯಾರೂ ಭಾರತ್ ಜೋಡೋ ಯಾತ್ರೆ ಮಾಡಿರಲಿಲ್ಲ. ಆದರೆ ರಾಹುಲ್ ಗಾಂಧಿಯವರು ಯಶಸ್ವಿಯಾಗಿ ಮಾಡಿದ್ದಾರೆ. ಈಗ ಭಾರತ್ ಜೋಡೋ 2 ಪ್ರಾರಂಭ ಮಾಡ್ತಿದ್ದಾರೆ. ಆ ಮೂಲಕ ಭಾರತ ನ್ಯಾಯ ಯಾತ್ರೆ ಮಾಡ್ತಿದ್ದಾರೆ. ಯಾಕಂದ್ರೆ ಈ ದೇಶದಲ್ಲಿ ಯಾರಿಗೂ ನ್ಯಾಯ ಸಿಕ್ಕಿಲ್ಲ. ಹಿಂದುಳಿದವರಿಗೆ, ದಲಿತರಿಗೆ ನ್ಯಾಯ ಸಿಗಬೇಕು ಅಂತ ಪಾದಯಾತ್ರೆ ಮಾಡ್ತಿದ್ದಾರೆ.ಇಂತವರ ಕೈಗೆ ಅಧಿಕಾರ ಸಿಗಬೇಕೋ ನರೇಂದ್ರ ಮೋದಿಗೆ ಅಧಿಕಾರ ಸಿಗಬೇಕೋ ನೀವೇ ಯೋಚನೆ ಮಾಡಿ. ಹಾಗಾಗಿ ನಾವು ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದು ಕರೆ ಕೊಟ್ಟರು.
ಮತಾಂತರ ನಿಷೇಧವಿದ್ರೂ ಅಂಗನವಾಡಿ ಕಾರ್ಯಕರ್ತೆಯಿಂದಲೇ ಮತಾಂತರ ಕೃತ್ಯ; ಪ್ರಮೋದ್ ಮುತಾಲಿಕ್ ಆಕ್ರೋಶ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ