ರಾಯಚೂರು: ಇ-ಖಾತಾ ನೀಡಲು ಒಂದು ಲಕ್ಷಕ್ಕೆ ಬೇಡಿಕೆ, ಲಂಚ ಪಡೆಯುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿ

Kannadaprabha News   | Kannada Prabha
Published : Apr 11, 2026, 09:38 AM IST
Raichur Corrupt official caught in Lokayukta trap while accepting a bribe in kavital rav

ಸಾರಾಂಶ

ರಾಯಚೂರಿನ ಕವಿತಾಳ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ ಶೆಟ್ಟಿ, ಇ-ಖಾತಾ ನೀಡಲು ₹1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಅಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಸಿನಿಮಾ ಶೈಲಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.

ರಾಯಚೂರು (ಏ.11): ಸಿರವಾರ ತಾಲೂಕಿನ ಕವಿತಾಳ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ ಶೆಟ್ಟಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ದಾಳಿಗೆ ಒಳಗಾಗಿದ್ದಾರೆ. ತಕ್ಷಣ ಪರಾರಿಯಾಗಲು ಯತ್ನಿಸಿದ ಮುಖ್ಯಾಧಿಕಾರಿ ಸುರೇಶರನ್ನು ಸಿನಿಮಾ ಶೈಲಿಯಲ್ಲಿ ಬೆನ್ನತ್ತಿ ಲೋಕಾಯುಕ್ತ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಪಟ್ಟಣದಲ್ಲಿರುವ ಆಸ್ತಿಗೆ ಇ-ಖಾತಾ ನೀಡಲು ರಾಘವೇಂದ್ರ ರೆಡ್ಡಿ ಎಂಬುವರಿಗೆ ₹2 ಲಕ್ಷ ಲಂಚ ಬೇಡಿಕೆಯಿಟ್ಟು ಮುಂಚಿತವಾಗಿ ₹1 ಲಕ್ಷ ಪಡೆಯುವ ವೇಳೆ ಲೋಕಾಯುಕ್ತ ದಾಳಿ ನಡೆಸಿತ್ತು.

ಪೊಲೀಸ್ ವರಿಷ್ಠಾಧಿಕಾರಿ ಸಿದ್ದರಾಜು ಮತ್ತು ಇನ್ಸ್‌ಪೆಕ್ಟರ್‌ಗಳ ಬಲೆಗೆ ಬಿದ್ದಿದ್ದಾರೆ. ನಿವೇಶನದ ಇ ಖಾತಾ ನೀಡಲು ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮುಖ್ಯಾಧಿಕಾರಿ ಸುರೇಶ ಶೆಟ್ಟಿ ಅವರು ಸಿರವಾರದ ರಾಘವೇಂದ್ರ ರೆಡ್ಡಿ ಅವರಿಂದ ಲಂಚ ಸ್ವೀಕರಿಸಿ ಲೋಕಾಯುಕ್ತ ಪೊಲೀಸರಿಂದ ತಪ್ಪಿಸಿಕೊಂಡು ಕಾರಿನಲ್ಲಿ ಪರಾರಿಯಾಗಿದ್ದರು. ಮುಖ್ಯಾಧಿಕಾರಿಯನ್ನು ಬೈಕ್‌ಗಳಲ್ಲಿ ಹಿಂಬಾಲಿಸಿದ ಪೊಲೀಸರು ಕಾರನ್ನು ಗುರುತಿಸಿ ಮೊಬೈಲ್ ಲೊಕೇಶನ್ ಆಧರಿಸಿ ಸ್ನೇಹಿತನ ಮನೆಯಲ್ಲಿದ್ದ ಅಧಿಕಾರಿಯನ್ನು ಲಂಚದ ಹಣ ಸಹಿತ ವಶಕ್ಕೆ ಪಡೆದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

SSLC ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ! ತೃತೀಯ ಭಾಷೆ, ಎನ್‌ಎಸ್‌ಕ್ಯೂಎಫ್ ವಿಷಯಗಳಿಗೆ ಪಾಸ್-ಫೇಲ್ ಬದಲು ಗ್ರೇಡ್ ಪದ್ಧತಿ ಜಾರಿ
ಗೃಹಲಕ್ಷ್ಮೀ ಹಣ ಸಾಲದ ಕಂತಿಗೆ ಕಡಿತ ಮಾಡುವ ಹಾಗಿಲ್ಲ, ಸಿಎಂ ಸೂಚನೆ