ದಂಪತಿ ಮೇಲೆ ಬಿದ್ದ ಕಾಂಕ್ರೀಟ್ ಮೆಟ್ಟಿಲು: ಹೊಸ ಮನೆ ಕನಸು ನನಸಾಗುವ ಮೊದಲೇ ಇಬ್ಬರೂ ಸಾವು

Published : Mar 09, 2026, 04:01 PM IST
husband and wife died after staircase fell on them

ಸಾರಾಂಶ

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ನಿರ್ಮಾಣ ಹಂತದ ಮನೆಯ ಮೆಟ್ಟಿಲು ಕುಸಿದು ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗೋಡೆ ಪ್ಲಾಸ್ಟರ್ ಕೆಲಸಕ್ಕೆ ಮುಂದಾಗಿದ್ದಾಗ ಈ ದುರ್ಘಟನೆ ಸಂಭವಿಸಿದ್ದು, ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮನೆಯ ಕನಸು ನನಸಾಗುವ ಮೊದಲೇ ದಂಪತಿ ಸಾವು: 

ರಾಯಚೂರು: ನಿರ್ಮಾಣ ಹಂತದ ಮನೆಯ ಮೆಟ್ಟಿಲು ಬಿದ್ದು ದಂಪತಿ ಸಾವಿಗೀಡಾದಂತಹ ಘಟನೆ ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ನಡೆದಿದೆ. ಕಾಂಕ್ರೀಟ್ ಮೆಟ್ಟಿಲು ಮೇಲಿನಿಂದ ಬಿದ್ದ ರಭಸಕ್ಕೆ ಗಂಡ - ಹೆಂಡತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತರನ್ನು ಪತ್ನಿ 33 ವರ್ಷದ ಶಿವಮ್ಮ ಹಾಗೂ ಪತಿ 35 ವರ್ಷದ ದ್ಯಾವಪ್ಪ ಸೂಗುರು ಎಂದು ಗುರುತಿಸಲಾಗಿದೆ.

ಕಳೆದ ಕೆಲ ದಿನಗಳಿಂದ ದಂಪತಿ ಮನೆ ಕಟ್ಟುತ್ತಿದ್ದು, ಎಂದಿನಂತೆ ಇವತ್ತು ಮನೆಯ ಗೋಡೆ ಪ್ಲಾಸ್ಟರ್ ಕೆಲಸಕ್ಕೆ ದಂಪತಿ ಮುಂದಾಗಿದ್ದರು ಈ ವೇಳೆ ಏಕಾಏಕಿಯಾಗಿ ಮನೆಯ ಮೆಟ್ಟಿಲು ಕುಸಿದು ದಂಪತಿ ಸಾವಿಗೀಡಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದಂಪತಿಯ ಮೃತದೇಹವನ್ನು ಲಿಂಗಸೂಗೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬ್ಯಾಡಗಿ ಮೆಣಸಿನಕಾಯಿ ಮೇಲೆ ಯುದ್ಧದ ಕಾರ್ಮೋಡ: ರಫ್ತು ಬಂದ್, ಆತಂಕದಲ್ಲಿ ಬೆಳೆಗಾರರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬ್ಯಾಡಗಿ ಮೆಣಸಿನಕಾಯಿ ಮೇಲೆ ಯುದ್ಧದ ಕಾರ್ಮೋಡ: ರಫ್ತು ಬಂದ್, ಆತಂಕದಲ್ಲಿ ಬೆಳೆಗಾರರು
ನಟ ದರ್ಶನ್ ಗ್ಯಾಂಗ್‌ನ ಎ-10 ಆರೋಪಿ ವಿನಯ್‌ಗೆ ವಕೀಲರಿಂದಲೇ ಕಪಾಳಮೋಕ್ಷ! ಕಾರಣ ಹೀಗಿದೆ...