
ರಾಯಚೂರು(ಜೂ.1): ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹಟ್ಟಿ ಚಿನ್ನದ ಗಣಿಯಲ್ಲಿ ಮೈನಿಂಗ್ ವೇಳೆ ಕಾರ್ಮಿಕ ದುರ್ಮರಣ ಪ್ರಕರಣದಲ್ಲಿ ಕಾರ್ಮಿಕ ಶರಣಬಸವ ಮೃತದೇಹವನ್ನ 2800 ಅಡಿ ಆಳದಿಂದ ಹೊರತಂದ ಸಿಬ್ಬಂದಿ ಹೊರತೆಗೆದಿದ್ದಾರೆ.
ಲಿಂಗಸೂಗೂರು ತಾಲೂಕಿನ ವೀರಾಪುರ ಗ್ರಾಮದ ಶರಣಬಸವ (40) ಮೃತ ದುರ್ದೈವಿ. ಮೈನಿಂಗ್ ಕಾರ್ಯಾಚರಣೆ ವೇಳೆ ಗಣಿಯ 2800 ಅಡಿ ಆಳದಲ್ಲಿ ಸಂಭವಿಸಿದ ದುರಂತದಲ್ಲಿ ಮೃತರಾಗಿದ್ದರು. ಮೃತದೇಹವನ್ನು ಸಿಬ್ಬಂದಿ ಶ್ರಮಿಸಿ ಹೊರತೆಗೆದಿದ್ದಾರೆ.
ಒಂದು ಕೋಟಿ ಪರಿಹಾರಕ್ಕೆ ಸಂಘಟನೆಗಳು ಪಟ್ಟು:
ಈ ಘಟನೆಯಿಂದ ಕಾರ್ಮಿಕರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೃತ ಕಾರ್ಮಿಕನ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ಪರಿಹಾರ ನೀಡುವಂತೆ ಕಂಪನಿಯ ಮೇಲೆ ಒತ್ತಡ ಹೇರಿವೆ. ಪರಿಹಾರ ನೀಡುವವರೆಗೂ ಮೃತದೇಹವನ್ನು ಸಾಗಿಸಲು ಬಿಡುವುದಿಲ್ಲವೆಂದು ಕಾರ್ಮಿಕರು ಪಟ್ಟು ಹಿಡಿದಿದ್ದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಆದರೆ, ಕಂಪನಿಯ ನೌಕರರು ಮೃತ ಕಾರ್ಮಿಕನ ಕುಟುಂಬಕ್ಕೆ ತಕ್ಷಣದ ಪರಿಹಾರ ನೀಡುವ ಭರವಸೆ ನೀಡಿದ ಬಳಿಕ, ಕುಟುಂಬಸ್ಥರು ಮೃತದೇಹವನ್ನು ತೆಗೆದುಕೊಂಡು ಹೋಗಿದ್ದಾರೆ.
ಈ ಘಟನೆಯ ಬಗ್ಗೆ ತನಿಖೆ ಆರಂಭವಾಗಿದ್ದು, ಗಣಿಯ ಸುರಕ್ಷತಾ ಕ್ರಮಗಳ ಕುರಿತು ಪ್ರಶ್ನೆಗಳು ಎದ್ದಿವೆ. ಕಾರ್ಮಿಕ ಸಂಘಟನೆಗಳು ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ