ಅಂಬೇಡ್ಕರ್‌ಗೆ ಅಪಮಾನ ಪ್ರಕರಣ, ರಾಯಚೂರು ನ್ಯಾಯಾಧೀಶ ವರ್ಗಾವಣೆ

Published : Feb 18, 2022, 01:28 PM IST
ಅಂಬೇಡ್ಕರ್‌ಗೆ ಅಪಮಾನ ಪ್ರಕರಣ, ರಾಯಚೂರು ನ್ಯಾಯಾಧೀಶ ವರ್ಗಾವಣೆ

ಸಾರಾಂಶ

* ಅಂಬೇಡ್ಕರ್ ಪೋಟೋಗೆ ಅಪಮಾನ ಪ್ರಕರಣ * ರಾಯಚೂರು ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ  * 21 ದಿನಗಳ ಬಳಿಕ ಆಡಳಿತಾತ್ಮಕ ಹಿತದೃಷ್ಟಿಯ ಕಾರಣ ನೀಡಿ ಟ್ರಾನ್ಸ್‌ಫರ್

ರಾಯಚೂರು, (ಫೆ.18) ಡಾ. ಬಿ.ಆರ್. ಅಂಬೇಡ್ಕರ್​ಗೆ ( Dr BR Ambedkar) ಅಪಮಾನ ಮಾಡದ ಆರೋಪಕ್ಕೆ ಸಂಬಂಧಿಸಿದಂತೆ ರಾಯಚೂರು ನ್ಯಾಯಾಧೀಶರನ್ನು (Raichur Judge) ವರ್ಗಾವಣೆ ಮಾಡಲಾಗಿದೆ.

 ಪ್ರಕರಣ ತೀವ್ರ ಪಡೆದುಕೊಳ್ಳುತ್ತಿದ್ದಂತೆಯೇ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಪಾಟೀಲ್ (Mallikarjuna Gowda Patil)  ಅವರನ್ನು ವರ್ಗಾವಣೆ ಮಾಡಿ ಇಂದು(ಶುಕ್ರವಾರ) ಕರ್ನಾಟಕ ಹೈಕೋರ್ಟ್ (Karnataka High Court) ಆದೇಶ ಹೊರಡಿಸಿದೆ.

Dr. Ambedkar Portrait Removal Row : ಜಡ್ಜ್‌ ವಿರುದ್ಧ ಪ್ರೊಟೆಸ್ಟ್, ಬೆಂಗಳೂರು ವಿವಿಯಲ್ಲಿ ವಿದ್ಯಾರ್ಥಿಗಳ ಘರ್ಷಣೆ

ನ್ಯಾಯಾಧೀಶ ಮಲ್ಲಿಕಾರ್ಜುನ ‌ಪಾಟೀಲ್ ವಿರುದ್ಧ ರಾಜ್ಯಾದ್ಯಂತ ‌ಪ್ರತಿಭಟನೆಗಳು‌ ನಡೆದಿದ್ದವು. ಈ ಹಿನ್ನೆಲೆಯಲ್ಲಿ 21 ದಿನಗಳ ಬಳಿಕ ಆಡಳಿತಾತ್ಮಕ ಹಿತದೃಷ್ಟಿಯ ಕಾರಣ ನೀಡಿ ನ್ಯಾಯಾಧೀಶ ಮಲ್ಲಿಕಾರ್ಜುನ ‌ಪಾಟೀಲ್ ಅವರನ್ನು ವರ್ಗಾವಣೆ  ಹೈಕೋರ್ಟ್ ‌ರಜಿಸ್ಟರ್ ಟಿ.ಜಿ.ಶಿವಶಂಕರೇಗೌಡ ಆದೇಶ ಹೊರಡಿಸಿದ್ದಾರೆ.

ಘಟನೆ ಹಿನ್ನೆಲೆ
 ಜನವರಿ 26ರಂದು ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ಮಾಡುವ ಸಂದರ್ಭದಲ್ಲಿ, ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪಾಟೀಲ್ ಅವರು ಅಂಬೇಡ್ಕರ್ ಪೋಟೋ ತೆಗೆದರೆ ಮಾತ್ರ ಧ್ವಜಾರೋಹಣ ಮಾಡುವುದಾಗಿ ಹೇಳಿದ್ದರು. ನ್ಯಾಯಾಧೀಶರ ಈ ನಡೆ ಖಂಡಿಸಿ ದಲಿತಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಅಲ್ಲದೇ ರಾಜ್ಯಾದ್ಯಂತ ಈಗಲೂ ಸಹ ಪ್ರತಿಭಟನೆಗಳು ನಡೆಯುತ್ತಿವೆ.

Raichur Republic Day : ಜಡ್ಜ್ ವಿರುದ್ಧ ಪ್ರತಿಭಟನೆ ಜೋರು, ಸತ್ಯ ಮರೆಮಾಚಿ ಅಪಪ್ರಚಾರ ಎಂದ ನ್ಯಾಯಾಧೀಶ

 ಸ್ಪಷ್ಟನೆ ಕೊಟ್ಟಿದ್ದ ನ್ಯಾಯಾಧೀಶ
ಸಂವಿಧಾನ ಶಿಲ್ಪಿ ಹಾಗೂ ಭಾರತರತ್ನ ಡಾ. ಬಿ.ಅರ್.ಅಂಬೇಡ್ಕರ್​ ಅವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಅಭಿಮಾನ ಇದೆ ಎಂದು ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದರು.

 ಜ.26ರಂದು(ಬುಧವಾರ)ಬೆಳಗ್ಗೆ 8:30ಕ್ಕೆ ನಮ್ಮ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಮಾನ್ಯ ಉಚ್ಚ ನ್ಯಾಯಾಲಯದವರು ನೀಡಿದ ಎಸ್.ಒ.ಪಿ. ಪ್ರಕಾರ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ, ವಕೀಲರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಒಟ್ಟು 200 ಜನರಿಗೆ ಮೀರದಂತೆ ಸೇರಿ ಗಣರಾಜ್ಯೋತ್ಸವ ಆಚರಿಸಲು ನಿರ್ಣಯಿಸಿ ನೋಟಿಸು ನೀಡಲಾಗಿತ್ತು. ಆದರೆ, ಜ.26ರಂದು ಮುಂಜಾನೆ 8.15ರ ಸುಮಾರಿಗೆ ನಮ್ಮ ಸಿಬ್ಬಂದಿ ನನ್ನ ಕೊಠಡಿಗೆ ಬಂದು ಕೆಲವು ವಕೀಲರು ಮಹಾತ್ಮ ಗಾಂಧೀಜಿಯವರ ಫೋಟೋದ ಜೊತೆ ಡಾ.ಬಿ.ಆರ್. ಅಂಬೇಡ್ಕರ ಅವರ ಫೋಟೋವನ್ನು ಸಹ ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕೆಂದು ಹಾಗೂ ಸರ್ಕಾರದ ಸುತ್ತೋಲೆ ಇದೆ.

ನಂತರ ಕೆಲ ವಕೀಲರು ನನ್ನ ಬಳಿ ಬಂದು ಸರ್ಕಾರದ ಸುತ್ತೋಲೆಯ ಪ್ರಕಾರ ಡಾ.ಬಿ.ಆರ್. ಅಂಬೇಡ್ಕರ್ ಅವರ ಫೋಟೋವನ್ನು ಇಟ್ಟು ಗಣರಾಜ್ಯೋತ್ಸವ ಆಚರಿಸಬೇಕು ಎಂದು ಒತ್ತಾಯಿಸಿದರು. ಆಗ ನಾನು ಸುತ್ತೋಲೆ ಘನ ಉಚ್ಚನ್ಯಾಯಾಲಯದ ಫುಲ್ಕೋರ್ಟ್ ಮುಂದೆ ಪರಿಗಣನೆಗೆ ಇರುವ ಕಾರಣ ನಾವು ಕಾಯಬೇಕು. ಹಾಗಾಗಿ ಒತ್ತಾಯಿಸಬೇಡಿ ಅಂತಾ ವಿನಂತಿಸಿಕೊಂಡೆ.

ನಮ್ಮ ಸಿಬ್ಬಂದಿ ನನಗೆ ಹೊರಗಡೆ ಬಹಳ ಜನ ಸೇರಿದ್ದಾರೆ ಅಂತಾ ತಿಳಿಸಿದರು. ಹೊರಗಡೆಯಿಂದ ಬಂದಿರುವ ಬೇರೆ ಜನರು ಹೊರಗೆ ಹೋಗಿದ್ದಾರೆ. ತಾವು ಧ್ವಜಾರೋಹಣಕ್ಕೆ ಬರಬಹುದು ಅಂತಾ ಮತ್ತೇ ಸಿಬ್ಬಂದಿ ನನಗೆ ತಿಳಿಸಿದರು. ನಂತರ ನಾನು ನಮ್ಮ ಎಲ್ಲಾ ನ್ಯಾಯವಾದಿಗಳನ್ನು ಕರೆದುಕೊಂಡು ಧ್ವಜಾರೋಹಣಾ ಸ್ಥಳಕ್ಕೆ ಹೋಗಿ ಧ್ವಜಾರೋಹಣ ನೆರವೇರಿಸಿದೆ.

ಯಾವುದೇ ವ್ಯಕ್ತಿಗಳು ಡಾ.ಬಿ.ಆರ್. ಅಂಬೇಡ್ಕರ್​ ಅವರ ಫೋಟೋ ತೆಗೆದುಕೊಂಡು ಬಂದು ಇಟ್ಟಿದ್ದನ್ನು ಮತ್ತು ತೆಗೆದುಕೊಂಡು ಹೋಗಿರುವುದನ್ನು ನಾನು ನೋಡಿರುವುದಿಲ್ಲ. ಈ ಸತ್ಯ ಘಟನೆಯನ್ನು ಮರೆಮಾಚಿ ನಾನು ಅವರಿಗೆ ಡಾ.ಬಿ.ಆರ್. ಅಂಬೇಡ್ಕರ ಫೋಟೋ ತೆಗೆದರೆ ಮಾತ್ರ ಧ್ವಜಾರೋಹಣಕ್ಕೆ ಬರುತ್ತೇನೆ ಅಂತಾ ಅಪಪ್ರಚಾರ ಮಾಡಿರುತ್ತಾರೆ ಎಂದು ತಮ್ಮ ಸ್ಪಷ್ಟನೆಯಲ್ಲಿ ನ್ಯಾಯಾಧೀಶರು ತಿಳಿಸಿದ್ದರು.

ಹೈಕೋರ್ಟ್ ಗೆ ದೂರು
ಗಣರಾಜ್ಯೋತ್ಸವ(Republic Day) ಅಂಗವಾಗಿ ರಾಯಚೂರಿನ(Raichur) ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಬುಧವಾರ ಆಯೋಜಿಸಿದ್ದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಭಾವಚಿತ್ರವನ್ನು ತೆಗೆಸಿದ್ದಾರೆ ಎನ್ನಲಾದ ವಿವಾದ ಸಂಬಂಧ ಕೆಲ ವಕೀಲರು ಮತ್ತು ಸಂಘಟನೆಗಳು ನ್ಯಾಯಾಧೀಶರ ವಿರುದ್ಧ ಹೈಕೋರ್ಟ್ ಗೆ ದೂರು ನೀಡಿದ್ದರು.

ಈ ಬಗ್ಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಮತ್ತು ರಿಜಿಸ್ಟ್ರಾರ್‌ ಜನರಲ್‌ ಅವರಿಗೆ ಇ-ಮೇಲ್‌ ಮೂಲಕ ಕೆಲ ವಕೀಲರು ಮತ್ತು ವಕೀಲರ ಸಂಘ ದೂರು ಸಲ್ಲಿಸಿ, ‘ರಾಯಚೂರು ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಸಂವಿಧಾನ ಶಿಲ್ಪಿ ಅಂಬೇಡ್ಕರ್‌ಗೆ ಅಪಮಾನ ಮಾಡಿದ್ದಾರೆ. ಹೀಗಾಗಿ, ಪ್ರಕರಣ ಸಂಬಂಧ ಸಮಗ್ರ ತನಿಖೆಗೆ ಆದೇಶಿಸಬೇಕು. ನ್ಯಾ.ಮಲ್ಲಿಕಾರ್ಜುನ ಗೌಡ ಅವರನ್ನು ವಜಾಗೊಳಿಸಬೇಕು’ ಎಂದು ಒತ್ತಾಯಿಸಿದ್ದರು.

ಘಟನೆಯ ನಂತರ ವಿದ್ಯಾರ್ಥಿ ಸಂಘಟನೆಗಳು ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆಸಿದ್ದವು. ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ ನಡೆಸಿವ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿತ್ತು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ
ಕರ್ನಾಟಕ ಗದ್ದುಗೆ ಫೈಟ್‌ ಬಗ್ಗೆ ಹೈಕಮಾಂಡ್‌ ನಾಯಕರ ಚರ್ಚೆ