ರಾಯಚೂರಿನಿಂದ ಗಾರೆ ಕೆಲಸಕ್ಕೆ ಬಂದ ಯುವಕ, ನಿರ್ಮಾಣ ಹಂತದ ಕಟ್ಟಡದಲ್ಲೇ ಶವವಾಗಿ ಪತ್ತೆ!

Published : Apr 07, 2024, 03:23 PM IST
ರಾಯಚೂರಿನಿಂದ ಗಾರೆ ಕೆಲಸಕ್ಕೆ ಬಂದ ಯುವಕ, ನಿರ್ಮಾಣ ಹಂತದ ಕಟ್ಟಡದಲ್ಲೇ ಶವವಾಗಿ ಪತ್ತೆ!

ಸಾರಾಂಶ

ಕಲ್ಯಾಣ ಕರ್ನಾಟಕದ ರಾಯಚೂರಿನಿಂದ ಕಟ್ಟಡ ನಿರ್ಮಾಣ ಕೆಲಸಕ್ಕೆಂದು ಬಂದಿದ್ದ ಯುವಕ ತಾನು ಕೆಲಸ ಮಾಡುವ ಕಟ್ಟಡದಲ್ಲಿಯೇ ಶವವಾಗಿ ಪತ್ತೆಯಾಗಿದ್ದಾನೆ.

ಬೆಂಗಳೂರು (ಏ.07): ಕಲ್ಯಾಣ ಕರ್ನಾಟಕದ ಜಿಲ್ಲೆಯಾದ ರಾಯಚೂರಿನಲ್ಲಿ ವಿಪರೀತ ಬಡತನ. ಅದರಲ್ಲಿಯೂ ಬೇಸಿಗೆ ಕಾಲದಲ್ಲಿ ಕೆಲಸವೂ ಸಿಗುವುದಿಲ್ಲ. ಈ ಹಿನ್ನೆಲೆಯಲ್ಲಿ ಕೂಲಿ ಕೆಲಸವನ್ನು ಅರಸಿ ರಾಯಚೂರಿನಿಂದ ಬೆಂಗಳೂರಿಗೆ ಕಟ್ಟಡ ಕೆಲಸಕ್ಕೆ ಬಂದಿದ್ದ ವೀರೇಶ್‌ ಮನೆಯವರಿಗೆ ತಾನು ದುಡಿದುಕೊಂಡು ಬರುತ್ತೇನೆ ಎಂದು ಭರವಸೆ ನೀಡಿ ಬಂದಿದ್ದನು. ನಮ್ಮ ಕಷ್ಟ ಪರಿಹಾರ ಆಗುತ್ತದೆ ಎಂದು ಕನಸು ಕಂಡಿದ್ದ ಮನೆಯವರಿಗೆ ಶಾಕ್  ಆಗಿದೆ. ದುಡಿಯಲು ಹೋದ ಮಗ ತಾನು ಕೆಲಸ ಮಾಡುತ್ತಿದ್ದ ಕಟ್ಟಡದಲ್ಲಿಯೇ ಶವವಾಗಿ ಪತ್ತೆಯಾಗಿದ್ದಾನೆ.

ಹೌದು, ಬೆಂಗಳೂರಿನಲ್ಲಿ ಅನುಮಾನಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಕೋಣನಕುಂಟೆಯ 80 ಅಡಿ ರಸ್ತೆಯ ಹೋಟೆಲ್ ಒಂದರ ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿನ ಖಾಲಿ ಜಾಗದಲ್ಲಿ ಮೃತದೇಹ ಪತ್ತೆಯಾಗಿದೆ. ಮೃತನನ್ನು ರಾಯಚೂರು ಮೂಲದ ವೀರೇಶ್‌ (27) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಮೃತದೇಹ ಪತ್ತೆಯಾಗಿದ್ದು, ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆದರೆ, ವೀರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನಾ ಅಥವಾ ಕೊಲೆಯಾಗಿದ್ದನಾ ಎಂಬುದೇ ಅನುಮಾನ ಎದುರಾಗಿದೆ.

ಬೆಂಗಳೂರು: ರಾಯಚೂರಿನಿಂದ ಕೆಲಸಕ್ಕೆ ಬಂದ ಮಹಿಳೆ ಹೊತ್ತೊಯ್ದು ಅತ್ಯಾಚಾರವೆಸಗಿ ಕೊಲೆ

ಮೃತ ವೀರೇಶ್ ಬೆಂಗಳೂರಿನ ಕೋಣನಕುಂಟೆಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದನು. 80 ಅಡಿ ರಸ್ತೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದನು. ಕೆಲಸ ಮುಗಿದ ನಂತರ ಅದೇ ಕಟ್ಟಡದಲ್ಲಿ ವೀರೇಶ್ ಉಳಿದುಕೊಳ್ಳುತ್ತಿದ್ದನು. ಆದರೆ, ಇಂದು ಬೆಳಗ್ಗೆ ವೀರೇಶ್ ಶವವಾಗಿ ಪತ್ತೆಯಾಗಿದ್ದಾನೆ. ಘಟನಾ ಸ್ಥಳದಲ್ಲಿ ರಕ್ತ ಕಲೆಗಳು ಪತ್ತೆಯಾಗಿವೆ. ಆದರೆ, ಮೃತದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಇಲ್ಲ. ಸ್ಥಳಕ್ಕೆ ಎಫ್‌ಎಸ್‌ಎಲ್‌ ತಂಡವೂ ಕೂಡ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಪೊಲೀಸರು ಸದ್ಯ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಸದ್ಯ ಕೋಣನಕುಂಟೆ ಪೊಲೀಸರಿಂದ ಸಿಆರ್‌ಪಿಸಿ 174ಸಿರಡಿ ಪ್ರಕರಣ ದಾಖಲಿಸಿ ತನಿಖೆ ಮಾಡಲಾಗುತ್ತಿದೆ.

ರಾಯಚೂರಿನಿಂದ ಕೆಲಸಕ್ಕೆ ಬಂದ ಮಹಿಳೆ ಹೊತ್ತೊಯ್ದು ಅತ್ಯಾಚಾರವೆಸಗಿ ಕೊಲೆ
ಬೆಂಗಳೂರು:
ಕಲ್ಯಾಣ ಕರ್ನಾಟಕದಲ್ಲಿ ಕೂಲಿ ಸಿಗುತ್ತಿಲ್ಲವೆಂದು ಕೆಲಸವನ್ನರಸಿ ಕಟ್ಟ ನಿರ್ಮಾಣ ಕೆಲಸಕ್ಕೆ ಗಂಡ ಹಾಗೂ ಮೂವರು ಮಕ್ಕಳೊಂದಿಗೆ ಬಂದಿದ್ದ ಮಹಿಳೆಯನ್ನು ರಾತ್ರಿ ಎಳೆದೊಯ್ದು ಅತ್ಯಾಚಾರವೆಸಗಿ, ಬೆತ್ತಲೆಯಾಗಿಯೇ ಆಕೆಯನ್ನು ಕೊಲೆ ಮಾಡಿ ಬೀಸಾಡಿ ಹೋಗಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದುಷ್ಕರ್ಮಿ ಯುಕನೊಬ್ಬ ಮಹಿಳೆಯ ಅತ್ಯಾಚಾರವೆಸಗಿ ಕೊಲೆಗೈದ ಘಟನೆ ನಡೆದಿದೆ. ಎರಡು ದಿನಗಳ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಯಚೂರು ಮೂಲದ 55 ವರ್ಷದ ಮಹಿಳೆ ಕೊಲೆಯಾದ ದುರ್ದೈವಿ ಆಗಿದ್ದಾಳೆ. ಅಮೃತಹಳ್ಳಿಯ ಕಾಫಿ ಬೋರ್ಡ್ ಬಳಿ ಘಟನೆ ನಡೆದಿದೆ. ಗಾರೆ ಕೆಲಸ ಮಾಡುತ್ತಿದ್ದ ‌ಮಹಿಳೆಯನ್ನು ಯುವಕ ಎಳೆದೊಯ್ದ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

Bengaluru: ಆಟೋ ಚಾರ್ಜ್ ಕೊಟ್ಟಿಲ್ಲವೆಂದು ಯುವತಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿ ಕೊಲೆಗೈದ ಚಾಲಕ

ಮಾನ್ಯವಾಗಿ ಕಟ್ಟಡ ನಿರ್ಮಾಣ ಕೆಲಸಕ್ಕೆ ಬರುವ ಕುಟುಂಬಗಳು ನಿರ್ಮಾಣ ಹಂತದ ಕಟ್ಟಡದಲ್ಲಿ ಅಥವಾ ಅದರ ಪಕ್ಕದಲ್ಲಿ ತಾತ್ಕಾಲಿಕ ಶೆಡ್‌ ನಿರ್ಮಿಸಿಕೊಂಡು ವಾಸವಾಗಿರುತ್ತಾರೆ. ಹೀಗೆ, ನಿರ್ಮಾಣ ಹಂದ ಪಕ್ಕದಲ್ಲಿ ವಾಸವಿದ್ದ ಮಹಿಳೆ ರಾತ್ರಿ ವೇಳೆ ಹೊರಗೆ ಬಂದಾಗ ಆಕೆಯನ್ನು ಎಳೆದೊಯ್ದ ಯುವಕ ನಿರ್ಮಾಣ ಹಂತದ ಕಟ್ಟಡದೊಳಗೆ ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾನೆ. ಇನ್ನು ಮರು ದಿನ ಬೆಳಿಗ್ಗೆ ಕಟ್ಟಡದ ಮಾಲೀಕ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿನಿಮಾ ರಿಲೀಸ್‌ಗೂ ಮುನ್ನವೇ ಜೈಲಲ್ಲಿ ಡೆವಿಲ್ ರೂಪ ತಾಳಿದ ದರ್ಶನ್; ಸಹ ಕೈದಿಗಳಿಗೆ ಕಾಲಿನಿಂದ ಒದ್ದು ದುರಹಂಕಾರ!
CM Siddaramaiahಗೆ ಈಶ್ವರಪ್ಪ ವಾರ್ನಿಂಗ್: ಭಗವದ್ಗೀತೆ ಓದಲಿ, ತಾಕತ್ತಿದ್ದರೆ ಕುರಾನ್ ಬಗ್ಗೆ ಮಾತನಾಲಿ