
ರಾಯಚೂರು: ಖಾಸಗಿ ಆಸ್ಪತ್ರೆ ಮೇಲಿಂದ ಬಿದ್ದು ಬಾಣಂತಿ ಸಾವನ್ನಪ್ಪಿದ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆ ಮಾನ್ವಿ ಪಟ್ಟಣದಲ್ಲಿ ನಡೆದಿದೆ. ಮಾನ್ವಿ ಪಟ್ಟಣದ ಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಈ ಅವಘಡ ಸಂಭವಿಸಿದ್ದು, 3ನೇ ಮಹಡಿಯಿಂದ ಬಿದ್ದು ಬಾಣಂತಿ 22 ವರ್ಷದ ವಾಸವಿ ಸಾವನ್ನಪ್ಪಿದ್ದಾರೆ.
ಆಸ್ಪತ್ರೆ ಕಟ್ಟಡದಿಂದ ಕೆಳಗೆ ಬಿದ್ದ ಮಹಿಳೆ
ವಾಸವಿ ಐದು ದಿನಗಳ ಹಿಂದೆ ಮಗುವಿಗೆ ಜನ್ಮ ನೀಡಿದ್ದರು. ಆದರೆ ನವಜಾತ ಶಿಶು ಅನಾರೋಗ್ಯಕ್ಕೀಡಾಗಿದ್ದರಿಂದ ಮಗುವಿಗೆ ಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೀಗಾಗಿ ಮಗುವಿಗೆ ಎದೆ ಹಾಲು ಕುಡಿಸಲು ಆಸ್ಪತ್ರೆಗೆ ವಾಸವಿ ಬಂದಿದ್ದರು. ಆದರೆ ಮಗುವಿಗೆ ಹಾಲು ಕುಡಿಸುವುದು ಬಿಟ್ಟು ಬಾಣಂತಿ ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ್ದು, ಅವರ ಸಾವು ಈಗ ಭಾರಿ ಅನುಮಾನ ಮೂಡಿಸಿದೆ.
ಇದನ್ನೂ ಓದಿ: ಯಾದಗಿರಿ: ರಸ್ತೆಬದಿ ನವಜಾತ ಗಂಡು ಶಿಶು ಶವಪತ್ತೆ
ಬಹುಶಃ ಅವರೇ ಕಟ್ಟಡದಿಂದ ಕೆಳಗೆ ಹಾರಿ ಸಾವಿಗೆ ಯತ್ನಿಸಿದರ ಎಂಬ ಅನುಮಾನ ಮೂಡಿದೆ. ಇತ್ತ ಬಾಣಂತಿ ಬಿದ್ದು ಮೃತಪಟ್ಟ ದೃಶ್ಯ ಆಸ್ಪತ್ರೆ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂಬ ಮಾಹಿತಿ ಇದ್ದು, ಘಟನೆಗೆ ಸಂಬಂಧಿಸಿದ ಸಿಸಿಟಿವಿ ವಿಡಿಯೋ ಇದ್ರೂ ದೂರು ನೀಡಲು ಆಸ್ಪತ್ರೆ ಸಿಬ್ಬಂದಿ ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬಾಣಂತಿ ಸಾವು ಆಗಿದ್ರೂ ಆಸ್ಪತ್ರೆಯಿಂದ ಎಂಎಲ್ ಸಿ ಸಹ ದಾಖಲು ಮಾಡಿಲ್ಲ, ಹೀಗಾಗಿ ಆಸ್ಪತ್ರೆ ನಡೆ ಬಗ್ಗೆ ಬಾಣಂತಿ ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ. ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ಪೆಟ್ರೋಲ್ ಡಿಸೇಲ್ ಮೇಲಿನ ಅಬಕಾರಿ ಸುಂಕ 10 ರೂ ಇಳಿಸಿದ ಕೇಂದ್ರ ಸರ್ಕಾರ: ಬೆಲೆ ಏರಿಕೆ ಭೀತಿಯಲ್ಲಿದ್ದ ಜನರಿಗೆ ನಿರಾಳ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ