
ಬೆಂಗಳೂರು (ಸೆ.28): ರಾಜಧಾನಿ ಬೆಂಗಳೂರು ಹಾಗೂ ಮುಂಬೈ ನಡುವೆ ಮತ್ತೊಂದು ಸೂಪರ್‌ಫಾಸ್ಟ್ ರೈಲು ಸಂಚಾರಕ್ಕೆ ರೈಲ್ವೆ ಸಚಿವಾಲಯ ಸಮ್ಮತಿಸಿದೆ. ಇದರೊಂದಿಗೆ ಉಭಯ ನಗರಗಳ ಜನರ 30 ವರ್ಷಗಳ ಬೇಡಿಕೆ ಈಡೇರಿದಂತಾಗಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಶೀಘ್ರ ಉಭಯ ನಗರಗಳ ನಡುವೆ ಸೂಪರ್ ಫಾಸ್ಟ್ ರೈಲು ಸಂಚಾರ ಆರಂಭಿಸಲಾಗುವುದು. ಈ ನಗರಗಳ ಸ್ಟೇಷನ್‌ಗಳ ಸಾಮರ್ಥ್ಯ ಹೆಚ್ಚಳದ ಪರಿಣಾಮ ಈ ರೈಲುಗಳು ಸಂಚಾರ ಸಾಧ್ಯವಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಉಭಯ ನಗರಗಳು ಅತ್ಯಂತ ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು, ಸದ್ಯ ಈ ಎರಡು ನಗರಗಳ ನಡುವೆ ಉದ್ಯಾನ ಎಕ್ಸ್‌ಪ್ರೆಸ್ ರೈಲು ಸಂಚಾರವಿದ್ದು, 24 ಗಂಟೆ ಪ್ರಯಾಣ ಮಾಡಬೇಕಾಗಿದೆ. ಉಭಯ ನಗರಗಳು ಸಾಕಷ್ಟು ಬೆಳೆದಿದ್ದರೂ ಕೇವಲ ಒಂದು ರೈಲು ಸೇವೆ ಮಾತ್ರ ಇತ್ತು. ಕಳೆದ ವರ್ಷವೊಂದರಲ್ಲೇ ಉಭಯ ನಗರಗಳ ನಡುವೆ 26 ಲಕ್ಷ ಜನ ವಿಮಾನ ಪ್ರಯಾಣ ಮಾಡಿದ್ದಾರೆ. ಹೊಸ ರೈಲು ಸೇವೆಯಿಂದ ಪ್ರಯಾಣ ಲಕ್ಷಾಂತರ ಜನರಿಗೆ ಅನುಕೂಲಕರವಾಗಲಿದೆ ಎಂದು ಬೆಂಗಳೂರು ದಕ್ಷಿಣ ಸಂಸದರೂ ಆಗಿರುವ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸಿದ್ದಾರೆ.
ಹೊಸ ರೈಲು ಘೋಷಣೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ತೇಜಸ್ವಿ ಸೂರ್ಯ ಧನ್ಯವಾದ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ