ಬಂಗಾಳಕೊಲ್ಲಿ ವಾಯುಭಾರ ಕುಸಿತ; ಇಂದಿನಿಂದ 5 ದಿನಗಳ ಕಾಲ ಮತ್ತೆ ಮಳೆ!

By Ravi JanekalFirst Published Sep 8, 2023, 9:25 AM IST
Highlights

ಬಂಗಾಳಕೊಲ್ಲಿಯಲ್ಲಿ  ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ  5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಬಹುತೇಕ ಕಡೆಗಳಲ್ಲಿ ಬಾರೀ ಮಳೆಯಾಗಲಿದೆ

ಬೆಂಗಳೂರು (ಸೆ.8) ಬಂಗಾಳಕೊಲ್ಲಿಯಲ್ಲಿ  ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ  5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಬಹುತೇಕ ಕಡೆಗಳಲ್ಲಿ ಬಾರೀ ಮಳೆಯಾಗಲಿದೆ.

ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರ್ಗಿ, ವಿಜಯಪುರ ಹಾಗೂ ದ.ಒಳನಾಡಿನ ಕೊಡಗು, ಚಿಕ್ಕಮಗಳೂರು  ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲು ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು,  ದಕ್ಷಿಣ ಕನ್ನಡ, ಉತ್ತರಕನ್ನಡ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ಮುಂದಿನ ಎರಡು ತಿಂಗಳು ವಾಡಿಕೆಗಿಂತ ಕಮ್ಮಿ ಮಳೆ ; ಹವಾಮಾನ ಇಲಾಖೆ ರಿಪೋರ್ಟ್‌ನಲ್ಲಿ ಏನಿದೆ?

ಇನ್ನು ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, fಸಂಜೆ ಅಥವಾ ರಾತ್ರಿ ವೇಳೆಗೆ ಒಂದೆರಡು ಸಲ ಹಗುರದಿಂದ ಸಾಧಾರಣ ಮಳೆ ಸಾಧ್ಯತೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಚಾಮರಾಜನಗರರದಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾವಳಿಯಲ್ಲಿ ಉತ್ತಮ ಹಗುರ ಮಳೆ

ಮಂಗಳೂರಿನಲ್ಲಿ ಬೆಳಗ್ಗಿನಿಂದಲೇ ಮಳೆ ಕಾಣಿಸಿದ್ದು, ಗ್ರಾಮೀಣ ಭಾಗಗಳಲ್ಲಿ ಮಧ್ಯಾಹ್ನ ಬಳಿಕ ಉತ್ತಮ ಮಳೆಯಾಗಿದೆ. ಮಂಗಳೂರಿನಲ್ಲೂ ಸಂಜೆ ವೇಳೆಗೆ ಸಾಧಾರಣ ಧಾರಾಕಾರ ಮಳೆಯಾಗಿದೆ.

ಮಂಗಳೂರಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಇದ್ದು, ಗ್ರಾಮೀಣ ಭಾಗದಲ್ಲಿ ಬೆಳಗ್ಗೆ ಮಾತ್ರ ಮೋಡ, ಬಿಸಿಲು ಕಂಡುಬಂದಿತ್ತು. ಬೆಳ್ತಂಗಡಿ, ಚಾರ್ಮಾಡಿ, ಧರ್ಮಸ್ಥಳ, ಪುತ್ತೂರು, ಸುಳ್ಯಗಳಲ್ಲಿ ಉತ್ತಮ ಮಳೆಯಾಗಿದೆ. ಮುಂದಿನ 2 ದಿನ ಕರಾವಳಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸೆ.6 ರಿಂದ ಕರಾವಳಿ ಭಾಗಗಳಲ್ಲಿ ಮಳೆ ಇನ್ನಷ್ಟು ಚುರುಕಾಗುವ ಲಕ್ಷಣಗಳಿದ್ದು, ಸೆ.6 ಮತ್ತು 7ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. 

ಮಳೆ ಬಾರದಿದ್ರೂ ಲೋಡ್‌ ಶೆಡ್ಡಿಂಗ್‌ ಮಾಡೊಲ್ಲ: ಪ್ರತಿನಿತ್ಯ 40 ಕೋಟಿ ರೂ. ವಿದ್ಯುತ್‌ ಖರೀದಿ ಮಾಡಲಾಗ್ತಿದೆ

ಮಳೆ ಇಲ್ಲದೆ ನೀರಿನ ಮಟ್ಟ ಇಳಿಕೆಯಾಗಿ ಮರಳು ಕಾಣುತ್ತಿದ್ದ ನದಿಗಳಲ್ಲಿ ಮಂಗಳವಾರ ನೀರಿನ ಮಟ್ಟ ತುಸು ಏರಿಕೆಯಾಗಿದೆ. ದಿನಪೂರ್ತಿ ಅಲ್ಲಲ್ಲಿ ಮಳೆಯ ಸಿಂಚನದಿಂದ ಬಿಸಿಲಿನಿಂದ ಬಳಲುತ್ತಿದ್ದ ಜನತೆ ತಂಪಿನ ಅನುಭವದಿಂದ ಖುಷಿ ಪಟ್ಟಿದೆ.

click me!