ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಇಂದು ಮತ್ತು ನಾಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು (ಸೆ.19) : ರಾಜ್ಯದಲ್ಲಿ ಹಲವು ಭಾಗಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ರಾಜ್ಯದಲ್ಲಿ ಮಿಂಚು ಗುಡುಗು ಸಹಿತ ಮಳೆಯಾಗುವ ಬಹಳಷ್ಟು ಸಾಧ್ಯತೆಯಿದೆ. ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಇದ್ದು, ಬಿರುಗಾಳಿಯ ವೇಗವು ಗಂಟೆಗೆ 30-40 ಕಿ.ಮೀ. ಇರಲಿದೆ ಎಂದು ತಿಳಿಸಿದೆ.
ರಾಜ್ಯದ ರೈತರಿಗೆ ಸಿಹಿ ಸುದ್ದಿ: ಈ ತಿಂಗಳಾಂತ್ಯಕ್ಕೆ ಉತ್ತಮ ಮಳೆ?
ಬಿರುಗಾಳಿ ಸಹಿತ ಮಲೆಯಾಗುವ ಹಿನ್ನೆಲೆ ಇಂದು ಮತ್ತು ನಾಳೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಹಿನ್ನೆಲೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ ಹವಾಮಾನ ಇಲಾಖೆ ಎಚ್ಚರಿಸಿದೆ.
ಇನ್ನು ಕೊಡಗು , ಹಾಸನ ಚಿಕ್ಕಮಗಳೂರಿನ , ಶಿವಮೊಗ್ಗ ,ವಿಜಯಪುರ, ಯಾದಗಿರಿಯ, ರಾಯಚೂರು, ಚಿತ್ರದುರ್ಗ, ತುಮಕೂರಿನ, ರಾಮನಗರ, ಚಾಮರಾಜಗರ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆ ಸಾಧ್ಯತೆಯಿದೆ.
ಜಾಗರೂಕರಾಗಿರಿ! ಡೆಂಗ್ಯೂ ಸೊಳ್ಳೆಗಳು ರೆಫ್ರಿಜರೇಟರ್‌ನಲ್ಲೂ ಹುಟ್ಟುತ್ತೆ !
ಬೆಂಗಳೂರು ನಗರದಲ್ಲಿ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಸಂಜೆ, ರಾತ್ರಿ ವೇಳೆ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ತಿಳಿಸಿದೆ.