ಇಂದಿನಿಂದ ರಾಜ್ಯದಲ್ಲಿ 5 ದಿನಗಳ ಕಾಲ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

Published : Jul 20, 2023, 08:26 AM IST
ಇಂದಿನಿಂದ ರಾಜ್ಯದಲ್ಲಿ 5 ದಿನಗಳ ಕಾಲ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಸಾರಾಂಶ

ಇಂದಿನಿಂದ ರಾಜ್ಯದಲ್ಲಿ 5 ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆ ಆಗಲಿರುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ಕರಾವಳಿ ಸೇರಿದಂತೆ ಒಳನಾಡಿನಲ್ಲಿ ನೈರುತ್ಯ ಮುಂಗಾರು ಜೋರಾಗುವ ಸಾಧ್ಯತೆಯಿದ್ದು, ಸಮುದ್ರ ಮಟ್ಟದಲ್ಲಿ ಗಾಳಿಯ ವೇಗ ಹೆಚ್ಚಿರುವುದು ಎಂದು ತಿಳಿಸಿದೆ.

ಬೆಂಗಳೂರು (ಜು.20) : ಇಂದಿನಿಂದ ರಾಜ್ಯದಲ್ಲಿ 5 ದಿನಗಳ ಕಾಲ ಗುಡುಗು, ಮಿಂಚು ಸಹಿತ ಭಾರಿ ಮಳೆ ಆಗಲಿರುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ ಕರಾವಳಿ ಸೇರಿದಂತೆ ಒಳನಾಡಿನಲ್ಲಿ ನೈರುತ್ಯ ಮುಂಗಾರು ಜೋರಾಗುವ ಸಾಧ್ಯತೆಯಿದ್ದು, ಸಮುದ್ರ ಮಟ್ಟದಲ್ಲಿ ಗಾಳಿಯ ವೇಗ ಹೆಚ್ಚಿರುವುದು ಎಂದು ತಿಳಿಸಿದೆ.

ಈ ಹಿನ್ನೆಲೆ  ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇಂದು ಮತ್ತು ನಾಳೆ ಭಾರಿ ಮಳೆ ಬೀಳುವ ಸಾಧ್ಯತೆಯಿದ್ದು,  ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ 5 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.  ದಕ್ಷಿಣ ಒಳನಾಡಿನ ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡಿಗೆ ಇಂದು ಆರೆಂಜ್, ಮುಂದಿನ 4 ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವ ಹವಾಮಾನ ಇಲಾಖೆ, ಸಮುದ್ರದಲ್ಲಿ ಬಿರುಗಾಳಿಯ ವೇಗ 40-45 ರಿಂದ 50 ಇರಲಿದೆ ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

 

ಬೆಳಗಾವಿಯಲ್ಲಿ ಚುರುಕಾದ ಮಳೆ: ರೈತನ ಮೊಗದಲ್ಲಿ ಕಳೆ..!

ಇನ್ನು ಬೆಂಗಳೂರಿನಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣವಿರಲಿದ್ದು, ಕೆಲವೊಮ್ಮೆ ಹಗುರದಿಂದ ಬಾರಿ ಮಳೆಯಾಗುವ ಸಾಧ್ಯತೆಯಿದೆ. ಗಾಳಿಯ ವೇಗ  ಹೆಚ್ಚಿರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಪ್ರಸಾದ್  ಮಾಹಿತಿ ನೀಡಿದ್ದಾರೆ.

BBMP: ಕೆರೆಗಳಿಗೆ ತೂಬು ಅಳವಡಿಕೆ ಯೋಜನೆಗೆ ಗ್ರಹಣ! 

ಮಳೆಗೆ ಮನೆ ಚಾವಣಿ ಕುಸಿದು ನಾಲ್ವರಿಗೆ ಗಾಯ

ಜಮಖಂಡಿ: ಜಿಟಿಜಿಟಿ ಮಳೆಗೆ ಮನೆ ಚಾವಣಿ ಕುಸಿದು ನಾಲ್ವರು ಗಾಯಗೊಂಡ ಘಟನೆ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಮನೆಯಲ್ಲಿದ್ದ ದೀಪಾ ಬಾಹುಬಲಿ ಬಾಗೇವಾಡಿ ಗಂಭೀರ ಗಾಯವಾಗಿದ್ದು, ಅವರ ಮಕ್ಕಳಾದ ಐಶ್ವರ್ಯ ಮತ್ತು ಸಮರ್ಥ ಸಣ್ಣಪುಟ್ಟಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಗೊಂಡ ಪರಿವಾರವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಘಟನಾ ಸ್ಥಳಕ್ಕೆ ಸಾವಳಗಿ ಗ್ರಾಪಂ ಅಧ್ಯಕ್ಷ ಜಿನ್ನುಮತಿ ಉಪಾಧ್ಯೆ ಹಾಗೂ ಉಪಾಧ್ಯಕ್ಷರು ಭೇಟಿ ನೀಡಿ ಪರಿಶೀಲಿಸಿದರು. ಮನೆಯ ಎಲ್ಲ ವಸ್ತುಗಳು ಸಂಪೂರ್ಣ ಹಾಳಾಗಿವೆ. ಈ ಕುರಿತು ಸಾವಳಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್