ಮುಗಿದಿಲ್ಲ ಮಳೆಗಾಲ, ಮುಂದಿನ 5 ದಿನಗಳ ಕಾಲ ಬೆಂಗಳೂರು ಸೇರಿ ರಾಜ್ಯಾದ್ಯಂತ ಮಳೆ ಸಾಧ್ಯತೆ!

By Ravi JanekalFirst Published Nov 27, 2023, 8:56 AM IST
Highlights

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು (ನ.27): ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ವಾರದಿಂದ ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣ ಈ ವಾರವೂ ಮುಂದುವರಿಯಲಿದೆ.  ನಗರದಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಈ ವಾರ ಸ್ವಲ್ಪ ಶೀತ ವಾತಾವರಣ ಹೆಚ್ಚಿರಲಿದೆ ಎಂದು ತಿಳಿಸಿದೆ.

Latest Videos

ಸಾಧಾರಣ ಮಳೆಯಾಗುವ ಸಂಭವ : ಹವಾಮಾನ ಇಲಾಖೆ

ಇನ್ನು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಸಾಧ್ಯತೆ ಇದೆ

ಡಿಸೆಂಬರ್ 2 ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ಇರಲಿದೆ. ಇದೇ ವೇ ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ರೈತರ ಬೆಳೆ ಕಟಾವಿಗೆ ಕಂಟಕವಾಗುವುದೇ 5 ದಿನ ನಿರಂತರ ಮಳೆ? ಹವಾಮಾನ ಇಲಾಖೆ ಎಚ್ಚರಿಕೆ!

ಒಟ್ಟಿನಲ್ಲಿ ಮಳೆಗಾಲ ಮುಗಿದಿದೆ ಎಂದುಕೊಂಡಿದ್ದ ಸಿಲಿಕಾನ್ ಸಿಟಿ ಜನರಿಗೆ ಚುಮುಚುಮು ಚಳಿಯಲ್ಲೂ ಮಳೆಯಾಗುತ್ತಿರುವುದು ಬೆಚ್ಚನೆ ಜಾಗ ಹುಡುಕಾಡುವಂತೆ ಮಾಡಿದೆ. 

click me!