ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ 6 ರಿಂದ 12 ಸೆಂ.ಮೀ ವರೆಗೆ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ 'ಯಲ್ಲೋ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು(ಜು.11): ಕರಾವಳಿ ಹೊರತು ಪಡಿಸಿ ರಾಜ್ಯದ ಉಳಿದ ಕಡೆ ಸ್ವಲ್ಪ ಮಟ್ಟಿಗೆ ಮಳೆಯ ಅಬ್ಬರ ಕಡಿಮೆಯಾಗಿದ್ದು, ಜು.12 ರಿಂದ ಉತ್ತರ ಒಳನಾಡಿನಲ್ಲಿ ಹಾಗೂ ಜು.13 ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ 6 ರಿಂದ 12 ಸೆಂ.ಮೀ ವರೆಗೆ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ 'ಯಲ್ಲೋ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕದಲ್ಲಿ ವಾಡಿಕೆಗಿಂತ ಶೇ.8 ಹೆಚ್ಚು ಮಳೆ: ಮಲೆನಾಡಲ್ಲಿ ಕಮ್ಮಿ..!
ಉಳಿದಂತೆ ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಜು.12 ರಿಂದ 'ಯಲ್ಲೋ ಅಲರ್ಟ್ ಹಾಗೂ ಜು.13 ರಿಂದ ಮೂರು ದಿನ ಹಾಸನ, ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ 'ಯಲ್ಲೋ ಅಲರ್ಟ್' ಎಚ್ಚರಿಕೆ ನೀಡಲಾಗಿದೆ.