ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ, ಬೆಳೆ ನಾಶ

By Kannadaprabha NewsFirst Published May 10, 2024, 10:05 AM IST
Highlights

ಕೊಡಗು, ಬೆಂಗಳೂರು, ಯಾದಗಿರಿ, ದಾವಣಗೆರೆ, ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುಮಾರು ಒಂದರಿಂದ ಮೂರು ಗಂಟೆಗಳ ಕಾಲ ಕಾಲ ಉತ್ತಮ ಮಳೆಯಾಗಿದೆ. 
 
ಬೆಂಗಳೂರು(ಮೇ.10):  ಬಿರು ಬಿಸಿಲ ಝಳದಿಂದ ತತ್ತರಿಸಿದ್ದ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬುಧವಾರ ರಾತ್ರಿಯಿಂದೀಚೆಗೆ ಕೆಲಕಾಲ ಉತ್ತಮ ಮಳೆಯಾಗಿದೆ. 

ಕೊಡಗು, ಬೆಂಗಳೂರು, ಯಾದಗಿರಿ, ದಾವಣಗೆರೆ, ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುಮಾರು ಒಂದರಿಂದ ಮೂರು ಗಂಟೆಗಳ ಕಾಲ ಕಾಲ ಉತ್ತಮ ಮಳೆಯಾಗಿದೆ. 

ಇಂದಿನಿಂದ 5 ದಿನ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ..!

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಬುಧವಾರ ರಾತ್ರಿ ಸುರಿದ ಭಾರೀ ಗಾಳಿ-ಮಳೆಗೆ 200ಕ್ಕೂ ಅಧಿಕ ಎಕರೆ ಪ್ರದೇಶದಲ್ಲಿ ಬೆಳೆದ ಬಾಳೆ ಬೆಳೆ ನೆಲಕ್ಕುರುಳಿದ್ದು, ಲಕ್ಷಾಂತರ ರುಪಾಯಿ ಹಾನಿ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

click me!