ಬೆಂಗಳೂರು ಸೇರಿ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ

Kannadaprabha News   | Kannada Prabha
Published : Jan 27, 2026, 06:42 AM IST
Rain Alert

ಸಾರಾಂಶ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಸೋಮವಾರ ಜಿಟಿಜಿಟಿ ಮಳೆಯಾಗಿದ್ದು, ಚಳಿಯ ತೀವ್ರತೆಯೂ ಹೆಚ್ಚಾಗಿದೆ. ಮಂಗಳವಾರವೂ ಕೂಡ ಮಳೆ ಆಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಸೋಮವಾರ ಜಿಟಿಜಿಟಿ ಮಳೆಯಾಗಿದ್ದು, ಚಳಿಯ ತೀವ್ರತೆಯೂ ಹೆಚ್ಚಾಗಿದೆ. ಮಂಗಳವಾರವೂ ಕೂಡ ಮಳೆ ಆಗುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ಕಳೆದ ಒಂದೆರಡು ವಾರದಲ್ಲಿ ಚಳಿ ಪ್ರಮಾಣ ಕಡಿಮೆ

ಕಳೆದ ಒಂದೆರಡು ವಾರದಲ್ಲಿ ಚಳಿ ಪ್ರಮಾಣ ಕಡಿಮೆಯಾಗಿತ್ತು. ಆದರೆ ಈಗ ಪುನಃ ಚಳಿ ಪ್ರಮಾಣ ಹೆಚ್ಚಾಗಿದೆ. ಬೆಂಗಳೂರು ನಗರದಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ತಾಪಮಾನ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಕುಸಿತಗೊಂಡಿತ್ತು. ಮಧ್ಯಾಹ್ನ ವರೆಗೆ ಮೋಡಕವಿದ ವಾತಾವರಣವಿತ್ತು. ಮಧ್ಯಾಹ್ನ ಬಳಿಕ ಆರಂಭವಾದ ತುಂತುರು ಮಳೆ ಅಲ್ಲಲ್ಲಿ ರಾತ್ರಿವರೆಗೂ ಮುಂದುವರಿದಿತ್ತು. ರಾತ್ರಿ ವೇಳೆ ತಾಪಮಾನ ಮತ್ತಷ್ಟು ಕುಸಿದು ಚಳಿ ಹೆಚ್ಚಾಗಿತ್ತು.

ಮೋಡ ಕವಿದ ವಾತಾವರಣ

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು, ಚಾಮರಾಜನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಕೊಡಗು, ಹಾಸನದಲ್ಲಿ ತಂಪುಗಾಳಿ, ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಮಳೆಯ ಮುನ್ಸೂಚನೆ ಇದೆ. ಮುಂದಿನ 48 ಗಂಟೆಗಳಲ್ಲಿ ಇದೇ ವಾತಾವರಣ ಇರುವುದಾಗಿ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಕನಿಷ್ಠ ತಾಪಮಾನ 18ರಿಂದ 22 ಡಿಗ್ರಿ

ಕರಾವಳಿ ಕರ್ನಾಟಕ ಮತ್ತು ಉತ್ತರ ಒಳನಾಡಿನಲ್ಲಿ ಚಳಿ, ಒಣಹವೆಯಿದೆ. ಬೀದರ್‌, ಧಾರವಾಡ, ಬೆಳಗಾವಿ, ದಾವಣಗೆರೆ, ಹಾಸನ, ಮೈಸೂರಿನಲ್ಲಿ ಕನಿಷ್ಠ ತಾಪಮಾನ 11-14 ಡಿಗ್ರಿ ಸೆಲ್ಸಿಯಸ್‌ಗಳಷ್ಟಿದೆ. ವಿಜಯಪುರ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ರಾಯಚೂರು, ಚಿತ್ರದುರ್ಗದಲ್ಲಿ ಕನಿಷ್ಠ ತಾಪಮಾನ 14ರಿಂದ 18 ಡಿಗ್ರಿ ಸೆಲ್ಸಿಯಸ್‌ ಇದೆ. ಇನ್ನು ಕರಾವಳಿ ಭಾಗದಲ್ಲಿ ಕನಿಷ್ಠ ತಾಪಮಾನ 18ರಿಂದ 22 ಡಿಗ್ರಿ ಸೆಲ್ಸಿಯಸ್‌ಗಳಷ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪೆಕ್ಸ್‌ ನಿರ್ದೇಶಕರ ಜತೆ ಸಿಎಂ ಚಾಯ್‌ ಪೇ ಚರ್ಚಾ ಮಾತುಕತೆ
ಗೌರ್ನರ್‌ಗೆ ಅಗೌರವ : ಇಂದು ವಿಪಕ್ಷ ಸಮರ - ಕೈ ವಿರುದ್ಧ ಬಿಜೆಪಿ- ಜೆಡಿಎಸ್‌ ಹೋರಾಟ