ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಿದ್ದರೂ ರಾಜ್ಯಕ್ಕೆ ಈ ಬಾರಿ ಮುಂಗಾರು ಆಗಮನ ತಡವಾಗಲಿದೆ. ವಾಡಿಕೆಯಂತೆ ಜೂನ್ ಆರಂಭದಲ್ಲಿ ಸುರಿವ ಮಳೆ ಈ ಬಾರಿ ಇನ್ನಷ್ಟು ತಡವಾಗಲಿದೆ.
ಬೆಂಗಳೂರು(ಮೇ 15): ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಿದ್ದರೂ ರಾಜ್ಯಕ್ಕೆ ಈ ಬಾರಿ ಮುಂಗಾರು ಆಗಮನ ತಡವಾಗಲಿದೆ. ವಾಡಿಕೆಯಂತೆ ಜೂನ್ ಆರಂಭದಲ್ಲಿ ಸುರಿವ ಮಳೆ ಈ ಬಾರಿ ಇನ್ನಷ್ಟು ತಡವಾಗಲಿದೆ.
ರಾಜ್ಯಕ್ಕೆ ತಡವಾಗಿ ಮುಂಗಾರು ಮಳೆ ಪ್ರವೇಶ ಮಾಡಲಿದ್ದು, ಈ ಬಾರಿ ತಡವಾಗಿ ಅಂದ್ರೆ ಜೂನ್ ಎರಡನೇ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
undefined
ಶಿವಮೊಗ್ಗದಲ್ಲಿ ಸುರಿದ ಧಾರಾಕಾರ ಮಳೆಗೆ ಮನೆ ಜಖಂ
ವಾಡಿಕೆಯಂತೆ ಜೂನ್ ಮೊದಲ ವಾರದಲ್ಲಿ ನೈರುತ್ಯ ಮುಂಗಾರು ಪ್ರವೇಶವಾಗುತಿತ್ತು. ನೈರುತ್ಯ ಮುಂಗಾರು ಕೇರಳದಿಂದ ಆರಂಭವಾಗಲಿದ್ದು, ಕೇರಳದಲ್ಲಿ ಜೂನ್ ಐದರ ನಂತರ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕೇರಳಕ್ಕೆ ಮುಂಗಾರು ಪ್ರವೇಶಿಸಿದ ಬಳಿಕ ಎರಡು ಮೂರುದಿನದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವೊಂದು ಕಾಣಿಸಿಕೊಳ್ಳುವ ಸಾಧ್ಯತೆಯಿಂದ ನೈರುತ್ಯ ಮುಂಗಾರು ತಡವಾಗಿ ಪ್ರವೇಶ ಮಾಡಲಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.