ರಾಜ್ಯದಲ್ಲಿ ಇನ್ನೂ 2 ದಿನ ಮಳೆಯ ಮುನ್ಸೂಚನೆ

By Web DeskFirst Published Nov 24, 2018, 8:32 AM IST
Highlights

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಜಿಲ್ಲೆಗಳ ವಿವಿಧೆಡೆ ತುಂತುರು ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ ವಾತಾವರಣ ಮುಂದುವರೆಯಲಿದೆ.

ಬೆಂಗಳೂರು[ನ.24]: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಜಿಲ್ಲೆಗಳ ವಿವಿಧೆಡೆ ತುಂತುರು ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ ವಾತಾವರಣ ಮುಂದುವರೆಯಲಿದೆ.

ಇದನ್ನೂ ಓದಿ: ಕೈಕೊಟ್ಟಹಿಂಗಾರು ಮಳೆ : ಕೇವಲ ಶೇ.38ರಷ್ಟು ಬಿತ್ತನೆ

ಗಜ ಚಂಡು ಮಾರುತದ ಬೆನ್ನಲ್ಲೇ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಬೀಸುತ್ತಿರುವ ಗಾಳಿ, ಚಳಿಯ ಜೊತೆಗೆ ತುಂತುರು ಹನಿಗಳನ್ನೂ ಹೊತ್ತು ತರುತ್ತಿದೆ. ಇದೇ ವಾತಾವರಣ ಇನ್ನೂ ಎರಡು ದಿನ ಮುಂದುವರೆಯಲಿದೆ. ಶುಕ್ರವಾರ ಬೆಂಗಳೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ ಜಿಲ್ಲೆಗಳಾದ್ಯಂತ ಕೆಲ ಕಾಲ ಜಿಟಿ ಜಿಟಿ ಮಳೆ ಮಳೆಯಾಗಿದೆ. ಬೆಳಗ್ಗೆಯಿಂದಲೇ ದಟ್ಟಮೋಡ ಮೋಡ ಮುಸುಕಿದ ವಾತಾವರಣ ಸಂಜೆ ವೇಳೆಗೆ ಎಲ್ಲೆಡೆ ತುಂತುರು ಮಳೆ ತಂದೆರಚಿದೆ.

ಇದನ್ನೂ ಓದಿ: ರಾಜ್ಯಕ್ಕೂ ಮದ‘ಗಜ’ ಎಂಟ್ರಿ : ಎಲ್ಲೆಲ್ಲಾ ಸುರಿಯುತ್ತೆ ಮಳೆ..?

ಇನ್ನೂ ಎರಡು ದಿನ ದಕ್ಷಿಣ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆಯಲಿದ್ದು, ಆಗಾಗ ಅಲ್ಲಲ್ಲಿ ತುಂತುರು ಮಳೆಯನ್ನು ಸುರಿಸಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಡಾ.ಪ್ರಭು ತಿಳಿಸಿದ್ದಾರೆ.

click me!