ಕರ್ನಾಟಕದಲ್ಲಿ ಮತ್ತೆ ಮಳೆ: ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ, ಆರೇಂಜ್ ಅಲರ್ಟ್

By Suvarna News  |  First Published Jul 18, 2021, 4:53 PM IST

* ಹಲವೆಡೆ ಇನ್ನೂ ಮೂರು ದಿನ ಮಳೆ 
* ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ 
* ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್‌ ಅಲರ್ಟ್‌


ಬೆಂಗಳೂರು, (ಜು.18): ಕರ್ನಾಟಕದಾದ್ಯಂತ ಇನ್ನೂ 3 ದಿನಗಳ ಕಾಲ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಜುಲೈ 21ರವರೆಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸುರಿಯುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ತೀವ್ರತೆ ಹೆಚ್ಚಾಗಲಿದೆ. 

Tap to resize

Latest Videos

ಮಲೆನಾಡು ಕರಾವಳಿಯಲ್ಲಿ ಭಾರೀ ಮಳೆ : ಜಿಲ್ಲಾಧಿಕಾರಿಗಳ ಜತೆ ಸಚಿವೆ ಶೋಭಾ ಸಭೆ

ಜು.18 ಮತ್ತು 21ರವರೆಗೆ ನಾಲ್ಕು ದಿನಗಳ ಕಾಲ ಕರಾವಳಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಈ ಭಾಗಗಳಲ್ಲಿ ಈಗಾಗಲೇ ಎಡೆಬಿಡದೆ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಎಚ್ಚರಿಕೆಯಿಂದಿರುವಂತೆ ಇಲಾಖೆ ತಿಳಿಸಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಜುಲೈ 18ರಿಂದ 19ರವರೆಗೆ ಆರೆಂಜ್‌ ಅಲರ್ಟ್‌ ಹಾಗೂ ಜುಲೈ 20 ಮತ್ತು 21ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. 

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆಯಲ್ಲಿ ಮುಂದಿನ 48 ಗಂಟೆ ಆರೆಂಜ್ ಅಲರ್ಟ್ ಇರಲಿದೆ. ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ ಮತ್ತು ಮೈಸೂರಿನಲ್ಲಿ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಇರಲಿದೆ. ಮೂರು ದಿನಗಳಿಂದ ಬೆಂಗಳೂರಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

click me!