
ಬೆಂಗಳೂರು(ಏ.01): ಕೃಷಿಗೆ ಮಾರಕವಾದ ಕಾಯ್ದೆಗಳನ್ನು ರದ್ದು ಮಾಡದ ಬಿಜೆಪಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರೈತ ಸಂಘದ ಮುಖಂಡರು, ಕಾರ್ಯಕರ್ತರು ಮತ ನೀಡಬಾರದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ 2020 ರ ಕೃಷಿ ಕಾಯ್ದೆಗೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವರ್ಷದ ಬಳಿಕ ಕೇಂದ್ರ ಸರ್ಕಾರ ಕಾಯ್ದೆ ವಾಪಸ್ ಪಡೆದಿದೆ. ಆದರೆ ಕರ್ನಾಟಕ ರಾಜ್ಯದಲ್ಲಿ ಮಾತ್ರ ಇದನ್ನು ಜಾರಿಗೆ ತಂದಿದ್ದು, ಮತ್ತೆ ತಳಮಟ್ಟಕ್ಕೆ ಕಾಯ್ದೆಯನ್ನು ಪರಿಣಾಮಕಾರಿಯಾಗಿ ವಿಸ್ತರಿಸಿದ್ದಾರೆ. ಆದ್ದರಿಂದ ಬಿಜೆಪಿಗೆ ಮತ ಹಾಕುವುದಿಲ್ಲ ಎಂದು ವಿವರಿಸಿದರು.
ಆಮಿಷಕ್ಕೆ ಒಳಗಾಗದೇ ರೈತರ ಏಳ್ಗೆಗೆ ಕಟಿಬದ್ಧರಾಗಿ: ಕೋಡಿಹಳ್ಳಿ ಚಂದ್ರಶೇಖರ
ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆ, ಕೃಷಿ ಮಾರುಕಟ್ಟೆಕಾಯ್ದೆ, ಜಾನುವಾರು ಹತ್ಯೆ ತಡೆ ಕಾಯ್ದೆ ಜಾರಿಗೆ ತಂದು ಕೃಷಿಕರನ್ನು ಕೃಷಿಯಿಂದ ವಿಮುಖ ಮಾಡಿ ಕಾರ್ಪೊರೇಟ್ ಕಂಪನಿಗಳಿಗೆ ಅವಕಾಶ ಮಾಡಿಕೊಡಲು ಮುಂದಾಗಿದೆ. ಆದ್ದರಿಂದ ಬಿಜೆಪಿಗೆ ರೈತರು ಮತ ಹಾಕಬಾರದು. ರೈತರಿಗೆ ಮಾರಕವಾದ ಕಾಯ್ದೆ ರದ್ದುಪಡಿಸುವುದಾಗಿ ಭರವಸೆ ನೀಡಿದರೆ ಬೆಂಬಲ ನೀಡಲಾಗುವುದು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಕ್ಕೆ ಪತ್ರ ಬರೆಯಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ