
ಜೈಪುರ(ಜೂ.15): ರಾಜಸ್ಥಾನ ಭವನ ನಿರ್ಮಾಣಕ್ಕೆ ಜಾಗ ಕೋರಿ ಕರ್ನಾಟಕ ಮುಖ್ಯಮಂತ್ರಿ ಸೇರಿದಂತೆ 3 ರಾಜ್ಯಗಳ ಮುಖ್ಯಮಂತ್ರಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬುಧವಾರ ಪತ್ರ ಬರೆದಿದ್ದಾರೆ. ರಾಜ್ಯದ ರಾಜಧಾನಿಗಳಲ್ಲಿ 32300 ಚದರ ಅಡಿ ಜಾಗ ನೀಡುವಂತೆ ಅವರು ಮನವಿ ಮಾಡಿದ್ದಾರೆ.
ದೇಶದ ಐಟಿ ಹಬ್‌ಆಗಿರುವ ಬೆಂಗಳೂರಿನಲ್ಲಿ ರಾಜಸ್ಥಾನ ಭವನ ನಿರ್ಮಾಣ ನಿರ್ಮಾಣ ಮಾಡಲು ಅವಕಾಶ ನೀಡುವುದನ್ನು ನಾವು ಸ್ವಾಗತಿಸುತ್ತೇವೆ. ಇದರಿಂದಾಗಿ ಉಭಯ ರಾಜ್ಯಗಳ ಸಂಸ್ಕೃತಿ ಹಂಚಿಕೊಳ್ಳಲು ಮತ್ತು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಇದರಿಂದ ಅನುಕೂಲವಾಗಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದಲ್ಲಿ ಗೆಹ್ಲೋಟ್ ಹೇಳಿದ್ದಾರೆ.
ರಾಜಸ್ಥಾನ ಸಿಎಂ ಹಾಗೂ ಪುತ್ರನಿಗೆ ಸಂಕಷ್ಟ: ಬಿಜೆಪಿ ಸಂಸದರಿಂದ ಇ.ಡಿ.ಗೆ ದೂರು
ಅದೇ ರೀತಿ ಕೋಲ್ಕತಾದಲ್ಲಿ ರಾಜಸ್ಥಾನ ಭವನ ನಿರ್ಮಾಣ ಮಾಡುವುದರಿಂದ ನಮ್ಮ ರಾಜ್ಯದ ಜನರಿಗೆ ತಮ್ಮದೇ ರಾಜ್ಯದಲ್ಲಿರುವ ಭಾವನೆ ಸಿಗಲಿದೆ. ಮುಂದಿನ ದಿನಗಳಲ್ಲಿ ಉಭಯ ರಾಜ್ಯಗಳ ನಡುವೆ ಸಾಂಸ್ಕೃತಿಕ ಸಂವಹನಕ್ಕೆ ಇದು ಸಹಕಾರಿಯಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.
ಚೆನ್ನೈನಲ್ಲಿ ರಾಜಸ್ಥಾನ ಭವನ ನಿರ್ಮಾಣ ಮಾಡುವುದರಿಂದ ಉಭಯ ರಾಜ್ಯಗಳ ಸಂಸ್ಕೃತಿ ವಿನಿಮಯಕ್ಕೆ ಇದು ನೆರವಾಗಲಿದ್ದು, ರಾಜ್ಯ ಪ್ರವಾಸದಲ್ಲಿರುವ ರಾಜಸ್ಥಾನದ ಪ್ರವಾಸಿಗರಿಗೆ ರಾಜಸ್ಥಾನದ ಊಟ ಸಿಗುವುದರಿಂದ ಅವರಿಗೆ ಮನೆಯ ಅನುಭವವಾಗಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ