
ಬೆಂಗಳೂರು(ಆ.06): ಕೇಂದ್ರದ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಜೊತೆ ಮಾತುಕತೆ ನಮ್ಮ ಬೆಂಗಳೂರು ಫೌಂಡೇಷನ್‌ನಿಂದ ವೆಬಿನಾರ್ ನಡೆಯಲಿದೆ. ಇದರಲ್ಲಿ ಕೊರೋನಾ ವೈರಸ್ ಮೂರನೇ ಅಲೆಯನ್ನು ತಡೆಯುವ ಕುರಿತು ಚರ್ಚೆ ನಡೆಯಲಿದೆ. ಆಗಸ್ಟ್ 7ರಂದು ಸಂಜೆ 7.30ರಿಂದ 8.30ರ ತನಕ ಚರ್ಚೆ ನಡೆಯಲಿದೆ.
ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಕೇಂದ್ರದ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ವೆಬಿನಾರ್‌ನಲ್ಲಿ ಭಾಗವಹಿಸಲಿದ್ದು, ಕೊರೋನಾ ಮೂನೇ ಅಲೆಯನ್ನು ತಡೆಯುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಲಿದ್ದಾರೆ.
ಸಾಮಾಜಿಕ ಜಾಲತಾಣ ಬ್ಲಾಕ್ ಮಾಡುವ ಚಿಂತನೆ ಇಲ್ಲ: RC
ಆಸಕ್ತರು https://us02web.zoom.us/j/85954354185?pwd=c2l2bDFBTzQ0dzNadm1ydk5sYkpBdz09 ನಲ್ಲಿ ಸಂಜೆ 7.20ಕ್ಕೆ ಲಾಗಿನ್ ಆಗಿ ಈ ವೆಬಿನಾರ್‌ನಲ್ಲಿ ಭಾಗವಹಿಸಬಹುದಾಗಿದೆ.
ದೇಶದಲ್ಲಿ ಕೊರೋನಾ ಭೀಕರ ಎರಡನೇ ಅಲೆಯ ನಂತರ ಈಗ ಮೂರನೇ ಅಲೆಯ ಭೀತಿ ಹೆಚ್ಚಾಗಿದೆ. ಈಗಾಗಲೇ ನೆರೆ ರಾಜ್ಯ ಕೇರಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ನಿಟ್ಟಿನಲ್ಲಿ ಮೂರನೇ ಅಲೆ ತಡೆಯುವ ಪ್ರಯತ್ನವನ್ನು ನಡೆಸಲಾಗುತ್ತಿದೆ.
ಕರ್ನಾಟಕದಲ್ಲಿ ಎರಡು ದಿನಗಳ ಹಿಂದೆ 1769 ಕೇಸುಗಳು ಪತ್ತೆಯಾಗಿತ್ತು. ಕರ್ನಾಟಕದಲ್ಲಿ ಸದ್ಯ 24305 ಸಕ್ರಿಯ ಸೋಂಕಿತರಿದ್ದಾರೆ. ಕೇರಳದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 176048 ಇದ್ದು ಗಡಿಭಾಗದಲ್ಲಿ ಎಚ್ಚರ ವಹಿಸಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ