ರಾಜ್ಯಸಭೆ ಟಿಕೆಟ್: ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ; ಜಗದೀಶ್ ಶೆಟ್ಟರ್

By Suvarna News  |  First Published Jun 9, 2020, 3:12 PM IST

ಬಿಜೆಪಿ ಹೈಕಮಾಂಡ್ ರಾಜ್ಯಸಭಾ ಅಭ್ಯರ್ಥಿಗಳಾಗಿ ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ್ ಗಸ್ತಿ ಅವರಿಗೆ ಟಿಕೆಟ್ ನೀಡಿದೆ. ರಾಜ್ಯಸಭಾ ಟಿಕೆಟ್ ಹಂಚಿಕೆಯಾಗಿರುವ ಬಗ್ಗೆ ಬಿಜೆಪಿ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ.


ಹುಬ್ಬಳ್ಳಿ(ಜೂ.09): ಪ್ರಭಾಕರ್ ಕೋರೆ ಹಾಗೂ ರಮೇಶ್ ಕತ್ತಿಯವರಿಗೆ ರಾಜ್ಯಸಭೆಗೆ ಅವಕಾಶ ಸಿಕ್ಕಿಲ್ಲ ಎಂಬ ಕಾರಣದಿಂದಾಗಿ ಪಕ್ಷದಲ್ಲಿ ಯಾವುದೇ ಅಸಮಾಧಾನ ಉಂಟಾಗಿಲ್ಲ, ಮುಂದಿನ ದಿನಗಳಲ್ಲಿ ಅವರಿಗೆ ಬೇರೆ ಹುದ್ದೆಯನ್ನು ನೀಡುವ ಬಗ್ಗೆ ಪಕ್ಷ ತೀರ್ಮಾನಿಸಲಿದೆ ಎಂದು ದೊಡ್ಡ ಹಾಗೂ ಮಧ್ಯಮ ಕೈಗಾರಿಕ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ರಾಜ್ಯಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಭಾಕರ್ ಕೋರೆ ಹಾಗೂ ರಮೇಶ್ ಕತ್ತಿ ಪ್ರಬಲ ಆಕಾಂಕ್ಷಿಗಳಾಗಿದ್ದರು. ರಾಜ್ಯ ಬಿಜೆಪಿ ಕೋರ್‌ ಕಮಿಟಿ ಪ್ರಕಾಶ್ ಶೆಟ್ಟಿ, ಕೋರೆ ಹಾಗೂ ಕತ್ತಿ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಿತ್ತು. ಆದರೆ ಬಿಜೆಪಿ ಹೈಕಮಾಂಡ್ ತಳಮಟ್ಟದ ಕಾರ್ಯಕರ್ತರಾದ ಬೆಳಗಾವಿಯ ಈರಣ್ಣ ಕಡಾಡಿ ಹಾಗೂ ರಾಯಚೂರಿನ ಅಶೋಕ್ ಗಸ್ತಿ ಅವರಿಗೆ ಟಿಕೆಟ್ ನೀಡಿದೆ. ಈ ಮೂಲಕ ಅಚ್ಚರಿಯ ಹೆಸರನ್ನು ಬಿಜೆಪಿ ಅಂತಿಮಗೊಳಿಸಿದೆ.

Latest Videos

undefined

ಹುಬ್ಬಳ್ಳಿ-ಧಾರವಾಡ ಸ್ಮಾರ್ಟ್ ಸಿಟಿ ಕಾಮಗಾರಿ ಕುರಿತಂತೆ ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಅವರಿಗೆ ಅಸಮಾಧಾನ ಇದ್ದರೆ, ದೋಷಗಳು ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸುತ್ತೇವೆ ಎಂದು ಶೆಟ್ಟರ್ ಹೇಳಿದ್ದಾರೆ. ಇದೇ ವೇಳೆ ಕೇಂದ್ರದಿಂದ 20 ಲಕ್ಷ ಕೋಟಿ ರುಪಾಯಿ ಪ್ಯಾಕೇಜ್ ಬಿಡುಗಡೆ ಆಗಿದ್ದರೂ ಕೈಗಾರಿಕೆಗಳಿಗೆ ಅದರ ಲಾಭ ಸಿಗುತ್ತಿಲ್ಲ ಎಂಬುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇನ್ನು ಎಂಟರಿಂದ ಹತ್ತು ದಿನಗಳಲ್ಲಿ RBI ಗೈಡ್ ಲೈನ್ಸ್ ಬರಲಿದೆ. ಅದಾದ ಬಳಿಕ ಸಮಸ್ಯೆ ಬಗೆಯರಿಯಲಿದೆ‌ ಎಂದು ಕೈಗಾರಿಕಾ ಸಚಿವರು ಭರವಸೆ ನೀಡಿದ್ದಾರೆ.

ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ಕೊಡಿಸಿದ್ಯಾರು..? ರಾಜ್ಯಸಭಾ ಅಭ್ಯರ್ಥಿಯ ಸೂತ್ರಧಾರಿ ಇವರೇ

ಕಳೆದ ಮಳೆಗಾಲದಲ್ಲಿ ಮಹಾನಗರ ವ್ಯಾಪ್ತಿಯಲ್ಲಿ ಉಂಟಾದ ಸಮಸ್ಯೆ ಈ ಬಾರಿ ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಮಹಾನಗರ ಪಾಲಿಕೆಗೆ ರಾಜ್ಯ ಸರ್ಕಾರದಿಂದ ಇನ್ನೂ 75 ಕೋಟಿ ರೂಪಾಯಿ ಬರಬೇಕು. ಇದರ ಬಗ್ಗೆ ಪ್ರಯತ್ನ ಸಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಶೆಟ್ಟರ್ ಹೇಳಿದ್ದಾರೆ.

click me!