'ಐದು ವರ್ಷ ನಾನೇ ಸಿಎಂ' ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗಲೇಬೇಕು ಎಂದ ರಾಮನಗರ ಶಾಸಕ ಇಕ್ಬಾಲ್!

By Ravi Janekal  |  First Published Nov 2, 2023, 6:09 PM IST

ಒಂದೂವರೆ ವರ್ಷದ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಸಿಎಂ ಆಗಬೇಕು. ಅವರು ಸಿಎಂ ಆಗಬೇಕು ಅನ್ನೋದು ನಮ್ಮ ಆಸೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು.


ಬೆಂಗಳೂರು (ನ.2): ಒಂದೂವರೆ ವರ್ಷದ ಬಳಿಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಸಿಎಂ ಆಗಬೇಕು. ಅವರು ಸಿಎಂ ಆಗಬೇಕು ಅನ್ನೋದು ನಮ್ಮ ಆಸೆ ಎಂದು ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಐದು ವರ್ಷ ನಾನೇ ಸಿಎಂ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರ ಸಂಬಂದ ಮಾದ್ಯಮಗಳು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಡಿಕೆ
ಪಕ್ಷದ ಅಧ್ಯಕ್ಷರಾಗಿ ಸಂಘಟನೆ ಮಾಡಿದ್ದಾರೆ. ಕಳೆದ ಚುನಾವಣೆ ವೇಳೆ ಶಕ್ತಿ ಮೀರಿ ಕೆಲಸ ಮಾಡುವ ಮೂಲಕ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಾರೆ. ಹೀಗಾಗಿ ಡಿಕೆ ಶಿವಕುಮಾರ್‌ಗೆ ಅವಕಾಶ ಸಿಗಲೇಬೇಕು ರಾಜ್ಯದ ಜನತೆ ಕೂಡಾ ಅದನ್ನೇ ಬಯಸಿದ್ದಾರೆ ಎನ್ನುವ ಮೂಲಕ ಡಿಕೆ ಶಿವಕುಮಾರ ಪರ ಬ್ಯಾಟಿಂಗ್ ಮಾಡಿದ ರಾಮನಗರ ಶಾಸಕ ಇಕ್ಬಾಲ್ ಹುಸೇನ್.

Tap to resize

Latest Videos

ಐದು ವರ್ಷವೂ ನಾನೇ ಸಿಎಂ ಆಗಿರ್ತೀನಿ: ಬದಲಾವಣೆ ಬಗ್ಗೆ ಮಾತನಾಡಿದವರಿಗೆ ಎಚ್ಚರಿಕೆ ರವಾನಿಸಿದ ಸಿದ್ದರಾಮಯ್ಯ

ಇಂದು ವಿಜಯಪುರದಲ್ಲಿ ಸಿಎಂ ಬದಲಾವಣೆ ವಿಚಾರ ಮಾತಾಡುವವರು ಕೆಲಸಕ್ಕೆ ಬಾರದವರು ಎಂಬ ಸಿಎಂ ಸ್ವಪಕ್ಷೀಯ ಶಾಸಕರ ವಿರುದ್ಧ ಹೇಳಿಕೆ ಪ್ರಸ್ತಾಪಿಸಿ, ಇಲ್ಲಿ ಕೆಲಸಕ್ಕೆ ಬಾರದವರು ಯಾರೂ ಇಲ್ಲ. ಎಲ್ಲರೂ ಕೆಲಸಕ್ಕೆ ಬರುವವರೇ. ಅವರನ್ನ ಶಾಸಕ ಅಂತ ಕರೆಯುತ್ತಾರೆ. ಅವರ ಬಗ್ಗೆ ಕೀಳಾಗಿ ಮಾತನಾಡಬಾರದು ಎಂದು ತಿರುಗೇಟು ನೀಡಿದರು.

100 ರಮೇಶ್‌ ಜಾರಕಿಹೊಳಿ ಬಂದ್ರೂ ಡಿಕೆಶಿ ಟಚ್‌ ಮಾಡಲಾಗದು: ಶಾಸಕ ಗಣಿಗ ರವಿ

click me!