ರೇಣುಕಾಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ ರಂಭಾಪುರಿಶ್ರೀ

By Ravi Janekal  |  First Published Jun 16, 2024, 5:36 PM IST

ನಟ ದರ್ಶನ್ ಅಂಡ್‌ ಗ್ಯಾಂಗ್‌ನಿಂದ ಭೀಕರವಾಗಿ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ನಿವಾಸಕ್ಕೆ ರಂಭಾಪುರಿ ಶ್ರೀಗಳು ಭೇಟಿ ನೀಡಿ ನೊಂದ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು.


ಚಿತ್ರದುರ್ಗ (ಜೂ.16) ನಟ ದರ್ಶನ್ ಅಂಡ್‌ ಗ್ಯಾಂಗ್‌ನಿಂದ ಭೀಕರವಾಗಿ ಹತ್ಯೆಯಾದ ಚಿತ್ರದುರ್ಗದ ರೇಣುಕಾಸ್ವಾಮಿ ನಿವಾಸಕ್ಕೆ ರಂಭಾಪುರಿ ಶ್ರೀಗಳು ಭೇಟಿ ನೀಡಿ ನೊಂದ ಕುಟುಂಬಸ್ಥರಿಗೆ ಸಂತ್ವಾನ ಹೇಳಿದರು.

ಕುಟುಂಬಸ್ಥರ ಭೇಟಿ ಬಳಿಕ ಮಾತನಾಡಿದ ಶ್ರೀಗಳು, ರೇಣುಕಾಸ್ವಾಮಿ ಕೊಲೆ ಅಮಾನವೀಯ ಕೃತ್ಯವಾಗಿದೆ. ಈ ಪ್ರಕರಣವನ್ನು ಎಲ್ಲರೂ ಖಂಡಿಸಬೇಕಾದ ಅಗತ್ಯವಿದೆ. ಇತ್ತೀಚೆಗೆ ಇಂಥ ಘಟನೆಗಳು ಬಹಳ ಕಡೆ ನಡೆಯುತ್ತಿರುವುದು ಆತಂಕ ಮೂಡಿಸಿದೆ. ಯಾವುದೇ ಪಕ್ಷದ ಸರ್ಕಾರವಿರಲಿ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಈ ಪ್ರಕರಣದಲ್ಲಿ ಪೊಲೀಸರ ಕಾರ್ಯಾಚರಣೆ ಮೆಚ್ಚುಗೆಗೆ ಪಾತ್ರವಾಗಿದೆ. ಆದರೇನು ಮಾಡುವುದು ಕುಟುಂಬಕ್ಕೆ ಆಧಾರವಾಗಿದ್ದ ಮಗನನ್ನು ಕಳೆದುಕೊಂಡು ಪತ್ನಿ, ಪೋಷಕರು ಕಣ್ಣೀರ ಕಡಲಲ್ಲಿ ಮುಳುಗಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ಸರ್ಕಾರದಿಂದ ನೆರವು ಮಾತ್ರವಲ್ಲ, ಪತ್ನಿಗೆ ಸರ್ಕಾರಿ ಉದ್ಯೋಗ ಕಲ್ಪಿಸಬೇಕು.

Tap to resize

Latest Videos

undefined

ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ರಾ ದರ್ಶನ್? ಸಿಪಿವೈ ಸ್ಫೋಟಕ ಹೇಳಿಕೆ

ಇತ್ತೀಚಿನ ಸರ್ಕಾರದ ಅವಧಿಯಲ್ಲಿ ಹುಬ್ಬಳ್ಳಿಯಲ್ಲಿ ಸಹ ಇಂತಹ ಘಟನೆಗಳಾಗಿವೆ. ನೇಹಾ ಹಿರೇಮಠ, ಅಂಜಲಿಯಂತಹ ಅಮಾಯಕ ಜೀವಗಳು ಬಲಿಯಾಗಿದ್ದು ದುರದೃಷ್ಟಕರ. ದುಷ್ಟರು ಸಿನಿಮೀಯ ರೀತಿಯಲ್ಲಿ ಹತ್ಯೆ ಮಾಡುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ಸ್ಥಿತಿ ಬಂದಿದೆ. ಮಾನವ ಕುಲಕೋಟಿಗೆ ವ್ಯಥೆಯಾಗಿದೆ. ಮಹಿಳೆಯರು, ಮಕ್ಕಳು ಹೊರಬರಲಾಗದಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಕಳವಳವ್ಯಕ್ತಪಡಿಸಿದರು.

click me!