Rameshwaram cafe Blast: ತನಿಖೆಯಲ್ಲಿ ತಂತ್ರಜ್ಞಾನ ಬಳಸಿಕೊಂಡು ಬಾಂಬ್‌ ಸ್ಫೋಟ ಪ್ರಕರಣ ಭೇದಿಸಿ: ಸಿಎಂ ಸೂಚನೆ

Published : Mar 03, 2024, 07:39 AM IST
Rameshwaram cafe Blast: ತನಿಖೆಯಲ್ಲಿ ತಂತ್ರಜ್ಞಾನ ಬಳಸಿಕೊಂಡು ಬಾಂಬ್‌ ಸ್ಫೋಟ ಪ್ರಕರಣ ಭೇದಿಸಿ: ಸಿಎಂ ಸೂಚನೆ

ಸಾರಾಂಶ

ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲು ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು (ಮಾ.3) : ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲು ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಶನಿವಾರ ಗೃಹ ಇಲಾಖೆಯ ಉನ್ನತ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿ. ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು. ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂತಹ ಪ್ರದೇಶಗಳಲ್ಲಿ ಪೊಲೀಸ್‌ ಗಸ್ತು ಹೆಚ್ಚಿಸಿ, ಜನರಿಗೆ ರಕ್ಷಣೆ ಒದಗಿಸಬೇಕು. ಇಂತಹ ಘಟನೆಗಳು ನಡೆದಾಗ ಪೊಲೀಸರು ಎಚ್ಚರಿಕೆ ವಹಿಸಿ ನಂತರ ಮರೆಯುವುದು ಆಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಖಡಕ್‌ ಸೂಚನೆ ನೀಡಿದರು.

ಸಮಾಜ ದ್ರೋಹಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ:

ಗುಪ್ತದಳ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು. ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯಲಾಗುವುದು. ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು ಎಂದು ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಚಿವ ಪ್ರಿಯಾಂಕ್‌ ಖರ್ಗೆ, ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಯಕ್ಷಗಾನ ಕಲಾವಿದರ ಅಪಮಾನ: 'ಬಿಳಿಮಲೆಗೆ ಒಂದು ನೋಟಿಸ್ ಕೊಡೋಕೂ ಕಷ್ಟವೇ? ಸುನೀಲ್ ಕುಮಾರ್ ಪ್ರಶ್ನೆ, ಈ ವಿಷಯ ದೊಡ್ಡದು ಮಾಡೋದು ಬೇಡ ಎಂದ ತಂಗಡಗಿ
ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!