
ಶಿವಮೊಗ್ಗ (ಮಾ.1): ಲೋಕಸಭಾ ಚುನಾವಣೆ ಸಮೀಪಿಸಿರುವುದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣವನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರನ್ನೇ ಬೆಚ್ಚಿಬಿಳಿಸಿದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ಮಾಧ್ಯಮ ಪ್ರತಿನಿಧಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ರಾಮೇಶ್ವರಂ ಕೆಫೆ ಸ್ಫೋಟಗೊಂಡು ಐದಾರು ಗಂಟೆ ಕಳೆದರೂ ಯಾವ ಸಂಘಟನೆ ಇದರ ಹೊಣೆ ಹೊತ್ತಿಲ್ಲ. ಕೇರಳದಲ್ಲಿ ನಡೆಯುತ್ತಿದ್ದ ಬಾಂಬ್ ಬ್ಲಾಸ್ಟ್ ಪ್ರಕರಣಗಳು ಈಗ ಕರ್ನಾಟಕಕ್ಕೆ ಶಿಫ್ಟ್ ಆಗಿದೆ ಎಂದು ಸಂದೇಹ ವ್ಯಕ್ತಪಡಿಸಿದರು.
ರಾಮೇಶ್ವರ ಕೆಫೆ ಬ್ಲಾಸ್ಟ್ ಪ್ರಕರಣದಲ್ಲೂ 'ನಮ್ಮ ಬ್ರದರ್ಸ್' ಅಂತಾ ನೆಗ್ಲೆಟ್ ಮಾಡ್ಬೇಡಿ; ಎನ್ ರವಿಕುಮಾರ್
ಈ ಹಿಂದೆ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಡಿಸಿಎಂ ಡಿಕೆ ಶಿವಕುಮಾರ, 'ಅವರು ನಮ್ಮ ಬ್ರದರ್ಸ್ ತಪ್ಪೇ ಆಗಿಲ್ಲ' ಎಂದಿದ್ದರು. ಅನಂತರ ತನಿಖೆ ಮಾಡಿದಾಗ ಆರೋಪಿಯ ಹಿಂದೆ ರಾಷ್ಟ್ರದ್ರೋಹಿ ಸಂಘಟನೆ ಜಾಲ ಇರುವುದು ಪತ್ತೆಯಾಗಿತ್ತು. ಮೊನ್ನೆ ನಾಸಿರ್ ಹುಸೇನ್ ಬೆಂಬಲಿಗರು ವಿಧಾನ ಸೌಧದ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದರು. ಮತ್ತೆ ಇದೇ ಡಿಕೆ ಶಿವಕುಮಾರ್, ಲಕ್ಷ್ಮೀ ಹೆಬ್ಬಾಳ್ಕರ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ ಎಂದು ಮೊಂಡುವಾದ ಮಾಡಿದ್ರು. ಈ ನಾಯಕರಿಗೆ ಕಣ್ಣಿಲ್ಲವಾ? ಕಿವಿ ಇಲ್ಲವಾ? ಎಂದು ಹರಿಹಾಯ್ದರು.
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿರುವ ಈ ಪ್ರಕರಣದ ಎಫ್‌ಎಸ್ಎಲ್ ವರದಿ ಬಂದಿದೆ ಎನ್ನಲಾಗಿದೆ. ಆದರೆ ಎಫ್‌ಎಸ್‌ಎಲ್ ವರದಿ ಬಂದಿಲ್ಲ ಎನ್ನುತ್ತಿರುವ ಕಾಂಗ್ರೆಸ್. ಎಫ್‌ಎಸ್‌ಎಲ್ ವರದಿ ಮೊದಲೇ ಈ ನಾಯಕರು ಕ್ಲೀನ್‌ಚಿಟ್ ಕೊಟ್ಟುಬಿಟ್ಟಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ 'ಪಾಕಿಸ್ತಾನ ಜಿಂದಾಬಾದ್' ಅಂತಾ ಕೂಗಿಲ್ಲ ಎಂದಿದ್ದರಿಂದ ರಾಷ್ಟ್ರದ್ರೋಹಿಗಳಿಗೆ ಹೆಚ್ಚಿನ ಬೆಂಬಲ ಸಿಕ್ಕಂತಾಗಿದೆ. ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ಕ್ರಮ ಕೈಗೊಳ್ಳದೇ ಇರೋದ್ರಿಂದಲೇ ಈ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಆಗಿದೆ ಎಂದರು.
ರಾಮೇಶ್ವರಂ ಕೆಫೆ ಮಾಲೀಕರು ನನಗೆ ಹೇಳಿದಂತೆ ಗ್ರಾಹಕರ ಬ್ಯಾಗ್‌ನಿಂದ ಸ್ಫೋಟ: ತನಿಖೆಗೆ ತೇಜಸ್ವಿ ಸೂರ್ಯ ಒತ್ತಾಯ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ರಾಷ್ಟ್ರದ್ರೋಹಿಗಳ ಕೃತ್ಯ ಹೆಚ್ಚಾಗಿದೆ. ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು, ಪಾಕಿಸ್ತಾನ ಜಿಂದಾಬಾದ್ ಕೂಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ