
ಬೆಂಗಳೂರು (ಮಾ.06): ನಗರದ ವೈಟ್‌ಫೀಲ್ಡ್ ಸನಿಹದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ಚುರುಕುಗೊಳಿಸಿದ್ದು, ಕೆಲವು ಶಂಕಿತರ ಮಾಹಿತಿ ಮೇರೆಗೆ ಬೆಂಗಳೂರು ಮಾತ್ರವಲ್ಲ, ಹೊರ ರಾಜ್ಯಗಳಲ್ಲಿ ಸಹ ಕಾರ್ಯಾಚರಣೆ ನಡೆಸಿದೆ.
ತನಗೆ ಅಧಿಕೃತವಾಗಿ ತನಿಖೆ ವಹಿಸಿದ ಬಳಿಕ ಮಂಗಳವಾರ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಗೆ ಮತ್ತೆ ಎನ್ಐಎ ತಂಡವು ಭೇಟಿ ನೀಡಿ ಪರಿಶೀಲಿಸಿತು. ಈ ವೇಳೆ ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದ ಎನ್‌ಐಎ ಅಧಿಕಾರಿಗಳು, ಕೆಫೆ ಮುಂಭಾಗದಲ್ಲೇ ಇರುವ ಬಸ್ ನಿಲ್ದಾಣದಿಂದ ಕೆಫೆ ವರೆಗೆ ಶಂಕಿತ ವ್ಯಕ್ತಿ ನಡೆದು ಬಂದಿರುವ ಹಾದಿಯನ್ನು ತೀವ್ರವಾಗಿ ತಪಾಸಣೆ ನಡೆಸಿದರು.
ಧಮ್ ಇದ್ದರೆ ಮುಂದೇ ಬನ್ನಿ, ಖುರ್ಚಿ ಬಿಟ್ಟುಕೊಡುವೆ: ಸಂಸದ ಅನಂತಕುಮಾರ ಹೆಗಡೆ
ಅಲ್ಲದೆ ತಮಿಳುನಾಡಿನ ಚೆನ್ನೈ ಹಾಗೂ ಕೇರಳ ರಾಜ್ಯಗಳಲ್ಲಿ ಶಂಕಿತರ ಸಂಪರ್ಕ ಜಾಲದ ಮಾಹಿತಿ ಮೇರೆಗೆ ಎನ್‌ಐಎ ಕಾರ್ಯಾಚರಣೆಗಿಳಿದೆ ಎನ್ನಲಾಗಿದೆ. ಇನ್ನು ಕೆಫೆ ಪ್ರಕರಣ ಸಂಬಂಧ ಚೆನ್ನೈನಲ್ಲಿ ಐವರನ್ನು ವಶಕ್ಕೆ ಪಡೆಯಲಾಗಿದೆ ಎಂಬ ಸುದ್ದಿ ಹಬ್ಬಿತ್ತು. ಆದರೆ ಈ ಮಾಹಿತಿಯನ್ನು ನಿರಾಕರಿಸಿದ ಅಧಿಕಾರಿಗಳು, ಇದುವರೆಗೆ ಯಾರನ್ನು ವಶಕ್ಕೆ ಪಡೆದಿಲ್ಲ ಎಂದಿದ್ದಾರೆ.
ಟಾರ್ಗೆಟ್ ಕೆಫೆ: ರಾಮೇಶ್ವರ ಕೆಫೆ ಪಕ್ಕದಲ್ಲೇ ಮತ್ತೊಂದು ದರ್ಶಿನಿ ಹೋಟೆಲ್ ಹಾಗೂ ಹಿಂಭಾಗ ಬೋರ್ಡಿಂಗ್ ಕಮ್ ಹೋಟೆಲ್ ಇದೆ. ಅಲ್ಲದೆ ಕೆಫೆ ಕೂಗಳತೆ ದೂರದಲ್ಲೇ ಐಟಿ ಕಂಪನಿಗಳಿವೆ. ಹೀಗಾಗಿ ರಾಮೇಶ್ವರ ಕೆಫೆಯಲ್ಲಿ ಹೆಚ್ಚಿನ ಗ್ರಾಹಕರು ಜಮಾಯಿಸುತ್ತಾರೆ ಎಂಬ ಖಚಿತ ಮಾಹಿತಿ ಪಡೆಯೇ ದುಷ್ಕರ್ಮಿಗಳು ಟಾರ್ಗೆಟ್ ಮಾಡಿರುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದಲಿತರ ಬಳಿ ಮತ ಇದೆ, ಆದರೆ ಸಿಎಂ ಭಾಗ್ಯ ಇಲ್ಲ: ಸಚಿವ ಮಹದೇವಪ್ಪ ಬೇಸರ
ಸಿಸಿಬಿ-ಎನ್‌ಐಎ ಸಭೆ: ಇನ್ನು ಬಾಂಬ್ ಸ್ಫೋಟ ಪ್ರಕರಣ ಕುರಿತು ಸಿಸಿಬಿ ಹಾಗೂ ಎನ್‌ಐಎ ಅಧಿಕಾರಿಗಳು ಮಂಗಳವಾರ ಭೇಟಿಯಾಗಿ ಸಮಾಲೋಚಿಸಿದ್ದಾರೆ. ಇದುವರೆಗೆ ನಡೆದಿರುವ ತನಿಖೆ ಕುರಿತು ಸಿಸಿಬಿಯಿಂದ ಎನ್‌ಐಎ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ