
ಬೆಂಗಳೂರು(ಮಾ. 31) ದೇಶಾದ್ಯಂತ ರಂಜಾನ್ ಹಬ್ಬ ಆಚರಿಸಲಾಗುತ್ತದೆ. ಬೆಂಗಳೂರಿನಲ್ಲಿ ರಂಜಾನ್ ಹಬ್ಬದ ಹಿನ್ನಲೆಯಲ್ಲಿ ನಗರದ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ. ಸಂಚಾರ ದಟ್ಟಣೆ ತಪ್ಪಿಸಲು ಹಾಗೂ ರಂಜಾನ್ ಹಬ್ಬದ ಆಚರಣೆಗೆ ಅಡಚಣೆ ಆಗದಂತೆ ಟ್ರಾಫಿಕ್ ಪೊಲೀಸರು ಬದಲಿ ಮಾರ್ಗ ಬಳಸುವಂತೆ ಸೂಚಿಸಿದ್ದಾರೆ.
ಯಾವ ರಸ್ತಗಳಲ್ಲಿ ಸಂಚಾರ ಬಂದ್
ಬನ್ನೇರುಘಟ್ಟ ರಸ್ತೆಯ ಗುರಪ್ಪನಪಾಳ್ಯ ಜಂಕ್ಷನ್ ನಲ್ಲಿ ಸಂಚಾರ ನಿರ್ಬಂಧ
ಸಾಗರ್ ಅಪೋಲೋ ಜಂಕ್ಷನ್ ನಿಂದ ಗುರಪ್ಪನಪಾಳ್ಯ ಜಂಕ್ಷನ್ ವರೆಗೆ ಸಂಚಾರ ನಿರ್ಬಂಧ
ಸಾಯಿರಾಂ ಜಂಕ್ಷನ್ ನಿಂದ ಗುರಪ್ಪನಪಾಳ್ಯ ಜಂಕ್ಷನ್ ವರೆಗೆ ಸಂಚಾರ ನಿರ್ಬಂಧ
ಗುರಪ್ಪನಪಾಳ್ಯ ಜಂಕ್ಷನ್ ನಿಂದ ರೆಡ್ಡಿ ಆಸ್ಪತ್ರೆ ಜಂಕ್ಷನ್ ವರೆಗೆ ವಾಹನ ಸಂಚಾರ ನಿರ್ಬಂಧ
ಸಾನಿಯಾ ಮಿರ್ಜಾ ಸಹೋದರಿ ಆಯೋಜಿಸಿದ ರಂಜಾನ್ ಎಕ್ಸ್‌ಪೋದಲ್ಲಿ ಗುಂಡಿನ ದಾಳಿ, ಓರ್ವ ಅರೆಸ್ಟ್
ಈ ರಸ್ತೆಗಳಲ್ಲಿ ಸಂಚರಿಸುವವರು ಪರ್ಯಾಯ ಮಾರ್ಗ ಬಳಸುವಂತೆ ಪೊಲೀಸರು ಸೂಚಿಸಿದ್ದಾರೆ. ಡೈರಿ ಸರ್ಕಲ್ ಕಡೆಯಿಂದ ಬರುವ ವಾಹನಗಳು ತಿಲಕ್ ನಗರ, ಸ್ವಾಗತ್ ಜಂಕ್ಷನ್, ಜಯನಗರ ಈಸ್ಟ್ ಎಂಡ್ ಮೂಲಕ ಜಯದೇವ ಹಾಗೂ ಬನ್ನೇರುಘಟ್ಟ ರಸ್ತೆಯಿಂದ ಬರುವ ವಾಹನಗಳು ಜೇಡಿಮರ ಜಂಕ್ಷನ್, ಜಯದೇವ, ಈಸ್ಟ್ ಎಂಡ್, ಸ್ವಾಗತ್ ಜಂಕ್ಷನ್ ಮೂಲಕ ಡೈರಿ ಸರ್ಕಲ್ ತಲುಪಲು ಸೂಚಿಸಲಾಗಿದೆ
ಸಂಚಾರ ನಿರ್ಬಂಧಿಸಿದ ಬೆಂಗಳೂರು ರಸ್ತೆಗಳು
ನಾಗವಾರ ಪಾಟರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ
ನಾಗವಾರ ಜಂಕ್ಷನ್ ನಿಂದ ಪಾಟರಿ ರಸ್ತೆ ಸರ್ಕಲ್ ವರೆಗೆ ಸಂಚಾರ ನಿರ್ಬಂಧ
ಈ ರಸ್ತೆಗಳಲ್ಲಿ ಸಂಚರಿಸುವವರು ಪರ್ಯಾಯ ಮಾರ್ಗ ಬಳಸಲು ಸಂಚಾರ ಪೊಲೀಸರು ಸೂಚನೆ ನೀಡಿದ್ದಾರೆ. ನಾಗವಾರ ಕಡೆಯಿಂದ ಬರುವ ವಾಹನಗಳು ಹೆಣ್ಣೂರು ಜಂಕ್ಷನ್, ಕಾಚರಕನಹಳ್ಳಿ, ಲಿಂಗರಾಜಪುರಂ, ಪುಲಕೇಶಿನಗರ ಪೊಲೀಸ್ ಠಾಣೆ, ಹೇನ್ಸ್ ರಸ್ತೆ ಮೂಲಕ ಸಂಚಾರ ಮಾಡಲು ಸೂಚಿಸಿದ್ದಾರೆ. ಶಿವಾಜಿನಗರ ಕಡೆಯಿಂದ ಸಂಚರಿಸುವ ವಾಹನಗಳು ಸ್ಪೆನ್ಸರ್ ರಸ್ತೆ, ಕೋಲ್ಸ್ ರಸ್ತೆ, ವೀಲರ್ಸ್ ರಸ್ತೆ ಮೂಲಕ ನಾಗವಾರ, ಬಾಣಸವಾಡಿ ಕಡೆಗೆ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇಂದು ಬೆಳಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. ನಗರ ಸಂಚಾರ ಪೊಲೀಸರು ರಂಜಾನ್ ಆಚರಣೆ ಹಿನ್ನಲೆಯಲ್ಲಿ ಸಂಚಾರ ಮಾರ್ಪಟುಗೊಳಿಸಿದ್ದಾರೆ.
ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ
ರಂಜಾನ್ ಆಚರಣೆಯ 30 ದಿನಗಳ ಉಪವಾಸ ಇಂದಿಗೆ ಅಂತ್ಯವಾಗಲಿದೆ. ಈಗಾಗಲೇ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಲು ಜಮಾಯಿಸಿದ್ದಾರೆ. ಬೆಳಿಗ್ಗೆ 9 ಗಂಟೆ ನಂತ್ರ ಸಾಮೂಹಿಕ ಪ್ರಾರ್ಥನೆ ಮಾಡಲು ಸಿದ್ದತೆ ಮಾಡಲಾಗಿದೆ. ಈ ಸಾಮೂಹಿಕ ಪಾರ್ಥನೆಯಲ್ಲಿ ಸಚಿವ ಜಮೀರ್ ಅಹಮದ್ ಭಾಗಿಯಾಗಲಿದ್ದಾರೆ. ಚಾಮರಾಜಪೇಟೆ ಸುತ್ತ ಮುತ್ತ ಹೆಚ್ಚಿನ ಜನ ಸೇರುವ ಸಾಧ್ಯತೆ ಇದೆ. ಹೀಗಾಗಿ
ಚಾಮರಾಜಪೇಟೆ ಸುತ್ತಮುತ್ತ ಹೆಚ್ಚಿನ ಜನ ಸೇರುವ ಸಾಧ್ಯತೆ.ಬೆಳಿಗ್ಗೆ 9 ರಿಂದ 12 ಗಂಟೆಯವರೆಗೆ ಗಾಳಿ ಆಂಜನೇಯ ದೇವಸ್ಥಾನದಿಂದ ಟೌನ್ ಹಾಲ್ ವರೆಗೆ ರಸ್ತೆ ಕ್ಲೋಸ್ ಮಾಡಲಾಗಿದೆ. ಈದ್ಗಾ ಮೈದಾದನಲ್ಲಿ ಪೊಲೀಸರು ಸರ್ಪಗಾವಲು ಹಾಕಿದ್ದಾರೆ. ಭಾರಿ ಭದ್ರತೆ ವ್ಯವಸ್ಥೆ ಏರ್ಪಡಿಸಲಾಗಿದೆ. 200ಕ್ಕೂ ಹೆಚ್ಚು ಟ್ರಾಫಿಕ್ ಪೊಲೀಸ್, 500ಕ್ಕೂ ಹೆಚ್ಚು ಪೊಲೀಸರು ಹಾಗೂ ನಿಯೋಜನೆ ಮಾಡಲಾಗಿದೆ.
ನಮಾಜ್ ರಸ್ತೆಯಲ್ಲಿ ಮಾಡಿದ್ರೆ ಪಾಸ್‌ಪೋರ್ಟ್, ಡ್ರೈವಿಂಗ್ ಲೈಸೆನ್ಸ್ ರದ್ದು, ಪೊಲೀಸ್ ಎಚ್ಚರಿಕೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ