ಅತ್ಯಾಚಾರ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕಸ್ಟಡಿ ಇಂದು ಅಂತ್ಯ!

Published : Jun 18, 2024, 10:29 AM IST
ಅತ್ಯಾಚಾರ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಕಸ್ಟಡಿ ಇಂದು ಅಂತ್ಯ!

ಸಾರಾಂಶ

ಹಾಸನ ಮಾಜಿ ಸಂಸದ ಹಾಗೂ ಅತ್ಯಾಚಾರ ಆರೋಪದಲ್ಲಿ ವಿಚಾರಣೆ ಎದುರಿಸುತ್ತಿರುವ ಪ್ರಜ್ವಲ್‌ ರೇವಣ್ಣ ಕಸ್ಟಡಿ ಇಂದು ಅಂತ್ಯವಾಗಲಿದೆ. ಪ್ರಜ್ವಲ್‌ ವಿರುದ್ಧ ಪ್ರಬಲ ಸಾಕ್ಷ್ಯಗಳ ಸಂಗ್ರಹಕ್ಕೆ ಎಸ್‌ಐಟಿ ಹರಸಾಹಸ ಮಾಡುತ್ತಿದೆ.  

ಬೆಂಗಳೂರು (ಜೂ.18): ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಇಂದು ಅವರ ಎಸ್‌ಐಟಿ ಕಸ್ಟಡಿ ಅಂತ್ಯವಾಗಲಿದೆ. ಎರಡೆರಡು ಬಾರಿ ಕಸ್ಟಡಿಗೆ ಪಡೆದು ವಿಚಾರಣೆ ಮಾಡಿದ್ದರೂ, ಪೊಲೀಸರಿಗೆ ತಲೆಬಿಸಿ ತಪ್ಪಿಲ್ಲ. ಪ್ರಜ್ವಲ್ ರೇವಣ್ಣ‌ ವಿರುದ್ಧ ಪ್ರಬಲ ಸಾಕ್ಷ್ಯಗಳ ಸಂಗ್ರಹಕ್ಕೆ ಎಸ್ಐಟಿ ಹರಸಾಹಸ ಪಡುತ್ತಿದೆ. ಪ್ರಜ್ವಲ್ ವಿರುದ್ಧದ ಎರಡು ಪ್ರಕರಣದ ತನಿಖೆಯನ್ನು ಈಗಾಗಲೇ ಎಸ್‌ಐಟಿ ಮುಗಿಸಿದೆ.  ಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಕೆ ಬಹುತೇಕ ಮುಕ್ತಾಯವಾಗಿದೆ. ಅದರೊಂದಿಗೆ ಸಿಐಡಿಯಲ್ಲಿ ದಾಖಲಾದ ಅತ್ಯಾಚಾರ ಪ್ರಕರಣದ ತನಿಖೆಯೂ ಬಹುತೇಕ ಪೂರ್ಣವಾಗಿದೆ. ಎಸ್ಐಟಿ ತನಿಖೆ ಮುಗಿದ ಹಿನ್ನೆಲೆ ಇಂದು ಪ್ರಜ್ವಲ್ ರೇವಣ್ಣನನ್ನ ಕೋರ್ಟ್‌ಗೆ ಹಾಜರುಪಡಿಸುವ ಕಾರ್ಯ ಮಾಡಲಿದೆ. ಸಿಐಡಿಯಲ್ಲಿ ದಾಖಲಾಗಿರೋ ರೇಪ್ ಕೇಸಲ್ಲಿ‌ ಮತ್ತೆ ಕಸ್ಟಡಿಗೆ ಪಡೆಯಲು ಎಸ್ಐಟಿ ತಯಾರಿ ನಡೆಸಿದೆ. ಪ್ರಜ್ವಲ್‌ ರೇವಣ್ಣರನ್ನ ಕಸ್ಟಡಿಗೆ ಪಡೆಯಲು ಕೋರ್ಟ್‌ಗೆ ಎಸ್‌ಐಟಿ ಮತ್ತೆ ಮನವಿ ಮಾಡಲಿದೆ.

 

ಪುರುಷತ್ವ, ಮರ್ಮಾಂಗ ಸೇರಿದಂತೆ ಅತ್ಯಾಚಾರಿಗಳಿಗೆ ನಡೆಸುವ ವೈದ್ಯಕೀಯ ಪರೀಕ್ಷೆಗೆ ಪ್ರಜ್ವಲ್ ರೇವಣ್ಣ

ಬಾಡಿ ವಾರೆಂಟ್ ಮೇಲೆ ಮತ್ತೆ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿಗೆ ಪಡೆಯುವ ತೀರ್ಮಾನ ಮಾಡಿದೆ. ಒಂದು ಪ್ರಕರಣ ಮುಗಿದ ಬೆನ್ನಲ್ಲೆ ಮತ್ತೊಂದು ಪ್ರಕರಣದ ತನಿಖೆ ನಡೆಸಲಿದೆ. ಪ್ರತಿಯೊಂದು ಪ್ರಕರಣದಲ್ಲಿ ಕಸ್ಟಡಿಗೆ ಪಡೆದು ಪ್ರತ್ಯೇಕವಾಗಿ ತನಿಖೆ ನಡೆಸಲಾಗುತ್ತಿದೆ. ಈಗ ಸಿಐಡಿಯ ರೇಪ್‌ ಕೇಸ್‌ನಲ್ಲಿ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲು ಎಸ್ಐಟಿ ನಿರ್ಧಾರ ಮಾಡಿದೆ.

ಧ್ವನಿ ಬಳಿಕ ಪ್ರಜ್ವಲ್ ರೇವಣ್ಣಗೆ ಅಂಗಾಂಗ ಪರೀಕ್ಷೆ ಸಂಕಷ್ಟ?: ಕಾರಣವೇನು!

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಈಗಾಗಲೇ ಹಲವು ರೀತಿಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪ್ರಜ್ವಲ್‌ ರೇವಣ್ಣಗೆ  ಪುರುಷತ್ವ ಸೇರಿದಂತೆ ಅತ್ಯಾಚಾರ ಆರೋಪಿಗಳಿಗೆ ನಡೆಸುವ ಎಲ್ಲಾ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗಿದೆ. ಮೊದಲ ಎರಡೂ ಪ್ರಕರಣದಲ್ಲಿ ಅವರ ವೈದ್ಯಕೀಯ ಪರೀಕ್ಷೆ ನಡೆದಿದೆ.  ಪ್ರಜ್ವಲ್‌ ರೇವಣ್ಣದ್ದು ಎನ್ನಲಾದ ವಿಡಿಯೋಗಳು ಹಾಸನ ಸೇರಿದಂತೆ ರಾಜ್ಯಾದ್ಯಂತ ಹರಿದಾಡಿದ್ದವು.  ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪೆನ್‌ಡ್ರೈವ್ ಮೂಲಕ ವಿಡಿಯೋಗಳು ಹಂಚಿಕೆ ಮಾಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಡಿಯೋದಲ್ಲಿ ಪುರುಷನೊಬ್ಬನ ಧ್ವನಿ ಮತ್ತು  ಸೊಂಟದ ಕೆಳಗಿನ ಭಾಗ ಕಾಣಿಸುತ್ತಿತ್ತು. ಈ ಹಿನ್ನೆಲೆ ವಿಡಿಯೋದಲ್ಲಿ ನಗ್ನವಾಗಿ ಕಾಣಿಸಿದ ವ್ಯಕ್ತಿಯ ಪತ್ತೆಗೆ ಪೊಲೀಸರು ಮುಂದಾಗಿದೆ. 

ವಿಡಿಯೋದಲ್ಲಿ ಕಾಣಿಸಿದ ಪುರುಷನ ಅಂಗಾಂಗಳೊಂದಿಗೆ ಪ್ರಜ್ವಲ್ ರೇವಣ್ಣ ಅಂಗಗಳನ್ನು ಹೋಲಿಕೆ ಮಾಡಲು ಅಧಿಕಾರಿಗಳ ತಂಡ ಚಿಂತನೆ ನಡೆಸಿದೆ. ಈ ಪರೀಕ್ಷೆಗೆ ಗುಜರಾತ್ ರಾಜ್ಯದ ಅಹಮದಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ ಎಸ್ಎಲ್) ಹಾಗೂ ವಿದೇಶಿ ತಜ್ಞರ ನೆರವು ಪಡೆದುಕೊಳ್ಳಲು ಎಸ್‌ಐಟಿ ತಂಡ ಮುಂದಾಗಿದೆ ಎಂದು ವರದಿಯಾಗಿದೆ. ಈಗಾಗಲೇ ಎಸ್‌ಐಟಿ ಅಧಿಕಾರಿಗಳು ಆರೋಪಿಯ ಧ್ವನಿ ಮಾದರಿಯನ್ನು ಸಂಗ್ರಹಿಸಿದ್ದಾರೆ. ಅಶ್ಲೀಲ ವಿಡಿಯೋಗಳಲ್ಲಿನ ಮುಖ ಮರೆಮಾಚಿಕೊಂಡಿರುವ ವ್ಯಕ್ತಿ ಪತ್ತೆಗೆ ಎಸ್‌ಐಟಿ ಅಂಗಾಂಗ ಪರೀಕ್ಷೆಗೆ ಎಸ್‌ಐಟಿ ಮುಂದಾಗಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮೂರು ವರ್ಷಗಳಲ್ಲಿ 57,733 ಸೈಬರ್ ಅಪರಾಧ, ₹5,473 ಕೋಟಿ ವಂಚನೆ: ಗೃಹ ಸಚಿವ ಪರಮೇಶ್ವರ್
ಮೇಕೆದಾಟು, ಭದ್ರಾ, ಕೃಷ್ಣಾ ಯೋಜನೆಗಳಲ್ಲಿ ಕೇಂದ್ರ ಸರ್ಕಾರ ವಿಳಂಬ: ಡಿ.ಕೆ.ಶಿವಕುಮಾರ್ ಆಕ್ರೋಶ