ರಾಜಿಯಾದರೆ ರೇಪ್‌ ಕೇಸ್‌ ಮುಕ್ತಾಯಕ್ಕೆ ಅವಕಾಶ: ಹೈಕೋರ್ಟ್‌

By Kannadaprabha News  |  First Published Jun 2, 2022, 5:29 AM IST

*  ನಾಲ್ವರು ಸದಸ್ಯರ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದು
*  2022ರ ಫೆ.16ರಂದು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ ಮಹಿಳೆ
*  ಪ್ರಕರಣ ರದ್ದುಪಡಿಸುವಂತೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದ ಅರ್ಜಿದಾರರು
 


ಬೆಂಗಳೂರು(ಜೂ.02):  ದೂರುದಾರ ಮತ್ತು ಆರೋಪಿಗಳು ರಾಜಿ ಮೂಲಕ ಅತ್ಯಾಚಾರ ಪ್ರಕರಣವನ್ನೂ ಮುಕ್ತಾಯಗೊಳಿಸಬಹುದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ಮಹಿಳೆಯೊಬ್ಬರು ತಮ್ಮ ಕುಟುಂಬದ ನಾಲ್ವರು ಸದಸ್ಯರ ವಿರುದ್ಧ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸಿದೆ.

ಪ್ರಕರಣದಲ್ಲಿ ಆರೋಪಿಗಳಾಗಿದ್ದ ಬೆಂಗಳೂರಿನ ಬ್ಯಾಡರಹಳ್ಳಿ ನಿವಾಸಿಗಳಾದ ಕೆ.ಸತೀಶ್‌, ಶ್ರೀನಿವಾಸ್‌, ಕೋಕಿಲ ಮತ್ತು ಮಮತಾ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.

Tap to resize

Latest Videos

ಹೈದರಾಬಾದ್: ಪತಿಯೊಂದಿಗೆ ಅನೈತಿಕ ಸಂಬಂಧ ಶಂಕೆ: ಮಹಿಳೆ ಮೇಲೆ ಐವರಿಂದ ರೇಪ್ ಮಾಡಿಸಿ ವಿಡಿಯೋ ಚಿತ್ರೀಕರಿಸಿದ ಪತ್ನಿ

ಮಹಿಳೆಯೊಬ್ಬರು 2022ರ ಫೆ.16ರಂದು ಬ್ಯಾಡರಹಳ್ಳಿ ಪೊಲೀಸ್‌ ಠಾಣೆಗೆ ದೂರು ದಾಖಲಿಸಿ, ಸತೀಶ್‌ ವಿರುದ್ಧ ಅತ್ಯಾಚಾರ ಹಾಗೂ ಉಳಿದ ಮೂವರು ಆರೋಪಿಗಳ ವಿರುದ್ಧ ಜೀವ ಬೆದರಿಕೆ, ಅವಮಾನ ಪಡಿಸಿದ ಮತ್ತು ವಸೂಲಿ ಮಾಡಿದ ಆರೋಪ ಮಾಡಿದ್ದರು. ಈ ಸಂಬಂಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಈ ಪ್ರಕರಣ ರದ್ದುಪಡಿಸುವಂತೆ ಕೋರಿ ಅರ್ಜಿದಾರರು ಹೈಕೋರ್ಟ್‌ ಮೊರೆ ಹೋಗಿದ್ದರು.
 

click me!