Ration card e-KYC: ನವೆಂಬರ್ 10 ಕೊನೆ ದಿನ, 41 ಲಕ್ಷಕ್ಕೂ ಹೆಚ್ಚು ಪಡಿತರ ಬಾಕಿ! ಇ-ಕೆವೈಸಿ ಮಾಡಿಸುವುದು ಹೇಗೆ? ಇಲ್ಲಿದೆ ಮಾಹಿತಿ

Kannadaprabha News   | Kannada Prabha
Published : Nov 05, 2026, 06:38 AM IST
ation card holders to complete e KYC last date november 10

ಸಾರಾಂಶ

ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ನವೆಂಬರ್ 10 ಕೊನೆಯ ದಿನವಾಗಿದೆ. ಬಾಕಿ ಉಳಿದಿರುವ 41 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು 'ಅನ್ನ ಸೇವೆ' ಆಪ್ ಅಥವಾ ನ್ಯಾಯಬೆಲೆ ಅಂಗಡಿಗಳ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು.

ಬೆಂಗಳೂರು (ನ.5): ಪಡಿತರ ಚೀಟಿದಾರರು ಇ-ಕೆವೈಸಿ(e-KYC) ಮಾಡಿಸಲು ನ.10 ಕೊನೆಯ ದಿನವಾಗಿದ್ದು, ಬಾಕಿ ಇರುವ ಪಡಿತರ ಚೀಟಿದಾರರು ಕೊನೆಯ ದಿನಾಂಕದೊಳಗೆ ತಪ್ಪದೇ ಇ-ಕೆವೈಸಿ ಮಾಡಿಸಬೇಕೆಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ‌ ವ್ಯವಹಾರಗಳ ಇಲಾಖೆ ತಿಳಿಸಿದೆ.‌

41,33,529 ಫಲಾನುಭವಿಗಳು ಇ-ಕೆವೈಸಿ!

ರಾಜ್ಯದಲ್ಲಿ ಮರು ಇ-ಕೆವೈಸಿ ಮಾಡಿಸಬೇಕಿದ್ದ 2,67,64,276 ಪಡಿತರ ಚೀಟಿ ಫಲಾನುಭವಿಗಳ ಪೈಕಿ, ನ.3ರವರೆಗೆ 2.26 ಕೋಟಿಗೂ ಅಧಿಕ ಫಲಾನುಭವಿಗಳು ಇ-ಕೆವೈಸಿ ಮಾಡಿಸಿದ್ದಾರೆ‌. ಇನ್ನೂ 41,33,529 ಫಲಾನುಭವಿಗಳು ಇ-ಕೆವೈಸಿ ಮಾಡಿಸಬೇಕಿದೆ. ಈಗಾಗಲೇ ಒಂದು ಬಾರಿ ಇ-ಕೆವೈಸಿ ಮಾಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ನ.10 ಕೊನೆಯ ದಿನವಾಗಿದೆ. ನಂತರ ಅವಧಿ ವಿಸ್ತರಣೆ ಮಾಡಲಾಗುವುದಿಲ್ಲ ಎಂದು ಇಲಾಖೆ ತಿಳಿಸಿದೆ.

ಪಡಿತರ ಇ-ಕೆವೈಸಿ ಮಾಡಿಸುವುದು ಹೇಗೆ?

ಇ-ಕೆವೈಸಿ ಮಾಡಿಸಲು ಬಾಕಿ ಉಳಿದಿರುವ ಎಲ್ಲ ಫಲಾನುಭವಿಗಳು ‘ಅನ್ನ ಸೇವೆ’ ಮೊಬೈಲ್ ಅಪ್ಲಿಕೇಶನ್ ಮೂಲಕ ಖುದ್ದಾಗಿ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿ ‘ಆಹಾರ’ ತಂತ್ರಾಂಶದ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಬೆನ್ನಲ್ಲೇ ಅಲರ್ಟ್, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಕೆಇಎ ಹೊಸ ರೂಲ್ಸ್!
Karnataka News Today Live: ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಬೆನ್ನಲ್ಲೇ ಅಲರ್ಟ್, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಕೆಇಎ ಹೊಸ ರೂಲ್ಸ್!