
ಬೆಂಗಳೂರು (ಜೂ.5) : ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ದುರಂತದ ಬಗ್ಗೆ ಕೂಲಂಕಷ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರವಹಿಸಬೇಕು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಆಗ್ರಹಿಸಿದ್ದಾರೆ.
ಈ ಕುರಿತು ‘ಎಕ್ಸ್’ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂಭ್ರಮಾಚರಣೆ ಸಮಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ದುರಂತದ ಕುರಿತು ನನಗೆ ವಿಷಾದವಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ. ದುರಂತದ ಬಗ್ಗೆ ಸರ್ಕಾರ ಕೂಲಂಕಷ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ದುರಂತದ ಜೀವಹಾನಿಯಿಂದ ತೀವ್ರ ದುಃಖಿತನಾಗಿದ್ದೇನೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಗೆ ಕಾರಣವಾದ ಲೋಪಗಳನ್ನು ಕೂಲಂಕಷವಾಗಿ ತನಿಖೆ ಮಾಡಿ ಸರ್ಕಾರ ಕ್ರಮಕೈಗೊಳ್ಳಬೇಕು. ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ