Dabbi Chilli Prices: ಬ್ಯಾಡಗಿ ಖಾರಕ್ಕೆ ಬಂತು ಬಂಗಾರದ ಬೆಲೆ; ಡಬ್ಬಿ ಮೆಣಸಿನಕಾಯಿ ಕ್ವಿಂಟಾಲ್‌ಗೆ ₹90,000!

Kannadaprabha News, Ravi Janekal |   | Kannada Prabha
Published : Feb 17, 2026, 05:36 AM IST
Record High Dabbi Chilli Prices Hit Rs 90 000 Per Quintal at Byadgi Market

ಸಾರಾಂಶ

Dabbi Chilli Prices ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯ ಇತಿಹಾಸದಲ್ಲಿ ಮೊದಲ ಬಾರಿಗೆ, ಡಬ್ಬಿ ಮೆಣಸಿನಕಾಯಿ ಪ್ರತಿ ಕ್ವಿಂಟಲ್‌ಗೆ ₹89,999 ಮತ್ತು ಕಡ್ಡಿ ಮೆಣಸಿನಕಾಯಿ ₹69,999 ಕ್ಕೆ ಮಾರಾಟವಾಗಿ ಐತಿಹಾಸಿಕ ದಾಖಲೆ ನಿರ್ಮಿಸಿದೆ. 

ಬ್ಯಾಡಗಿ (ಫೆ.17): ಅಂತಾರಾಷ್ಟ್ರೀಯ ಖ್ಯಾತಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸೋಮವಾರ ಡಬ್ಬಿ ಮೆಣಸಿನಕಾಯಿ ಪ್ರತಿ ಕ್ವಿಂಟಲ್‌ಗೆ ₹89,999 ಹಾಗೂ ಕಡ್ಡಿ ಮೆಣಸಿನಕಾಯಿ ₹69,999 ಐತಿಹಾಸಿಕ ಬೆಲೆಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ.

ಗದಗ ಜಿಲ್ಲೆ ರೋಣ ತಾಲೂಕಿನ ಸವಡಿ ಗ್ರಾಮದ ರೈತ ವಿಜಯಕುಮಾರ ಪ್ರಕಾಶ ಸಜ್ಜನರ ಬೆಳೆದ ಡಬ್ಬಿ ಹಾಗೂ ಕಡ್ಡಿ ಮೆಣಸಿನಕಾಯಿ ಸೋಮವಾರ ಮಾರುಕಟ್ಟೆಯಲ್ಲಿ ಬರೋಬ್ಬರಿ ₹89,999 ಹಾಗೂ ₹69,999ಗೆ ಮಾರಾಟವಾಗಿ ಹೊಸ ದಾಖಲೆ ಸೃಷ್ಟಿಸಿದೆ.

ರೋಣ ತಾಲೂಕಿನಲ್ಲಿ ಒಣ ಬೇಸಾಯವೇ ಪ್ರಮುಖ. ಇಂತಹ ಪ್ರದೇಶದಲ್ಲಿಯೂ ಸಹ ಯಾವುದೇ ರಾಸಾಯನಿಕ ಬಳಸದೇ ಕೃಷಿಯಲ್ಲಿ ಸಾಧನೆ ಮಾಡಬೇಕು ಎನ್ನುವ ಹಂಬಲದಿಂದ ಕೃಷಿಗೆ ಕೈ ಹಾಕಿದ 23 ವರ್ಷದ ಪದವೀಧರ ಯುವ ರೈತ ವಿಜಯಕುಮಾರ ಸಜ್ಜನರ ಮೊದಲ ಪ್ರಯತ್ನದಲ್ಲಿಯೇ ಭರ್ಜರಿ ಇಳುವರಿ ತೆಗೆದು ಸೈ ಎನಿಸಿಕೊಂಡಿದ್ದಾರೆ.

ಮಾರುಕಟ್ಟೆ ಆರಂಭವಾದ ನಂತರ ಸುಮಾರು 60ಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲಿ ಇಷ್ಟೊಂದು ದೊಡ್ಡ ಮೊತ್ತಕ್ಕೆ ಯಾವುದೇ ತಳಿಯ ಮೆಣಸಿನಕಾಯಿ ಮಾರಾಟವಾಗಿರಲಿಲ್ಲ. ಕಳೆದ ಹಲವು ವರ್ಷಗಳಿಂದ ಮಾರುಕಟ್ಟೆಯಲ್ಲಿ ಡಬ್ಬಿ ತಳಿ ಬೆಲೆ ₹50ರಿಂದ ₹60 ಸಾವಿರ ಪ್ರತಿ ಕ್ವಿಂಟಲ್‌ಗೆ ಮಾರಾಟವಾಗುತ್ತಿತ್ತು. ಈ ವರ್ಷ ಆವಕದ ಕೊರತೆ ಹಾಗೂ ರೈತ ವಿಜಯಕುಮಾರ ಬೆಳೆದ ಮೆಣಸಿನ ಗುಣಮಟ್ಟದಿಂದಾಗಿ ಬಂಗಾರದ ಬೆಲೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಅವರು ಎಲ್ಲರಿಗೂ ಸಿಹಿ ಹಂಚಿ ಸಂಭ್ರಮಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

HD Kumaraswamy: 6 ಕೋಟಿ ಜನಾಶೀರ್ವಾದದಿಂದ ಮುಖ್ಯಮಂತ್ರಿ ಆದವನಲ್ಲ ಎಂದ ಎಚ್ಡಿಕೆ!
ಪ್ರಿಯಾಂಕ್‌ ‘ಆರೆಸ್ಸೆಸ್‌ ಟೀಕೆ’ಗೆ ಬಿಜೆಪಿ ಕಿಡಿ- ದೆವ್ವದ ಮನಸ್ಥಿತಿ ಇದ್ರೆ ದೈವದ ಮಾತು ಬರಲ್ಲ