ಕಾರವಾರ, ಉತ್ತರಕನ್ನಡದಲ್ಲಿ ಇಂದು ರಾತ್ರಿಯಿಂದಲೇ ರೆಡ್ ಅಲರ್ಟ್: ಭಾರೀ ಮಳೆ, ಗಂಟೆಗೆ 35-45 ಕಿಮೀ ವೇಗದಲ್ಲಿ ಗಾಳಿ ಎಚ್ಚರ!

Published : Jul 25, 2025, 08:54 PM ISTUpdated : Jul 25, 2025, 09:06 PM IST
Uttara kannada red alert

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ರೆಡ್ ಅಲರ್ಟ್ ಘೋಷಣೆ. ಭಾರೀ ಮಳೆ, ಗಾಳಿ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ. ಸುರಕ್ಷಿತ ಸ್ಥಳಗಳಿಗೆ ತೆರಳಲು ಅಧಿಕಾರಿಗಳ ಸೂಚನೆ.

ಕಾರವಾರ, ಉತ್ತರಕನ್ನಡ (ಜುಲೈ.25): ಉತ್ತರಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಹವಾಮಾನ ಇಲಾಖೆಯು ತೀವ್ರ ಎಚ್ಚರಿಕೆಯನ್ನು ಘೋಷಿಸಿದೆ. ಇಂದು ರಾತ್ರಿ 8:30 ರಿಂದ ಜುಲೈ 26ರ ಬೆಳಿಗ್ಗೆ 5:30 ರವರೆಗೆ ರೆಡ್ ಅಲರ್ಟ್ ಜಾರಿಯಲ್ಲಿರುವುದಾಗಿ ತಿಳಿಸಲಾಗಿದೆ.

ಭಾರೀ ಮಳೆಯ ಜೊತೆಗೆ ಗಂಟೆಗೆ 35-45 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಮುದ್ರ, ನದಿ ಹಾಗೂ ನೀರಿನ ತಾಣಗಳಿಗೆ ಭೇಟಿ ನೀಡದಂತೆ ಸೂಚಿಸಲಾಗಿದೆ.

ನದಿಗಳ ತೀರದಲ್ಲಿ ವಾಸಿಸುವವರು ಹಠಾತ್ ಪ್ರವಾಹ ಸಾಧ್ಯತೆ ಹಿನ್ನೆಲೆ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಾಯಕಾರಿ ಮರಗಳಿರುವ ಪ್ರದೇಶಗಳಲ್ಲಿ ಆಶ್ರಯ ಪಡೆಯದಂತೆ ಮತ್ತು ಗುಡ್ಡದ ಇಳಿಜಾರಿನಲ್ಲಿ ವಾಸಿಸುವವರು ಸುರಕ್ಷಿತ ಜಾಗಕ್ಕೆ ಸ್ಥಳಾಂತರಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಪಾಲಕರು ತಮ್ಮ ಮಕ್ಕಳು ಸಮುದ್ರ ತೀರಕ್ಕೆ ಹೋಗದಂತೆ ವಿಶೇಷ ಜಾಗೃತೆ ವಹಿಸಬೇಕು ಎಂದು ಮನವಿ ಮಾಡಲಾಗಿದೆ. ಸಮುದ್ರ ತೀರದಲ್ಲಿ ಯಾವುದೇ ರೀತಿಯ ಮನರಂಜನಾ ಚಟುವಟಿಕೆಗಳನ್ನು ನಡೆಸದಂತೆ ಎಚ್ಚರಿಕೆ ನೀಡಲಾಗಿದ್ದು, ತುರ್ತು ಸಂದರ್ಭಗಳಲ್ಲಿ ಸಂಪರ್ಕಿಸಲು ಕಂಟ್ರೋಲ್ ರೂಮ್ ಸಂಖ್ಯೆ 08382-229857 ಮತ್ತು ಮೊಬೈಲ್ ಸಂಖ್ಯೆ 9483511015 ಒದಗಿಸಲಾಗಿದೆ. ಸಾರ್ವಜನಿಕರು ಎಚ್ಚರಿಕೆಯಿಂದ ಇದ್ದು, ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಸೂಚಿಸಲಾಗಿದೆ.

ಪ್ರವಾಹ ಪರಿಸ್ಥಿತಿ ಎದುರಿಸಲು ಸಜ್ಜು: ಉತ್ತರಕನ್ನಡ ಜಿಲ್ಲಾ ಎಡಿಸಿ ಸಾಜಿದ್ ಮುಲ್ಲಾ 

ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿರುವ ಈ ಬಗ್ಗೆ ಉತ್ತರಕನ್ನಡ ಜಿಲ್ಲಾ ಎಡಿಸಿ ಸಾಜಿದ್ ಮುಲ್ಲಾ ಮಾತನಾಡಿದ್ದು, ಜನರ ಸುರಕ್ಷತೆಗೆ ಕ್ರಮಉತ್ತರಕನ್ನಡ ಜಿಲ್ಲೆಯ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಕ್ರಿಯ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಪರಿಸ್ಥಿತಿ ಎದುರಿಸಲು ಸಜ್ಜು:

ಈ ಪರಿಸ್ಥಿತಿಯನ್ನು ಎದುರಿಸಲು ಸ್ಥಳೀಯ ಆಡಳಿತ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಎಸ್‌ಡಿಆರ್‌ಎಫ್, ಮತ್ತು ಎನ್‌ಡಿಆರ್‌ಎಫ್ ತಂಡಗಳು ಸನ್ನದ್ಧವಾಗಿವೆ.ಪ್ರವಾಹ ಪೀಡಿತ ಪ್ರದೇಶಗಳಿಂದ ಮಹಿಳೆಯರು, ಮಕ್ಕಳು, ಮತ್ತು ಹಿರಿಯರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾಳಜಿ ಕೇಂದ್ರಗಳು ಎಲ್ಲೆಲ್ಲಿ?

ಹೊನ್ನಾವರದಲ್ಲಿ 4 ಮತ್ತು ಕುಮಟಾದಲ್ಲಿ 2 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಗುಂಡಿಬೈಲು, ಚಿಕ್ಕನಕೋಡು, ಮುಗ್ವಾ, ಮತ್ತು ಭಾಸ್ಕೇರಿಯ ಕಾಳಜಿ ಕೇಂದ್ರಗಳಲ್ಲಿ 58 ಜನರನ್ನು ಹಾಗೂ ಕುಮಟಾದ 2 ಕೇಂದ್ರಗಳಲ್ಲಿ 62 ಜನರನ್ನು ಇರಿಸಲಾಗಿದೆ ಸ್ಥಳೀಯ ತಹಶೀಲ್ದಾರ್ ಮತ್ತು ಗ್ರಾಮ ಪಂಚಾಯಿತಿ ಆಡಳಿತದ ಸಹಕಾರದೊಂದಿಗೆ ಈ ಸ್ಥಳಾಂತರ ಕಾರ್ಯ ನಡೆದಿದೆ. ಮಳೆಯ ತೀವ್ರತೆ ಹೆಚ್ಚಾದಲ್ಲಿ ಇನ್ನಷ್ಟು ಜನರನ್ನು ಕಾಳಜಿ ಕೇಂದ್ರಗಳಿಗೆ ಕರೆತರಲಾಗುವುದು ಎಂದು ಎಡಿಸಿ ಸಾಜಿದ್ ಮುಲ್ಲಾ ಹೇಳಿದ್ದಾರೆ.

ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ:

ಮಳೆಯ ಪರಿಣಾಮವಾಗಿ ಜುಲೈ 26ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಶಾಲೆಗಳು, ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಲಿಂಗನಮಕ್ಕಿ ಜಲಾಶಯದಿಂದ ಎರಡನೇ ಎಚ್ಚರಿಕೆ ನೋಟೀಸ್ ಜಾರಿಯಾಗಿದ್ದು, 1819 ಅಡಿ ಎತ್ತರದ ಜಲಾಶಯದಲ್ಲಿ ಪ್ರಸ್ತುತ 1806.80 ಅಡಿ (75.13%) ನೀರು ತುಂಬಿದೆ. 60,000 ಕ್ಯೂಸೆಕ್‌ಗಿಂತಲೂ ಹೆಚ್ಚು ನೀರು ಒಳಹರಿವು ದಾಖಲಾಗಿದ್ದು, ಮಳೆಯ ಪ್ರಮಾಣ ಇದೇ ರೀತಿಯಲ್ಲಿ ಮುಂದುವರಿದರೆ ಜಲಾಶಯದ ಗೇಟ್‌ಗಳನ್ನು ತೆರೆದು ನೀರು ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈಗಾಗಲೇ ಮೂರನೇ ವಾರ್ನಿಂಗ್ ಜಾರಿಗೊಳ್ಳುವ ಸಂಭವವಿದ್ದು, ಲಿಂಗನಮಕ್ಕಿ ಮತ್ತು ಗೇರುಸೊಪ್ಪ ಡ್ಯಾಂ ಸೈಟ್ ಎಂಜಿನಿಯರ್‌ಗಳು ಸತತ ಸಂಪರ್ಕದಲ್ಲಿದ್ದಾರೆ. ಕೆಪಿಸಿಎಲ್ ಸಂಸ್ಥೆಯು ನದಿ ಪಾತ್ರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮತ್ತು ಪ್ರವಾಸಿಗರಿಗೆ ನೀರಿಗಿಳಿಯದಂತೆ ಸೂಚನೆ ನೀಡಿದೆ. ಇದುವರೆಗೆ ಯಾವುದೇ ಜನ ಅಥವಾ ಪ್ರಾಣಿಗಳ ಪ್ರಾಣಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌