ಇಂದಿನಿಂದ ಮೂರು ದಿನ ದ.ಕ, ಉಡುಪಿ, ಕೊಡಗಿನಲ್ಲಿ ಭಾರೀ ಮಳೆ: ರೆಡ್ ಅಲರ್ಟ್

By Kannadaprabha News  |  First Published Jun 23, 2024, 7:00 AM IST

ಸೋಮವಾರ ಮತ್ತು ಮಂಗಳವಾರ ಕರಾವಳಿಯ ಮೂರು ಜಿಲ್ಲೆ ಹಾಗೂ ಕೊಡಗು ಜಿಲ್ಲೆಗೆ 'ರೆಡ್ ಅಲರ್ಟ್', ಶಿವಮೊಗ್ಗ ಹಾಗೂ ಚಿಕ್ಕಮಗಳೂರಿಗೆ 'ಆರೆಂಜ್ ಅಲರ್ಟ್' ಎಚ್ಚರಿಕೆ ಮುಂದುವರೆಸಲಾಗಿದೆ. ಮೈಸೂರು, ಮಂಡ್ಯ, ಹಾಸನ, ಹಾವೇರಿ, ಗದಗ, ಧಾರವಾಡ, ಬೀದರ್ ಮತ್ತು ಬೆಳಗಾವಿ ಜಿಲ್ಲೆಗಳಿಗೆ 'ಯಲ್ಲೋ' ಅಲರ್ಟ್‌ ಘೋಷಣೆ ಮಾಡಲಾಗಿದೆ.

ಬೆಂಗಳೂರು(ಜೂ.23):  ಮುಂದಿನ ಮೂರು ದಿನ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ ಅತೀ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 'ರೆಡ್ ಅಲರ್ಟ್' ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು(ಜೂ.23)ರ ಭಾನುವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಕೊಡಗು ಜಿಲ್ಲೆಯಲ್ಲಿ 20 ಸೆಂ.ಮೀ ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. 

ಉಳಿದಂತೆ ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗೆ 'ಆರೆಂಜ್ ಅಲರ್ಟ್', ಮೈಸೂರು, ಬೀದರ್ ಕಲಬುರಗಿ ಜಿಲ್ಲೆಗೆ 'ಯಲ್ಲೋ ಅಲರ್ಟ್' ಘೋಷಿಸಲಾಗಿದೆ. 

Latest Videos

undefined

ಜೂ.24ಕ್ಕೆ 8 ಜಿಲ್ಲೆಗಳಲ್ಲಿ ಭಾರೀ ಮಳೆ: ರೆಡ್‌ ಅಲರ್ಟ್‌ ಘೋಷಣೆ

click me!