ರಾಜ್ಯದಲ್ಲಿ ಡೆಂಘೀ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಶುರುವಾಗಿದ್ದು, ಶಿವಮೊಗ್ಗದಲ್ಲಿ ವೃದ್ಧ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆರೋಗ್ಯ ಇಲಾಖೆಯು ಮಾರ್ಗಸೂಚಿ ಬಿಡುಗಡೆ ಮಾಡಿ ಎಚ್ಚರ ವಹಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಬೆಂಗಳೂರು (ಜು.08): ರಾಜ್ಯದಲ್ಲಿ ಡೆಂಘೀ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಶುರುವಾಗಿದ್ದು, ಶಿವಮೊಗ್ಗದಲ್ಲಿ ವೃದ್ಧ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಆರೋಗ್ಯ ಇಲಾಖೆಯು ಮಾರ್ಗಸೂಚಿ ಬಿಡುಗಡೆ ಮಾಡಿ ಎಚ್ಚರ ವಹಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಡೆಂಘೀ ರೀತಿಯಲ್ಲೇ ಸೋಂಕಿತ ಈಡಿಸ್ ಸೊಳ್ಳೆ ಕಚ್ಚುವುದರಿಂದ ಝೀಕಾ ವೈರಸ್ ಹರಡುತ್ತದೆ. ಸೋಂಕು ಕಾಣಿಸಿಕೊಂಡ ತಕ್ಷಣ ಎಚ್ಚೆತ್ತು ಚಿಕಿತ್ಸೆ ಪಡೆಯುವ ಸಲುವಾಗಿ ರೋಗದ ಗುಣಲಕ್ಷಣ, ಸೋಂಕು ಉಂಟಾದರೆ ತೆಗೆದುಕೊಳ್ಳಬೇಕಿರುವ ಪರಿಹಾರ ಕ್ರಮ, ಸೊಳ್ಳೆ ನಿಯಂತ್ರಣ ಮಾಡಲು ಮಾಡಬೇಕಿರುವ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಝೀಕಾ ವೈರಸ್ ಗುಣಲಕ್ಷಣಗಳು: ಝೀಕಾ ಸೋಂಕು ಉಂಟಾದರೆ ಸಾಮಾನ್ಯವಾಗಿ ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ದದ್ದುಗಳು ಉಂಟಾಗುವುದು ಆಗುತ್ತದೆ. ಜತೆಗೆ ಕೀಲು ಮತ್ತು ಸ್ನಾಯುಗಳಲ್ಲಿ ನೋವು ಉಂಟಾಗುತ್ತದೆ. ಇನ್ನು ಬಹುತೇಕರಲ್ಲಿ ಝೀಕಾ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಸಾಮಾನ್ಯವಾಗಿ ರೋಗದ ಲಕ್ಷಣ ಕಾಣಿಸಿಕೊಂಡರೆ 2 ರಿಂದ 7 ದಿನಗಳವರೆಗೆ ಇರುತ್ತದೆ. ಗರ್ಭಾವಸ್ಥೆಯಲ್ಲಿ ತಾಯಿಯಲ್ಲಿ ಝೀಕಾ ಸೋಂಕು ಕಾಣಿಸಿಕೊಂಡರೆ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ (ಮೈಕ್ರೋಸೆಫಾಲಿ ) ಬೆಳವಣಿಗೆ ದೋಷ ಕಂಡು ಬರುವ ಸಾಧ್ಯತೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
undefined
ನಿರ್ದಿಷ್ಟ ಚಿಕಿತ್ಸೆಯಿಲ್ಲ: ಝೀಕಾ ವೈರಸ್‌ನ ಸೋಂಕು ಉಂಟಾದರೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ರೋಗ ಲಕ್ಷಣಗಳಿಗೆ ಅನುಗುಣವಾಗಿ ನೀಡಲಾಗು ತದೆ. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥ ಸೇವನೆ, ರೋಗ ಲಕ್ಷಣಗಳಿಗೆ ಅನುಗುಣವಾಗಿ ವೈದ್ಯರ ಸಲಹೆಯಂತೆ ನೀಡುವ ಔಷಧಿ ಪಡೆಯುವ ಜತೆಗೆ ಸಾಕಷ್ಟು ವಿಶ್ರಾಂತಿ ಪಡೆಯಬೇಕು. ಸೋಂಕು ಬೇರೆಯವರಿಗೆ ಹರಡದಂತೆ ಸೊಳ್ಳೆ ಪರದೆ ಉಪಯೋಗಿಸಬೇಕು ಎಂದು ಆರೋಗ್ಯ ಇಲಾಖೆ ಸಲಹೆ ನೀಡಿದೆ.
ಗ್ರಾಮ ಪಂಚಾಯತಿಗಳಿಗೆ ರಾಜ್ಯ ಸರ್ಕಾರ ಡೆಂಘೀ ಅಲರ್ಟ್: ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
ಸೊಳ್ಳೆಗಳ ಉತ್ಪತ್ತಿ ನಿಯಂತ್ರಿಸಿ: ಈಡಿಸ್ ಸೊಳ್ಳೆಗಳು ಕಚ್ಚುವುದರಿಂದ ಸೋಂಕು ಉಂಟಾಗುತ್ತದೆ. ಹೀಗಾಗಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸಬೇಕು. ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಛವಾಗಿಡ ಬೇಕು. ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಛಗೊಳಿಸಬೇಕು ಹಾಗೂ ಮುಚ್ಚಳದಿಂದ ಮುಚ್ಚಬೇಕು. ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಸೊಳ್ಳೆ ಪರದೆ, ಸೊಳ್ಳೆ ನಿರೋಧಕಗಳನ್ನು ಉಪಯೋಗಿಸಬೇಕು ಎಂದು ಹೇಳಲಾಗಿದೆ.