ಈ ಸಾಲಿನ ಮುಂಗಾರು ಬೆಳೆ ವಿಮೆಗೆ ನೋಂದಣಿ ಆರಂಭ

By Kannadaprabha NewsFirst Published Jul 23, 2023, 2:00 AM IST
Highlights

ರೈತರು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಶೇ.2ರಷ್ಟು ವಿಮಾ ಪ್ರೀಮಿಯಂ ಮೊತ್ತವನ್ನು ಮುಂಗಾರು ಬೆಳೆಗಳಿಗೆ ಪಾವತಿಸಬೇಕಾಗಿರುತ್ತದೆ. ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ಶೇ.5ರಷ್ಟು ಪ್ರೀಮಿಯಂ ಇದೆ.

ಬೆಂಗಳೂರು(ಜು.23):  ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್‌ ಬಿಮಾ (ವಿಮಾ) ಯೋಜನೆಯಡಿ 2023ರ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ 36 ಆಹಾರ, ಎಣ್ಣೆ ಕಾಳು, ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ತಾಲೂಕಿನ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ.

ಜಂಟಿ ಖಾತೆದಾರರು ಫ್ರೂಟ್ಸ್‌ ತಂತ್ರಾಂಶದಲ್ಲಿ ದಾಖಲಾದ ವಿಸ್ತೀರ್ಣಕ್ಕೆ ಅನುಗುಣವಾಗಿ ಬೆಳೆ ವಿಮೆ ನೋಂದಣಿ ಮಾಡಲು ಅವಕಾಶವಿರುತ್ತದೆ. ಫ್ರೂಟ್ಸ್‌ ಐಡಿಗೆ ಸಂಬಂಧಿಸಿದ ಸೇರ್ಪಡೆ ಅಥವಾ ಮಾರ್ಪಾಡಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತೋಟಗಾರಿಕೆ ಇಲಾಖೆಗಳಿಗೆ ಭೇಟಿ ನೀಡಬೇಕು. ಈ ಯೋಜನೆಯಡಿ ವಿವಿಧ ಬೆಳೆಗಳಿಗೆ ನೋಂದಾಯಿಸಲು ಬೇರೆ ಬೇರೆ ಕೊನೆಯ ದಿನ ನಿಗದಿ ಮಾಡಲಾಗಿದೆ. ಕೆಲವು ಬೆಳೆಗಳಿಗೆ ಜು.31 ಮತ್ತು ಇನ್ನೂ ಕೆಲವು ಬೆಳೆಗಳಿಗೆ ಆ.16 ಕೊನೆಯ ದಿನವಾಗಿದೆ. ಜಿಲ್ಲಾ, ಬೆಳೆವಾರು ಕೊನೆಯ ದಿನಾಂಕದ ವಿವರಗಳನ್ನು ತಮ್ಮ ಜಿಲ್ಲೆಗಳಲ್ಲಿ ಪಡೆಯಬಹುದು.

ಬಿತ್ತನೆ ವಿಫಲವಾದರೆ ಶೇ.25ರಷ್ಟು ವಿಮೆ ಪರಿಹಾರ

ರೈತರು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ ಶೇ.2ರಷ್ಟು ವಿಮಾ ಪ್ರೀಮಿಯಂ ಮೊತ್ತವನ್ನು ಮುಂಗಾರು ಬೆಳೆಗಳಿಗೆ ಪಾವತಿಸಬೇಕಾಗಿರುತ್ತದೆ. ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ಶೇ.5ರಷ್ಟು ಪ್ರೀಮಿಯಂ ಇದೆ.
ಹೆಚ್ಚಿನ ಮಾಹಿತಿಗಾಗಿ ಸಮೀಪದ ಹೋಬಳಿ ರೈತ ಸಂಪರ್ಕ ಕೇಂದ್ರ, ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕರ ಕಚೇರಿ ಅಥವಾ ಬ್ಯಾಂಕುಗಳನ್ನು ಸಂಪರ್ಕಿಸಬಹುದು. ಬೆಳೆ ವಿಮೆ ನೋಂದಣಿಗಾಗಿ ಹಾಗೂ ಸಂಪೂರ್ಣ ಮಾಹಿತಿಗಾಗಿ ಜಾಲತಾಣಕ್ಕೆ ಭೇಟಿ ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

click me!